Babuji's magnificent achievements should inspire our lives: Deputy Commissioner A.B. Basavaraju

ಬಾಬುಜೀ ಅಮೋಘ ಸಾಧನೆ ನಮ್ಮ ಬದುಕಿಗೆ ಪ್ರೇರಣೆಯಾಗಬೇಕು: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಬೆಂ.ಗ್ರಾ.ಜಿಲ್ಲೆ: ಬಾಬು ಜಗಜೀವನರಾಂ ಅವರು ನಮಗೆಲ್ಲರಿಗೂ ಮಾರ್ಗದರ್ಶಕರು,
ಅವರ ಬದುಕು ನಮಗೆ ಪ್ರೇರಣೆಯಾಗಬೇಕು. ಅವರ ಮಾರ್ಗದಲ್ಲಿ ನಡೆಯುವ ಪ್ರಯತ್ನವೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿಗಳಾದ ಡಾ.ಬಾಬು ಜಗಜೀವನ ರಾಮ್ ರವರ 118 ನೇ ಜಯಂತಿಯನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಆಡು ಮುಟ್ಟದ ಸೊಪ್ಪಿಲ್ಲ ಬಾಬೂಜೀ ನಿರ್ವಹಿಸದ ಖಾತೆಗಳಿಲ್ಲ’ ಎಂಬ ಮಾತೇ ಇದೆ. ಭಾರತದ ಉಪ ಪ್ರಧಾನಿಗಳಾಗಿ, ವಾರ್ತಾ ಮತ್ತು ಪ್ರಚಾರ, ಸಾರಿಗೆ, ರೈಲ್ವೆ, ಕಾರ್ಮಿಕ ಮತ್ತು ಪುನರ್ವಸತಿ, ಆಹಾರ, ಕೃಷಿ, ಸಹಕಾರ, ನೀರಾವರಿ ಇತ್ಯಾದಿ ಖಾತೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಬಾಬು ಜಗಜೀವನರಾಮ್ ಅವರು ವಿಶೇಷವಾಗಿ 1970-74ರಲ್ಲಿ ರಕ್ಷಣಾ ಸಚಿವರಾಗಿ ಅಮೋಘ ಸಾಧನೆ ಮಾಡಿದರು. ಅವರ ಕಾಯಕ ನಿಷ್ಠೆ ನಮ್ಮೆಲ್ಲರಿಗೂ ಪ್ರೇರಣೆ ಎಂದರು.

ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ಎನ್.ಅನುರಾಧ ಮಾತಾಡಿ, ಡಾ.ಬಾಬು ಜಗಜೀವನ ರಾಮ್ ಅವರು ಧೀಮಂತ ರಾಷ್ಟ್ರೀಯ ನಾಯಕ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ಹೋರಾಟಗಾರ. ತಳಸಮುದಾಯದ ಜನರಿಗೆ ಸಂವಿಧಾನಬದ್ಧ ನ್ಯಾಯ ದೊರಕಿಸಲು ಹೋರಾಡಿದರು.

ಅವರ ದಕ್ಷ ಆಡಳಿತದಿಂದ ನಮ್ಮ ಮುಂದೆ ಅವರು ಆದರ್ಶಪ್ರಾಯರಾಗಿದ್ದಾರೆ. ಕೃಷಿ ಸಚಿವರಾಗಿ ಅವರು ಮಾಡಿದ ವಿನೂತನ, ಅಮೋಘ ಸೇವೆಗೆ ದೇಶ ಅವರನ್ನು ‘ಹಸಿರು ಕ್ರಾಂತಿಯ ಹರಿಕಾರ’ ಎಂದೇ ಕರೆಯಿತು. ಇಂದು ಭವಿಷ್ಯದ ಭಾರತಕ್ಕೆ ನಮ್ಮೆಲ್ಲರಿಗೂ ಆದರ್ಶರಾಗಿದ್ದಾರೆ.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಟಿ.ಎಲ್.ಎಸ್.ಪ್ರೇಮಾ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಕಲಾವತಿ, ಆಹಾರ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರಾದ ಶಂಕರ್ ಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ರಾಜಕೀಯ

ಹಿಂದೂ ವಿರೋಧಿ ನೀತಿ, ಗ್ಯಾರಂಟಿ ಹೆಸರಿನಲ್ಲಿ ರಾಜ್ಯಕ್ಕೆ ಅನ್ಯಾಯ: ಬಿ.ವೈ.ವಿಜಯೇಂದ್ರ

ಹಿಂದೂ ವಿರೋಧಿ ನೀತಿ, ಗ್ಯಾರಂಟಿ ಹೆಸರಿನಲ್ಲಿ ರಾಜ್ಯಕ್ಕೆ ಅನ್ಯಾಯ: ಬಿ.ವೈ.ವಿಜಯೇಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯನವರ (Cmsiddaramaiah) ನೇತೃತ್ವದ ಸರಕಾರವು ಗೊಂದಲದ ಹಾಗೂ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಗ್ಯಾರಂಟಿ ಹೆಸರು ಹೇಳಿಕೊಂಡು ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="117898"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ಇದೇ ತಿಂಗಳ 15 ರಂದು ಕಾಣೆಯಾಗಿದ್ದ ಬಾಲಕನ ಶವ ತಾಲೂಕಿನ ತೂಬಗೆರೆ ಹೋಬಳಿಯ ಸಾಧುಮಠ ರಸ್ತೆಯ ಬಳಿ ಪತ್ತೆಯಾಗಿದೆ (Missing boy found dead)

[ccc_my_favorite_select_button post_id="117857"]
ದೊಡ್ಡಬಳ್ಳಾಪುರ: ಜೆಸಿಬಿಗೆ ಕಾರು ಡಿಕ್ಕಿ..!

ದೊಡ್ಡಬಳ್ಳಾಪುರ: ಜೆಸಿಬಿಗೆ ಕಾರು ಡಿಕ್ಕಿ..!

ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುವು ಪಡೆಯುತ್ತಿದ್ದ ಜೆಸಿಬಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ (Accident) ಕಾರು ತೀವ್ರವಾಗಿ ಜಖಂಗೊಂಡಿರುವ ಘಟನೆ ತಾಲೂಕಿನ ಮೆಣಸಿ ಗೇಟ್ ಬಳಿ ಕೆಲವೇ ಕ್ಷಣಗಳ ಮುಂಚೆ ಸಂಭವಿಸಿದೆ.

[ccc_my_favorite_select_button post_id="117905"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!