ದೊಡ್ಡಬಳ್ಳಾಪುರ (Doddaballapura): ತಾಲ್ಲೂಕಿನಲ್ಲಿ ಯುಗಾದಿ ಹಬ್ಬದ ನಂತರ ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ರೇವತಿ ಮಳೆ ಬಿದ್ದಿದ್ದು ರೈತರಲ್ಲಿ ಸಂತಸ ಮೂಡಿಸಿದೆ.
‘ರೇವತಿ ಮಳೆ ಬಿದ್ದರೆ ದೇವರಂತ ಬೆಳೆಯಾಗುತ್ತದೆ’ ಎನ್ನುವ ನಂಬಿಕೆ ಈ ಭಾಗದ ರೈತರಲ್ಲಿದೆ.
ಯುಗಾದಿ ಹಬ್ಬಕ್ಕೂ ಹಿಂದಿನ ಒಂದು ವಾರದಿಂದಲೂ ತಾಲ್ಲೂಕಿನಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿತ್ತು.
ಬುಧವಾರ ಮಧ್ಯಾಹ್ನದ ನಂತರ ಮೋಡದಕವಿದ ವಾತಾರಣ ಪ್ರಾರಂಭವಾಗಿತ್ತಾದರು, ಗುರುವಾರ ಮಧ್ಯಾಹ್ನದ ವೇಳೆಗೆ ನಗರ ಸೇರಿದಂತೆ ತಾಲ್ಲೂಕಿನ ಕೆಲವು ಕಡೆಗಳಲ್ಲಿ ಒಂದಿಷ್ಟು ಮಳೆ ಬಿದ್ದಿದ್ದರಿಂದ ವಾತಾವರಣ ತಂಪಾಗಿದೆ.
ಇನ್ನೂ ಹವಾಮಾನ ಇಲಾಖೆಯು 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಉಂಟಾಗಿದೆ. ಹೀಗಾಗಿ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು ರಾಜ್ಯಗಳಲ್ಲಿ ಮಳೆಯಾಗುತ್ತಿದೆ.
ಕರ್ನಾಟಕದ ಶಿವಮೊಗ್ಗ ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನ ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ ಎಂದು ಇಲಾಖೆ ಹೇಳಿದೆ.
ಧಾರವಾಡ, ಕಲಬುರಗಿ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.