ಹೈದರಾಬಾದ್; ಕ್ರಿಕೆಟ್ ಆಡುವಾಗಲೇ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ (heart attack) ಸಾವನಪ್ಪಿರುವ ಘಟನೆ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ.
ಸಿಎಂಆರ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಪಂದ್ಯಾವಳಿಯಲ್ಲಿ ಕ್ರಿಕೆಟ್ ಆಡುತ್ತಿದ್ದ ವೇಳೆ ಬಿ.ಟೆಕ್ ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಸಾವನಪ್ಪಿದ್ದಾನೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ತಮ್ಮ ಕಣ್ಣೆದುರೇ ಸ್ನೇಹಿತನ ಮರಣದಿಂದ ಸಹ ವಿದ್ಯಾರ್ಥಿಗಳು ಕಂಬನಿ ಮಿಡಿದಿದ್ದಾರೆ.