ಬಿಜೆಪಿ ಸಂಘಟನೆ ಕಾರ್ಯಕರ್ತರಿಂದಲೇ ಹೊರತು ಸ್ವಯಂಘೋಷಿತ ‘ಪೂಜ್ಯ’ ರಿಂದಲ್ಲ; ಯತ್ನಾಳ್ ವಾಗ್ದಾಳಿ

RSS ban is a pipe dream; Yatnal

ಬೆಂಗಳೂರು: ಕೆಲ ರಾಜಕೀಯ ಪಟ್ಟಭದ್ರರು, ಅಡ್ಜಸ್ಟ್ಮೆಂಟ್ ರಾಜಕಾರಣದ ಹರಿಕಾರರಿಂದ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ Basana gouda Patila Yatnal) ಹೇಳಿದ್ದಾರೆ.

ಬಿಜೆಪಿಯಿಂದ 6 ವರ್ಷಗಳ ಉಚ್ಚಾಟನೆ ಬಳಿಕ ಇಂದು ಟ್ವಿಟ್ ಮಾಡಿರುವ ಅವರು, ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈ ಕಮಾಂಡ್ ಮಾಡದೆ ಇರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಅವನತಿಗೆ ಕಾರಣವಾಗಿದೆ.

ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ.

ಪಕ್ಷದ ವಿರುದ್ದ ಬಹಿರಂಗವಾಗಿ ಮಾತನಾಡಿ ಹಾಗೂ ಆಡಳಿತಾರೂಢ ಪಕ್ಷದ ಸಭೆಯಲ್ಲಿ ಭಾಗವಹಿಸುತ್ತಿದ್ದ ಶಾಸಕರ ಉಚ್ಚಾಟನೆ ಮಾಡದೆ, ಉತ್ತರ ಕರ್ನಾಟಕದ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಟೊಂಕಕಟ್ಟಿ ಕೆಲಸ ಮಾಡಿದ ನನ್ನಂತವರಿಗೆ ಉಚ್ಚಾಟನೆ ಮಾಡುವುದು ಪಕ್ಷದ ದ್ವಂದ್ವ ನೀತಿಗಳಿಗೆ ಹಿಡಿದ ಕೈಗನ್ನಡಿ.

ಕಲ್ಯಾಣ ಕರ್ನಾಟಕದಲ್ಲಿ ಸಧೃಡವಾಗಿದ್ದ ಪಕ್ಷ ಲೋಕ ಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ್ದು ಯಾರ ‘ಅಡ್ಜಸ್ಟ್ಮೆಂಟ್ ರಾಜಕಾರಣದಿಂದ’ ಎಂದು ಪಕ್ಷದ ಪ್ರಮುಖರು ವಿಶ್ಲೇಷಿಸಲಿ.

ಬಿ.ಬಿ.ಶಿವಪ್ಪ, ಮಲ್ಲಿಕಾರ್ಜುನಪ್ಪ, ಡಾ ವಿ.ಎಸ್.ಆಚಾರ್ಯರು ಸೇರಿದಂತೆ ಪಕ್ಷದ ಅನೇಕ ಧುರೀಣರು, ಸಾವಿರಾರು ಕಾರ್ಯಕರ್ತರು ಪಕ್ಷವನ್ನು ಸಂಘಟಿಸಿದ ಪರಿಣಾಮದಿಂದಲೇ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದ್ದು.

ಬಿಡಿಗಾಸಿಲ್ಲದೇ, ಕಾರ್ಯಕರ್ತರ ಓಡಾಟ, ಉಪಹಾರಕ್ಕೂ ಹಣವಿಲ್ಲದಿರುವ ಕಾಲಘಟ್ಟದಲ್ಲಿ ದಿವಂಗತ ಮಲ್ಲಿಕಾರ್ಜುನಪ್ಪನವರು ತಮ್ಮ ಸ್ವಂತ ಸಂಪನ್ಮೂಲದಿಂದ ಪಕ್ಷವನ್ನು ಮುನ್ನೆಡೆಸಿ ಕಾರ್ಯಕರ್ತರ ಮನೋಬಲವನ್ನು ಹೆಚ್ಚಿಸಿ ಸಂಘಟನೆಗೆ ಕಾರಣವಾದರು.

ಮಾತು ಕಡಿಮೆಯಾದರೂ ತಮ್ಮ ಕೆಲಸದಿಂದ ಕರಾವಳಿಯಲ್ಲಿ ಪಕ್ಷವನ್ನು ಸಂಘಟಿಸಿದ್ದು ಪಕ್ಷ ಮರೆಯಲಾಗದ ಮಾಣಿಕ್ಯ ಡಾ. ವಿ.ಎಸ್.ಆಚಾರ್ಯರು. ಆಯಕಟ್ಟಿನ ಸ್ಥಾನದಲ್ಲಿದ್ದರೂ ಆಚಾರ್ಯರ ಕುಟುಂಬದವರು ಯಾರೂ ಸಹ ರಾಜಕಾರಣಕ್ಕೆ ಬರಲಿಲ್ಲ ಎಂಬುದು ಹಲವರಿಗೆ ಗೊತ್ತಿಲ್ಲ.

