BJP's overnight sit-in begins at Freedom Park

ಫ್ರೀಡಂ ಪಾರ್ಕಿನಲ್ಲಿ ಬಿಜೆಪಿಯ ಅಹೋರಾತ್ರಿ ಧರಣಿ ಆರಂಭ

ಬೆಂಗಳೂರು: ರಾಜ್ಯದಲ್ಲಿ ಬೆಲೆ ಏರಿಕೆ ಗ್ಯಾರಂಟಿ ಕೊಡುವ ಕಾಂಗ್ರೆಸ್ ಪಕ್ಷದ ಸರಕಾರ ಅಧಿಕಾರದಲ್ಲಿದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (B.Y.Vijayendra) ಅವರು ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಬಿಜೆಪಿಯ ಅಹೋರಾತ್ರಿ ಧರಣಿಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ನುಡಿದಂತೆ ನಡೆದ ಸರಕಾರ ಎಂದು ಜಾಹೀರಾತು ನೀಡುತ್ತಿದ್ದಾರೆ. ಇದು ಮನುಷ್ಯತ್ವ ಇರುವ ಸರಕಾರ ಅಲ್ಲ; ಅಧಿಕಾರಕ್ಕೆ ಬಂದ ಕೇವಲ 24 ಗಂಟೆಗಳಲ್ಲಿ ಗ್ಯಾರಂಟಿ ಅನುಷ್ಠಾನ ಮಾಡುವುದಾಗಿ ಹೇಳಿದ್ದರು. ಆದರೆ, ತಿಂಗಳುಗಳೇ ಕಳೆದರೂ ಗ್ಯಾರಂಟಿಗಳು ಸರಿಯಾಗಿ ಅನುಷ್ಠಾನ ಆಗಿಲ್ಲ ಎಂದು ಆಕ್ಷೇಪಿಸಿದರು.

ಕುರ್ಚಿಯ ಅಭದ್ರತೆ ಕಾಡುತ್ತಿದ್ದರೆ..
ಮುಖ್ಯಮಂತ್ರಿಗಳೇ ದಯವಿಟ್ಟು ನಿಮ್ಮ ಎ.ಸಿ. ರೂಮಿನಿಂದ ಹೊರಕ್ಕೆ ಬನ್ನಿ. ನೀವು ಬೆಂಗಳೂರಿನ ಸಿಎಂ ಅಲ್ಲ; ರಾಯಚೂರು, ಕೊಪ್ಪಳ, ಬೆಳಗಾವಿ ಸೇರಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಸಚಿವರ ಜೊತೆ ಪ್ರವಾಸ ಮಾಡಿ ಎಂದು ವಿಜಯೇಂದ್ರ ಅವರು ಆಗ್ರಹಿಸಿದರು.

ಸಿದ್ದರಾಮಯ್ಯನವರೇ, ಹಿಂದೆ ರಾಜ ಮಹಾರಾಜರು ಮಾರುವೇಷದಲ್ಲಿ ತೆರಳಿ ಪ್ರಜೆಗಳ ಯೋಗಕ್ಷೇಮ ವಿಚಾರಿಸುತ್ತಿದ್ದರು. ಬಳಿಕ ಜನರಿಗೆ ಅನುಕೂಲ ಆಗುವ ಯೋಜನೆ ಜಾರಿಗೊಳಿಸುತ್ತಿದ್ದರು. ಮಹಾರಾಜರ ಸ್ಥಾನದಲ್ಲಿರುವ ನೀವು ಕುರ್ಚಿಯ ಅಭದ್ರತೆ ಕಾಡುತ್ತಿದ್ದರೆ ಡಿ.ಕೆ.ಶಿವಕುಮಾರರನ್ನೂ ಜೊತೆಗೇ ಕರೆದುಕೊಂಡು ಹೋಗಿ ಎಂದು ವ್ಯಂಗ್ಯವಾಗಿ ತಿಳಿಸಿದರು.

ಬಿತ್ತನೆ ಬೀಜದ ದರ ಹೆಚ್ಚಾಗಿದೆ. ಕಳೆದ 20 ತಿಂಗಳ ಆಡಳಿತದಲ್ಲಿ ಜನರು ಖುಷಿ ಆಗಿದ್ದಾರಾ ಎಂಬ ಬಗ್ಗೆ ಅರಿತುಕೊಳ್ಳಲು ರಾಜ್ಯ ಪ್ರವಾಸ ಮಾಡಿ ಎಂದು ಆಗ್ರಹಿಸಿದರು.

