Yatnal's expulsion; turmoil in BJP.. Yediyurappa's entry

ಯತ್ನಾಳ್ ಉಚ್ಚಾಟನೆ; ಬಿಜೆಪಿಯಲ್ಲಿ ತಳಮಳ.. ಯಡಿಯೂರಪ್ಪ ಎಂಟ್ರಿ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಉಚ್ಚಾಟನೆ ಬಳಿಕ ರಾಜ್ಯ ಬಿಜೆಪಿಯಲ್ಲಿ (BJP) ಅಲ್ಲೋಲಕಲ್ಲೋಲ ಉಂಟಾಗಿದೆ‌. ಈ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕರೆ ನೀಡಿದ್ದಾರೆ. ಆದರೆ ಎಲ್ಲಿ ಯತ್ನಾಳ್ ಪ್ರಕರಣ ಪ್ರತಿಭಟನೆ ವೇಳೆ ವಿಜಯೇಂದ್ರಗೆ ಮುಜುಗರಕ್ಕೆ ಕಾರಣವಾಗಬಹುದು ಎಂದು ಎಚ್ಚೆತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಫೀಲ್ಡಿಗಿಳಿಯಲು ನಿರ್ಣಯಿಸಿದ್ದಾರೆ.

ರಾಜ್ಯ ಸರಕಾರವು ಜನವಿರೋಧಿ ಬೆಲೆ ಏರಿಕೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ಬಿಜೆಪಿ ನಾಳೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲಿದ್ದು, ನಾನು ಅದರಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಪ್ರಕಟಿಸಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಉಸಿರು ಕಟ್ಟುವ ಪರಿಸ್ಥಿತಿ ಬಂದಿದೆ ಎಂದಿದ್ದಾರೆ.

ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಪ್ರಾರಂಭ ಮಾಡುತ್ತಿದ್ದೇವೆ. ನೋವು ಅನುಭವಿಸುತ್ತಿರುವ ಎಲ್ಲರೂ ಪಕ್ಷಭೇದ ಮರೆತು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಹಾಗೂ ಹೋರಾಟ ಯಶಸ್ವಿ ಮಾಡುವಂತೆ ವಿನಂತಿಸಿದರು.
ಸಿಎಂ ಕುರ್ಚಿಗಾಗಿ ಕಾಂಗ್ರೆಸ್ಸಿನಲ್ಲಿ ಮುಸುಕಿನ ಗುದ್ದಾಟ ನಡೆದಿದೆ.

ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಅವರಿಗೆ ಮುಖ್ಯವೇ ಹೊರತು ಜನರು ಪ್ರಮುಖರಲ್ಲ ಎಂದು ಟೀಕಿಸಿದರು. ಬಿಜೆಪಿಯ ಹೋರಾಟ ಇನ್ನೂ ಅನೇಕ ದಿನ ನಡೆಯಲಿದೆ. ಮೈಸೂರಿನಲ್ಲಿ ನಡೆಯುವ ಹೋರಾಟದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರೂ ಭಾಗವಹಿಸುತ್ತಾರೆ ಎಂದು ವಿವರಿಸಿದರು.

ಮಾಧ್ಯಮ ಸ್ನೇಹಿತರಿಗೂ ಬೆಲೆ ಏರಿಕೆ ಬಿಸಿ ತಟ್ಟಿದೆ ಎಂದು ಭಾವಿಸುತ್ತೇನೆ. ಇಂಥ ಸಂದರ್ಭದಲ್ಲಿ ಮಾಧ್ಯಮ ಸ್ನೇಹಿತರು ನಮ್ಮ ಹೋರಾಟದಲ್ಲಿ ಗಟ್ಟಿಯಾಗಿ ನಿಂತಾಗ ಈ ಸರಕಾರ ಒಂದು ಹೆಜ್ಜೆ ಹಿಂದಿಡಬಹುದು ಎಂಬ ನಂಬಿಕೆ ಇದೆ ಎಂದು ತಿಳಿಸಿದರು.

ಆದರೆ ಯತ್ನಾಳ್ ಅವರ ಉಚ್ಚಾಟನೆ ವಿಚಾರವಾಗಿ ಯಾವುದೇ ಮಾತನಾಡುವುದಿಲ್ಲ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು.

ಅಜೀರ್ಣ ಆಗುವಷ್ಟು ಬಹುಮತವನ್ನು ಜನರು ಕಾಂಗ್ರೆಸ್ ಸರಕಾರಕ್ಕೆ ಕೊಟ್ಟಾಗ ಒಂದು ರೀತಿ ತುಘಲಕ್ ದರ್ಬಾರ್ ನಡೆಸಿ, ಜನಹಿತವನ್ನು ಮರೆತು, ಸಾಮಾನ್ಯ ಜನರು ಬದುಕಲಾಗದಷ್ಟು, ಉಸಿರು ಕಟ್ಟುವ ಪರಿಸ್ಥಿತಿಯನ್ನು ತಂದದ್ದು ಸಿದ್ದರಾಮಯ್ಯ ಸರಕಾರದ ಸಾಧನೆ ಎಂದು ಅವರು ಟೀಕಿಸಿದರು.

ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ 4 ಮೀಸಲಾತಿ ನೀಡುವ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯನ್ನು ಆಕ್ಷೇಪಿಸಿದ ಅವರು, ಉಳಿದ ಹಿಂದೂಗಳೇನು ಅಪರಾಧ ಮಾಡಿದ್ದಾರೆ ಎಂದು ಕೇಳಿದರು.

ನಾವು ಮುಸ್ಲಿಮರ ವಿರೋಧಿಗಳಲ್ಲ ಎಂದು ತಿಳಿಸಿದರು. ಎಲ್ಲರನ್ನೂ ಸರಿ ಸಮಾನರಾಗಿ ನೋಡುವುದು ರಾಜ್ಯದ ಮುಖ್ಯಮಂತ್ರಿಯ ಕರ್ತವ್ಯ. ಅದನ್ನು ಮಾಡದೇ ಹಿಂದೂಗಳಿಗೆ ದ್ರೋಹ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.

ಪ್ರತಿ ತಿಂಗಳು ಒಂದಲ್ಲ ಒಂದು ರೀತಿ ಬೆಲೆ ಹೆಚ್ಚಿಸುತ್ತಿದ್ದಾರೆ. ಪೆಟ್ರೋಲ್, ಬಸ್ ಪ್ರಯಾಣದರ ಹೆಚ್ಚಿಸಿದ್ದಾರೆ. ಸಾಮಾನ್ಯ ಜನರು ಬಳಸುವ ಹಾಲಿನ ದರವನ್ನು ಇನ್ನೆಂದೂ ಇಲ್ಲದ ರೀತಿಯಲ್ಲಿ ಒಂದೇಬಾರಿಗೆ ಒಂದು ಲೀಟರ್‍ಗೆ 4 ರೂ. ಹೆಚ್ಚಿಸಿದ್ದಾರೆ. ಒಟ್ಟಾರೆಯಾಗಿ ಒಂದೇ ವರ್ಷದಲ್ಲಿ ಹಾಲಿಗೆ ಒಂದು ಲೀಟರಿಗೆ 9 ರೂ. ಹೆಚ್ಚಿಸಿದ್ದಾರೆ ಎಂದು ವಿವರಿಸಿದರು.

ವಿದ್ಯುತ್ ದರವನ್ನು ಪ್ರತಿ ಯೂನಿಟ್‍ಗೆ 36 ಪೈಸೆ ಹೆಚ್ಚಿಸಿದ್ದಾರೆ. ಈ ಸರಕಾರ ಬಂದ ಬಳಿಕ ಎರಡನೇ ಬಾರಿ ವಿದ್ಯುತ್ ದರ ಹೆಚ್ಚಿಸುತ್ತಿದ್ದಾರೆ. ಇದರಿಂದ ಸಣ್ಣ, ಮಧ್ಯಮ ವರ್ಗದ ಜನರು ಜೀವನ ಮಾಡಲು ಸಾಧ್ಯವಿಲ್ಲದೆ ಉಸಿರು ಕಟ್ಟುವ ಪರಿಸ್ಥಿತಿ ಬಂದಿದೆ ಎಂದರು.

ಹಿಂದೆ ರೈತರು ಟ್ರಾನ್ಸ್‍ಫಾರ್ಮರ್ ಹಾಕಿಸಲು 30 ಸಾವಿರ ವೆಚ್ಚ ಆಗುತ್ತಿತ್ತು. ಈಗ 2.5 ಲಕ್ಷ ಏರಿಸಿದ್ದಾರೆ. ಸ್ಟಾಂಪ್ ಡ್ಯೂಟಿ, ಎಸ್.ಆರ್.ವ್ಯಾಲ್ಯೂ, ಗೈಡೆನ್ಸ್ ವ್ಯಾಲ್ಯೂ- ಇವನ್ನು ಶೇ 100ರಿಂದ ಶೇ 1000ದಷ್ಟು ಏರಿಸಿದ್ದಾರೆ. ದಿನಬಳಕೆಯ ಪ್ರತಿ ವಸ್ತುವಿನ ಬೆಲೆಯನ್ನು ಏರಿಸುತ್ತಿರುವ ಕಾಂಗ್ರೆಸ್ ಸರಕಾರ, ಜನರನ್ನು ನೆಮ್ಮದಿಯಿಂದ ಬದುಕಲು ಬಿಡುತ್ತಿಲ್ಲ ಎಂದು ದೂರಿದರು.

ರಾಜಕೀಯ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ: ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="112771"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!