ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ದೇವರ ದಾಸಿಮಯ್ಯ’ (Devara Dasimayya) ಜಯಂತಿಯನ್ನು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು.
ನೂತನ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ‘ದೇವರ ದಾಸಿಮಯ್ಯ’ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.
ವೃತ್ತಿಯಲ್ಲಿ ನೇಯ್ಗೆಕಾರನಾದ ದಾಸಿಮಯ್ಯನವರು (Devara Dasimayya) ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ಶಿವನ ಅಪಾರ ಭಕ್ತರಾಗಿದ್ದು, ರಾಮನಾಥ ಇವರ ಅಂಕಿತನಾಮ.
ಶಿವ ಜಗತ್ತನ್ನೇ ವ್ಯಾಪಿಸಿಕೊಂಡಂತೆ, ಜಗತ್ತೇ ಶಿವನ ರೂಪ ಎಂಬ ನಿಲುವಿನೊಂದಿಗೆ, “ಇಳೆ ನಿಮ್ಮ ದಾನ, ಬೆಳೆ ನಿಮ್ಮ ದಾನ, ಸುಳಿದು ಸೂಸುವ ಗಾಳಿ ನಿಮ್ಮ ದಾನವಯ್ಯ ಎಂದೆನ್ನುವ ದಾಸಿಮಯ್ಯನಲ್ಲಿ ಈ ಲೋಕವನ್ನು ನೋಡುವ ಕ್ರಮ ಹೊಸತನದಿಂದ ಕೂಡಿದೆ. ಅವರ ವಚನಗಳು ಇಂದಿಗೂ ಪ್ರಸ್ತುತ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ರಾಜೀವ್ ಸುಲೋಚನಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತ ಲಕ್ಷ್ಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.