Mysore Sandal Factory: Record net profit of ₹416 crore

KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54 ಕೋಟಿ ಹೆಚ್ವು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಮತ್ತು ಕೆಎಸ್ ಡಿಎಲ್ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ ಅವರು ಜಂಟಿ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಈ ಬಗ್ಗೆ ಬುಧವಾರ ಮಾಹಿತಿ ನೀಡಿರುವ ಸಚಿವರು, ಕಳೆದ ಹಣಕಾಸು ವರ್ಷದಲ್ಲಿ ಸಂಸ್ಥೆಯು 43,144 ಮೆಟ್ರಿಕ್ ಟನ್ ಸಾಬೂನು ಮತ್ತು ಮಾರ್ಜಕಗಳನ್ನು ಮಾರಾಟ ಮಾಡಿ, ದಾಖಲೆಯ ಲಾಭ ಗಳಿಸಿದೆ. ಲಾಭದಲ್ಲಿ ನಿಯಮಾನುಸಾರ
ಶೇ.30ರಷ್ಟನ್ನು, ಅಂದರೆ ₹123 ಕೋಟಿಯನ್ನು ಸರಕಾರಕ್ಕೆ ಹಸ್ತಾಂತರಿಸಲಾಗುವುದು
ಎಂದಿದ್ದಾರೆ.

ಸಂಸ್ಥೆಯು 2023-24ರಲ್ಲಿ 37,916 ಟನ್ ಉತ್ಪನ್ನ ಮಾರಾಟ ಮಾಡಿ, 1,570 ಕೋಟಿ ರೂಪಾಯಿ ವಹಿವಾಟು ನಡೆಸುವ ಮೂಲಕ 362 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿತ್ತು. ಆ ಪೈಕಿ 108 ಕೋಟಿ ರೂ.ಗಳನ್ನು ಸರಕಾರಕ್ಕೆ ಕೊಡಲಾಗಿತ್ತು. ಹಿಂದೆ ಸಂಸ್ಥೆಯು ಲಾಭಾಂಶ ಕೊಡುವ ಸರಕಾರಿ ಉದ್ದಿಮೆಗಳ ಪೈಕಿ 21ನೇ ಸ್ಥಾನದಲ್ಲಿತ್ತು. ಈಗ 3ನೇ ಸ್ಥಾನದಲ್ಲಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

2024-25ರಲ್ಲಿ ಸಂಸ್ಥೆಯು ಉತ್ಪಾದನೆ, ಮಾರಾಟ ಮತ್ತು ಲಾಭ ಮೂರರಲ್ಲೂ ಸಾರ್ವಕಾಲಿಕ ದಾಖಲೆ ಬರೆದಿದೆ.‌ ಕಳೆದ ಸಾಲಿನಲ್ಲಿ ರಫ್ತು ವಹಿವಾಟಿನ ಮೂಲಕವೂ ಕೆಎಸ್ಡಿಎಲ್ 23.2 ಕೋಟಿ ರೂಪಾಯಿ ಮೊತ್ತದ ವಹಿವಾಟು ನಡೆಸಿದೆ ಎಂದು ಸಚಿವ ಪಾಟೀಲ ವಿವರಿಸಿದ್ದಾರೆ.

ಸಂಸ್ಥೆಯು ಗ್ರಾಹಕರ ನಿರೀಕ್ಷೆಗೆ ತಕ್ಕಂತೆ 19 ಉತ್ಪನ್ನಗಳನ್ನು ಒಳಗೊಂಡಿದೆ. ಇದರಲ್ಲಿ ಮೈಸೋಪು, ಹ್ಯಾಂಡ್ ವಾಶ್, ಶವರ್ ಜೆಲ್, ಕುಡಿಯುವ ನೀರು, ಅಗರಬತ್ತಿ ಮುಂತಾದ ಉತ್ಕೃಷ್ಟ ಉತ್ಪನ್ನಗಳನ್ನು ಹೊಂದಿದೆ. ಮಾರುಕಟ್ಟೆ ವಿಸ್ತರಣೆ ಮತ್ತು ದಕ್ಷ ಉತ್ಪಾದನಾ ವಿಧಾನದ ಮೂಲಕ ಲಾಭವನ್ನು ಮತ್ತಷ್ಟು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಸಂಸ್ಥೆಯು ಈಗ ಇ-ಕಾಮರ್ಸ್ ಮತ್ತು ಆಧುನಿಕ ವ್ಯಾಪಾರ ಮಾದರಿಗಳನ್ನು ಅಳವಡಿಸಿಕೊಂಡಿದೆ. ಸಂಸ್ಥೆಯ ಚೆನ್ನೈ, ಹೈದರಾಬಾದ್, ಮುಂಬೈ, ಅಹಮದಾಬಾದ್, ದೆಹಲಿ, ಛತ್ತೀಸಗಢ ಮತ್ತು ಕೋಲ್ಕತಾ ಹಾಗೂ ಒಡಿಶಾ ಶಾಖೆಗಳಲ್ಲಿ ಕೂಡ ವಹಿವಾಟು ಹೆಚ್ಚಳ ಕಂಡಿದೆ ಎಂದು ಅವರು ನುಡಿದಿದ್ದಾರೆ.

