BJP is constantly fighting to convince people: B.Y. Vijayendra

ಜನರಿಗೆ ಮನವರಿಕೆ ಮಾಡಲು ಬಿಜೆಪಿ ನಿರಂತರ ಹೋರಾಟ: ಬಿ.ವೈ.ವಿಜಯೇಂದ್ರ

ಬೆಂಗಳೂರು: ದರಿದ್ರ- ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟ ನಿರಂತರವಾಗಿ ಇರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ಜನರ ವಿಶ್ವಾಸ ಮತ್ತು ಆಶೀರ್ವಾದ ಪಡೆದು ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದೀಗ ಎಲ್ಲವನ್ನೂ ಗಾಳಿಗೆ ತೂರಿ ರೈತರು, ಬಡವರು, ಜನಸಾಮಾನ್ಯರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದರ ಬಗ್ಗೆ ನೋವಿದೆ ಎಂದು ತಿಳಿಸಿದರು.

40 ಶೇಕಡಾ ಸರಕಾರ ಎಂದು ಬಿಜೆಪಿಯನ್ನು ಕರೆದಿದ್ದರು. ಅದಕ್ಕೆ ಪುರಾವೆ ಇಲ್ಲ. ನಾವು ಮುಗ್ಗರಿಸಿದ್ದೂ ಆಗಿದೆ. ಬಿಜೆಪಿ ನಿರಂತರ ಹೋರಾಟ ಮಾಡುವ ಮೂಲಕ ಈ ಸರಕಾರಕ್ಕೆ ತಕ್ಕ ಶಾಸ್ತಿ ಮಾಡಲಿದೆ ಎಂದು ನುಡಿದರು.

ಕಳಚಿ ಬಿದ್ದ ಸಿದ್ದರಾಮಯ್ಯನವರ ಮುಖವಾಡ

ಸಿದ್ದರಾಮಯ್ಯನವರು ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಆನೆ ನಡೆದಿದ್ದೇ ದಾರಿ ಎಂಬಂತೆ ವರ್ತಿಸುತ್ತಿದ್ದಾರೆ. ಸಿದ್ದರಾಮಯ್ಯನವರ ಕಪಟ ಸಮಾಜವಾದಿ ಮುಖವಾಡ ಈ ಅಧಿಕಾರಾವಧಿಯಲ್ಲಿ ಕಳಚಿ ಬಿದ್ದಿದೆ ಎಂದು ವಿಜಯೇಂದ್ರ ಅವರು ವಿವರಿಸಿದರು.

ಹಿಂದೆ ಬಿಜೆಪಿ ಸರಕಾರ ಅತ್ಯುತ್ತಮವಾಗಿ ಕೆಲಸ ಮಾಡಿದ್ದರೂ ಸಹ ಅಂದಿನ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ಸಿಗರು ಸಾಕಷ್ಟು ಅಪಪ್ರಚಾರ ಮಾಡಿದರು. ಜನರ ಒಳಿತಿಗಾಗಿ ಈ ಸರಕಾರ ಬಂದಿಲ್ಲ; ಜನರ ಒಳಿತಿಗಾಗಿ ಅಧಿಕಾರ ಪಡೆದಿದ್ದರೆ ಇಂಥ ದರಿದ್ರ ಸರಕಾರವನ್ನು ಜನತೆ ನೋಡಬೇಕಿರಲಿಲ್ಲ ಎಂದು ವಿಶ್ಲೇಷಿಸಿದರು.

ಹೈಕಮಾಂಡ್ ಅಥವಾ ಗಾಂಧಿ ಕುಟುಂಬಕ್ಕೆ ಕರ್ನಾಟಕ ರಾಜ್ಯವನ್ನು ಅಡ ಇಡಲು ಮತ್ತು ಚುನಾವಣೆ ವೇಳೆ ಎಟಿಎಂ ಆಗಿ ಪರಿವರ್ತಿಸಲು ಕಾಂಗ್ರೆಸ್ಸಿಗೆ ಇಲ್ಲಿ ಸರಕಾರ ಬೇಕಿದೆ ಎಂದು ಟೀಕಿಸಿದರು.

ಹಿಂದಿನ ಬಿಜೆಪಿ ಸರಕಾರದ ಮೇಲಿನ ಅಪಪ್ರಚಾರವನ್ನು ನಾವು ಸರಿಯಾಗಿ ನಿಭಾಯಿಸಿಲ್ಲ; ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಅದರ ಪರಿಣಾಮವಾಗಿ ವಿಪಕ್ಷದಲ್ಲಿದ್ದೇವೆ. ಅದರ ಬಗ್ಗೆ ನೋವಿಲ್ಲ ಎಂದು ತಿಳಿಸಿದರು.