ಹಿಂದುತ್ವವಾದ ಬಗ್ಗೆ ರಾಜಿ ಮಾಡಿಕೊಳ್ಳದೆ, ಕುಟುಂಬ ರಾಜಕಾರಣದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದ ಈಶ್ವರಪ್ಪನವರನ್ನು ಹೊರಗಿಟ್ಟರು. ನಿಸ್ವಾರ್ಥ ಕಾರ್ಯಕರ್ತರು, ತನು-ಮನ-ಧನದಿಂದ ದುಡಿದ ಮುಖಂಡರಿಂದ ಪಕ್ಷದ ಸಂಘಟನೆಯಾಯಿತೇ ಹೊರತು ಸ್ವಯಂಘೋಷಿತ ‘ಪೂಜ್ಯ’ ರಿಂದಲ್ಲ.

ರಾಜ್ಯದಲ್ಲಿ ಪ್ರ ಪ್ರಥಮ ಬಾರಿಗೆ ವಕ್ಫ್ ಹೋರಾಟಕ್ಕೆ ಧರಣಿ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದು ನಾವೇ, ವಾಲ್ಮೀಕಿ ಹಗರಣ, ದಲಿತರಿಗೆ SCSP/TSP ಅನುದಾನದ ದುರ್ಬಳಕೆಯನ್ನು ಖಂಡಿಸಿದ್ದು, ಹೋರಾಟ ರೂಪಿಸಿದ್ದು, ವಕ್ಫ್ ವಿರುದ್ಧ ನಾವು ಮಾಡಿದ್ದ ಮಾಹಿತಿ ಸಂಗ್ರಹಕ್ಕೆ ಜೆ.ಪಿ.ಸಿ ಅಧ್ಯಕ್ಷ ಜಗದಂಬಿಕಾ ಪಾಲ್ ಅವರು ಪ್ರಶಂಸಿಸಿದ್ದರು.

ಪ್ರತಿ ಬಾರಿ ಅಧಿವೇಶನ ನಡೆದಾಗಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಮಲತಾಯಿ ಧೋರಣೆಯನ್ನು, ಕೃಷ್ಣ ಯೋಜನೆಯ ವಿಳಂಬದ ಬಗ್ಗೆ ಧ್ವನಿ ಎತ್ತಿದ್ದು ನಾವೇ, ಕರ್ನಾಟಕ ಲೋಕ ಸೇವಾ ಆಯೋಗದಲ್ಲಿರುವ ಭ್ರಷ್ಟರನ್ನು ಕಿತ್ತೊಗೆಯಲು ಸ್ಪರ್ಧಾರ್ಥಿಗಳ ಜೊತೆಗೆ ನಿಂತಿದ್ದು ನಾವೇ.

ಬಾಣಂತಿಯರ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದು ನಾನೇ. ಪಕ್ಷದಲ್ಲಿ ಆಗಬೇಕಾದ ಕೆಲ ಬದಲಾವಣೆಗಳು, ಸುಧಾರಣೆಗಳು ಸೂಚಿಸಿದಕ್ಕೆ ನಮ್ಮ ನಿಲುವು ಕೆಲವರಿಗೆ ‘ಅಪಥ್ಯ’ ವಾಗಿದೆ.

ಅಡ್ಜಸ್ಟ್ಮೆಂಟ್ ರಾಜಕಾರಣ ನಿಲ್ಲದಿದ್ದರೆ ಪಕ್ಷ ಮಕಾಡೆ ಮಲಗುವುದು ಖಚಿತ. ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಿ, ನಿಜವಾದ ಜನ ಪರ ಕಾಳಜಿ ಇರುವ ನಾಯಕರಿಗೆ ಪಕ್ಷ ಅವಕಾಶ ನೀಡಬೇಕು. ಕಾಟಾಚಾರಕ್ಕೆ ಸರ್ಕಾರದ ನೀತಿಗಳನ್ನು ಖಂಡಿಸಿ ಸಂಜೆ ವೇಳೆ ಅವರ ಮನೆಯಲ್ಲಿ ಭೋಜನ ಕೂಟದಲ್ಲಿ ಭಾಗವಹಿಸುವ ನಾಯಕರ ಅವಶ್ಯ ಪಕ್ಷಕ್ಕಿಲ್ಲ.

Nation First, Party next, Self last ಎಂಬ ತತ್ವದಡಿ ಕೆಲಸ ಮಾಡುವ ನನ್ನ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]