ಸಂಸ್ಥೆಯಲ್ಲಿ ಈಗ ಮೂರು ಪಾಳಿಗಳ ಕೆಲಸದ ವ್ಯವಸ್ಥೆ ಇದೆ. ವಿಜಯಪುರದಲ್ಲಿ 250 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಸ್ಥೆಯ ಘಟಕವನ್ನು ತೆರೆಯಲಾಗುವುದು.‌ ಇದಕ್ಕೆ 50 ಎಕರೆ ಜಾಗವನ್ನು ಕೆಐಎಡಿಬಿ ಹಂಚಿಕೆ ಮಾಡಿದೆ. 2025-26ರಲ್ಲಿ ಸಂಸ್ಥೆಯು 1,819 ಕೋಟಿ ರೂಪಾಯಿ ಮೊತ್ತದ ವಹಿವಾಟು ನಡೆಸುವ ಗುರಿ ಹೊಂದಿದೆ ಎಂದು ಪಾಟೀಲ ಹೇಳಿದ್ದಾರೆ.

ಕೆಎಸ್ ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪಿ.ಕೆ.ಎಂ.ಪ್ರಶಾಂತ ಅವರು ಮಾತನಾಡಿ, ಕಳೆದ ಎರಡು ವರ್ಷಗಳಿಂದ ಸಂಸ್ಥೆಯ ಲಾಭದ ಪ್ರಮಾಣ ಏರುಮುಖವಾಗಿದೆ. ಪಾರದರ್ಶಕತೆ, ದಕ್ಷತೆ, ಮಾರುಕಟ್ಟೆ ವಿಸ್ತರಣೆ ಮತ್ತು ಗುಣಮಟ್ಟ ಈ‌ ‌ನಾಲ್ಕು ಅಂಶಗಳಿಗೆ ಆದ್ಯತೆ ನೀಡಿರುವುದೇ ಇದಕ್ಕೆ ಮುಖ್ಯ ಕಾರಣವಾಗಿದೆ ಎಂದರು.

ಸಂಸ್ಥೆಯ ಸಾಬೂನು ಘಟಕವು ಕಳೆದ ಸಾಲಿನಲ್ಲಿ 36,268 ಟನ್, ಡಿಟರ್ಜೆಂಟ್ ಘಟಕವು 5,788 ಟನ್ ಮತ್ತು ಸೌಂದರ್ಯ ವರ್ಧಕಗಳ ಘಟಕವು 1,087 ಟನ್ ಉತ್ಪನ್ನಗಳನ್ನು ತಯಾರಿಸಿದೆ ಎಂದು ಅವರು ಹೇಳಿದ್ದಾರೆ.

ರಾಜಕೀಯ

ಜುಲೈ: ಕನ್ಯಾ ರಾಶಿಯವರಿಗೆ ಕಾಡಬಹುದಾದ ಸಮಸ್ಯೆಗಳಿಗೆ ಸರಳ ಪರಿಹಾರ

ಜುಲೈ: ಕನ್ಯಾ ರಾಶಿಯವರಿಗೆ ಕಾಡಬಹುದಾದ ಸಮಸ್ಯೆಗಳಿಗೆ ಸರಳ ಪರಿಹಾರ

ಕನ್ಯಾ ರಾಶಿಯವರಿಗೆ (Virgos) ಜುಲೈ ತಿಂಗಳಲ್ಲಿ ಕಾಡುವ ಸಮಸ್ಯೆಗಳಿಗೆ ವೇದ ಜ್ಯೋತಿಷ್ಯದ ಆಧಾರದ ಮೇಲೆ ಈ ರೀತಿ ಪರಿಹಾರ ಕೈಗೊಳ್ಳಬಹುದಾಗಿದೆ.

[ccc_my_favorite_select_button post_id="110690"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!