ಜನಜಾಗೃತಿ ಮೂಡಿಸಲು ಜನಾಕ್ರೋಶ ಯಾತ್ರೆ

ರಾಜ್ಯದಲ್ಲಿ ತೀವ್ರ ಬೆಲೆ ಏರಿಕೆ ಮತ್ತು ಸರಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ 4 ಮೀಸಲಾತಿ, ಪರಿಶಿಷ್ಟ ಜಾತಿ, ಜನಾಂಗದ ಅಭ್ಯುದಯಕ್ಕೆ ಮೀಸಲಿಟ್ಟ ಎಸ್‍ಇಪಿ, ಟಿಎಸ್‍ಪಿ ಹಣ ದುರ್ಬಳಕೆ- ಇವೆಲ್ಲವನ್ನೂ ರಾಜ್ಯದ ಜನತೆ ಮುಂದೆ ತೆಗೆದುಕೊಂಡು ಹೋಗುತ್ತೇವೆ.

ನಿನ್ನೆ ಆರಂಭವಾದ ಅಹೋರಾತ್ರಿ ಧರಣಿಯ ಹೋರಾಟವು ಏ.7ರಿಂದ ಪ್ರಾರಂಭವಾಗುವ ಜನಾಕ್ರೋಶ ಯಾತ್ರೆ ಮೂಲಕ ರಾಜ್ಯದ ಪ್ರತಿ ಜಿಲ್ಲೆಗೆ ತಲುಪಲಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಸರಕಾರದ ಹಗಲುದರೋಡೆಯನ್ನು ಜನರಿಗೆ ಮನದಟ್ಟು ಮಾಡುತ್ತೇವೆ. ಜನರ ಹಣ ಲೂಟಿ ಮಾಡಿ, ಜನರಿಗೆ ಬರೆ ಎಳೆದು ಅಧಿಕಾರ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ದೋಖಾಗಳನ್ನು ಜನರ ಮುಂದಿಡಲಿದ್ದೇವೆ ಎಂದು ಹೇಳಿದರು. ಈ ಸರಕಾರದ ನೈಜ ಮುಖವಾಡವನ್ನು ತಿಳಿಸುವ ಕೆಲಸವನ್ನು ಮುಂದಿನ ಒಂದು ತಿಂಗಳು ಮಾಡಲಿದ್ದೇವೆ ಎಂದರು.

ವಕ್ಫ್ ಹಗರಣದಲ್ಲಿ ಕಾಂಗ್ರೆಸ್ಸಿನ ಅನೇಕ ಮುಖಂಡರ ಹೆಸರು

ಕಾಂಗ್ರೆಸ್ಸಿಗರು ವಕ್ಫ್ ಹೆಸರು ಹೇಳಿ ಲಕ್ಷಾಂತರ ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದವರು, ಇದಕ್ಕೆ ಕರ್ನಾಟಕವೇ ತಾಜಾ ಉದಾಹರಣೆ. ಈ ಹಗರಣದಲ್ಲಿ ಕಾಂಗ್ರೆಸ್ಸಿನ ಅನೇಕ ಮುಖಂಡರ ಹೆಸರು ಕೂಡ ಈ ಹಿಂದೆಯೂ ಕೇಳಿಬಂದಿತ್ತು.

ಹಾಗಾಗಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್ಸಿನವರು ಸಹಜವಾಗಿಯೇ ವಿರೋಧಿಸುತ್ತಾರೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.

ಏಕಾಏಕಿ ವಕ್ಫ್ ಹೆಸರು ಹೇಳಿಕೊಂಡು ಸಾವಿರಾರು ವರ್ಷಗಳ ಇತಿಹಾಸ ಇರುವ ಮಠಮಾನ್ಯಗಳ, ದೇವಾಲಯಗಳ ಜಮೀನನ್ನು ವಶಕ್ಕೆ ಪಡೆಯುತ್ತಿದ್ದರು. ನಮ್ಮ ರಾಜ್ಯದಲ್ಲೂ ರೈತರ ಜಮೀನು ಕಬ್ಜಾ ಮಾಡಿಕೊಂಡಿದ್ದಾರೆ. ಅದನ್ನು ಯಾರಿಗೂ ಪ್ರಶ್ನೆ ಮಾಡಲು ಅವಕಾಶ ಇಲ್ಲದಿದ್ದರೆ ಇದ್ಯಾವ ನ್ಯಾಯ? ನಾವು ಯಾವ ದೇಶದಲ್ಲಿದ್ದೇವೆ ಎಂದು ಪ್ರಶ್ನೆಗಳನ್ನು ಮುಂದಿಟ್ಟರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎನ್‌ಡಿ‌ಎ (NDA) ಬೆಂಬಲಿತ ಅಭ್ಯರ್ಥಿಗಳ ಪರ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ (B. Mune

[ccc_my_favorite_select_button post_id="115484"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಅಕ್ಕ-ತಮ್ಮನ ಸ್ಥಿತಿ ಚಿಂತಾಜನಕ..!

ದೊಡ್ಡಬಳ್ಳಾಪುರ: ಅಪಘಾತ.. ಅಕ್ಕ-ತಮ್ಮನ ಸ್ಥಿತಿ ಚಿಂತಾಜನಕ..!

ಕೆಎಸ್‌ಆರ್‌ಟಿಸಿ (KSRTC) ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ (Accident) ಅಕ್ಕ ಮತ್ತು ತಮ್ಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಎಪಿಎಂಸಿ

[ccc_my_favorite_select_button post_id="115491"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!