Inauguration of Pamban Bridge

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ ಉದ್ಘಾಟಿಸಿ ದೇಶದ ಸೇವೆಗೆ ಅರ್ಪಿಸಿದರು.

ಲಂಕೆಗೆ ವಾನರ ಸೇನೆಯನ್ನು ಕರೆದೊಯ್ಯಲು ಶ್ರೀರಾಮ ಚಂದ್ರ ಪುರಾಣ ಕಾಲದಲ್ಲಿ ನಿರ್ಮಿಸಿದ ರಾಮಸೇತು ಪ್ರದೇಶವಾದ ರಾಮೇಶ್ವರಂನಿಂದ ಆರಂಭಗೊಳ್ಳುವ ಪಂಬನ್‌ ಸೇತುವೆಯನ್ನು ಶ್ರೀ ರಾಮನವಮಿ ದಿನವೇ ಉದ್ಘಾಟನೆ ಮಾಡಿರುವುದು ವಿಶೇಷ.

ರಾಮೇಶ್ವರಂ-ಚೆನ್ನೈನ ತಂಬರಂ ನಗರಗಳನ್ನು ಸಂಪರ್ಕಿಸುವ ಹೊಸ ರೈಲಿನ ಸಂಚಾರಕ್ಕೂ ಪ್ರಧಾನಿ ಮೋದಿ ಇದೇ ವೇಳೆ ಹಸಿರು ನಿಶಾನೆ ತೋರಿದರು. ಜತೆಗೆ ಕರಾವಳಿ ಕಾವಲು ಪಡೆಯ ಗಸ್ತು ನೌಕೆಯ ಕಾರ್ಯಾರಂಭಕ್ಕೂ ಮೋದಿ ಚಾಲನೆ ನೀಡಿದರು. ಈ ಸಂದರ್ಭ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ತಮಿಳುನಾಡು ರಾಜ್ಯಪಾಲ ಆ‌ರ್.ಎನ್. ರವಿ ಮತ್ತಿತರರು ಉಪಸ್ಥಿತರಿದ್ದರು.

ಸೇತುವೆಯ ಲೋಕಾರ್ಪಣೆ ಕಾರ್ಯಕ್ರಮಕ್ಕೂ ಮುನ್ನ, ಕರಾವಳಿ ನಗರ ರಾಮೇಶ್ವರಂನಲ್ಲಿ ಬಿಗಿಭದ್ರತೆ ವ್ಯವಸ್ಥೆ ಮಾಡಲಾಗಿತ್ತು. ಪೊಲೀಸರು ಕಟ್ಟೆಚ್ಚರ ವಹಿಸಿದ್ದರು.

ಸೇತುವೆಯ ವೈಶಿಷ್ಟ್ಯ:

ಪಂಬನ್-ರಾಮೇಶ್ವರಂ ನಡುವೆ ಸಂಪರ್ಕ ಕಲಿಸುವ 2.08 ಕಿಮೀ ಉದ್ದದ ಸೇತುವೆಯನ್ನು 550 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಲಂಡನ್ ಸೇತುವೆ ಮಾದರಿಯಲ್ಲಿಯೇ ಲಂಬ ಕೋನದಲ್ಲಿ ತೆರೆದುಕೊಳ್ಳುವ ಈ ಸೇತುವೆಗೆ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಲಾಗಿದೆ. ಸಮುದ್ರ ಮಾರ್ಗದಲ್ಲಿ ಹಡಗುಗಳ ಸಂಚಾರ ವೇಳೆ ಸೇತುವೆ ಇಬ್ಬಾಗವಾಗಿ ಮೇಲಕ್ಕೆ ತೆರೆದುಕೊಳ್ಳುತ್ತದೆ. ಸೇತುವೆಯಲ್ಲಿ ಎರಡು ಹಳಿಗಳಿದ್ದು ಏಕಕಾಲದಲ್ಲಿ 2 ರೈಲುಗಳು ಸಂಚರಿಸಬಹುದಾಗಿದೆ.

ಸ್ವಯಂಚಾಲಿತ: ಸೇತುವೆ ಎಲೆಕ್ಟಿಕಲ್ ಆಟೋಮೆಕ್ಯಾನಿಕಲ್ ತಂತ್ರಜ್ಞಾನ ಒಳಗೊಂಡಿದ್ದು, ಮಾನವ ರಹಿತವಾಗಿ ಕಾರ್ಯನಿರ್ವಹಿಸುತ್ತದೆ.

111 ವರ್ಷ ಹಿಂದೆ ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡಿದ್ದ ಹಳೆಯ ಸೇತುವೆ ಹಡಗುಗಳು ಬಂದಾಗ ಸಮುದ್ರಕ್ಕೆ ಸಮಾನಾಂತರವಾಗಿ ತೆರೆದುಕೊಳ್ಳುತ್ತಿತ್ತು. ಹಾಗೆ ತೆರೆದುಕೊಳ್ಳಲು 45 ನಿಮಿಷ ತೆಗೆದುಕೊಳ್ಳುತ್ತಿತ್ತು. ಆದರೆ ಹೊಸ ಸೇತುವೆ 5 ನಿಮಿಷ 3 ಸೆಕೆಂಡ್‌ಗಳಲ್ಲಿ ತೆರೆದುಕೊಳ್ಳುವಷ್ಟು ವೇಗವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಸೇತುವೆ ನಿರ್ಮಾಣದ ಇಂಜಿನಿಯರ್‌ಗಳು ವಿವರಿಸಿದ್ದಾರೆ.

ರಾಜಕೀಯ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ; ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="119679"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!