ಮಹಿಳೆಯರಿಗೆ 2 ಸಾವಿರ, ಪುಕ್ಕಟೆ ವಿದ್ಯುತ್ ಸೇರಿ ವಿವಿಧ ಯೋಜನೆಗಳ ಕುರಿತು ಭಾಷಣ ಮಾಡುತ್ತಾರೆ. ಆದರೆ, ಅವುಗಳು ಸರಿಯಾಗಿ ಅನುಷ್ಠಾನ ಆಗಿಲ್ಲ ಎಂದು ದೂರಿದರು. ಇದು ಜನರ ಮೇಲೆ ಬೆಲೆ ಏರಿಕೆಯ ಬರೆ ಎಳೆಯುವ ಸರಕಾರ ಎಂದು ಆರೋಪಿಸಿದರು.

ಬಡವರು, ರೈತರು, ಜನಸಾಮಾನ್ಯರು ಇವತ್ತು ನೆಮ್ಮದಿಯಿಂದ ಬದುಕಲು ಸಾಧ್ಯವಿಲ್ಲದ ದುಸ್ಥಿತಿ ಬಂದಿದೆ. ಪೆಟ್ರೋಲ್, ಡೀಸೆಲ್, ಹಾಲಿನ ದರ, ಸರಕಾರಿ ಆಸ್ಪತ್ರೆಗಳ ಶುಲ್ಕ ಹೆಚ್ಚಿಸಿದ್ದಾರೆ ಎಂದು ಟೀಕಿಸಿದರು. ನಿನ್ನೆಯಷ್ಟೇ ಡೀಸೆಲ್ ಬೆಲೆ 2 ರೂ. ಹೆಚ್ಚಿಸಿದ್ದಾರೆ ಎಂದು ಟೀಕಿಸಿದರು. ಇದರಿಂದ ಸರಕುಗಳ ದರವೂ ಹೆಚ್ಚಾಗಲಿದೆ ಎಂದು ತಿಳಿಸಿದರು.

ಏಪ್ರಿಲ್ 7ರಿಂದ ಜನಾಕ್ರೋಶ ಯಾತ್ರೆ

ಏಪ್ರಿಲ್ 7ರಿಂದ ಜನಾಕ್ರೋಶ ಯಾತ್ರೆ ಪ್ರಾರಂಭಿಸುತ್ತೇವೆ. ಕೇಂದ್ರದ ಸಚಿವ ಪ್ರಹ್ಲಾದ ಜೋಶಿಯವರು ಉದ್ಘಾಟಿಸುತ್ತಾರೆ ಎಂದು ವಿಜಯೇಂದ್ರ ಅವರು ತಿಳಿಸಿದರು.

ಸರಕಾರಿ ಕಾಮಗಾರಿಗಳಲ್ಲಿ ಮುಸಲ್ಮಾನರಿಗೆ ಕಾನೂನುಬಾಹಿರವಾಗಿ ಶೇ 4 ಮೀಸಲಾತಿ ನೀಡಿದ್ದಾರೆ. ಮತ್ತೊಂದು ಕಡೆ ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಎಸ್‍ಇಪಿ, ಟಿಎಸ್‍ಪಿ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಇನ್ನೊಂದು ಕಡೆ ಬೆಲೆ ಏರಿಕೆ ನಿರಂತರವಾಗಿದೆ. ಇವೆಲ್ಲವನ್ನೂ ವಿರೋಧಿಸಿ ಜನಾಕ್ರೋಶ ಯಾತ್ರೆ ನಡೆಸಲಿದ್ದೇವೆ ಎಂದು ತಿಳಿಸಿದರು.

ಭ್ರಷ್ಟ ಕಾಂಗ್ರೆಸ್ ಸರಕಾರದ ಬೆಲೆ ಏರಿಕೆಯ ವಿರುದ್ಧ ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿರುವ ಹೋರಾಟ ಇದು ಎಂದು ವಿವರಿಸಿದರು. ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬರುವ ಮೊದಲು ಸಾಕಷ್ಟು ಭರವಸೆಗಳನ್ನು ನಾಡಿನ ಜನತೆಗೆ ನೀಡಿತ್ತು. ಜನರ ಕಣ್ಣಿಗೆ ಮಣ್ಣೆರಚಿ ಈ ಸರಕಾರ ಅಧಿಕಾರಕ್ಕೆ ಬಂದಿದೆ ಎಂದು ಟೀಕಿಸಿದರು.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!