Second PUC Result: Bengaluru Rural district jumps to 8th position

ದ್ವಿತೀಯ ಪಿಯುಸಿ ಫಲಿತಾಂಶ: 8ನೇ ಸ್ಥಾನಕ್ಕೆ ಜಿಗಿದ ಬೆಂ.ಗ್ರಾ.ಜಿಲ್ಲೆ

ಬೆಂ.ಗ್ರಾ‌.ಜಿಲ್ಲೆ; 2024-25ನೇ ಸಾಲಿನ ದ್ವಿತೀಯ ಪಿಯುಸಿ (PUC) ಫಲಿತಾಂಶ ಇಂದು ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು ಶೇ.73.45 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆದರೆ ಕಳೆದ ವರ್ಷದ ಫಲಿತಾಂಶಕ್ಕೆ ಓಲಿಸಿದರೆ (ಶೇ 81.15) ಹಿನ್ನಡೆ ಕಂಡು ಬರುತ್ತಿದೆ.

ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಮಲ್ಲೇಶ್ವರದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು.

ಮಧ್ಯಾಹ್ನ 1 ಗಂಟೆ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಪಿಯು ಫಲಿತಾಂಶ ಲಭ್ಯವಾಗುವ ವೆಬ್‌ಸೈಟ್‌ karresultsnic.in

8ನೇ ಸ್ಥಾನಕ್ಕೆ ಬೆಂ.ಗ್ರಾ.ಜಿಲ್ಲೆ: ಇಂದು ಪ್ರಕಟವಾದ ಫಲಿತಾಂಶದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಶೇ.79.70 ಪಡೆಯುವ 8ನೇ ಸ್ಥಾನಕ್ಕೆ ಜಿಗಿದಿದೆ, ಕಳೆದ (10ನೇ ಸ್ಥಾನ) ವರ್ಷಕ್ಕಿಂತ ಎರಡು ಸ್ಥಾನ ಹೆಚ್ಚಳವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದ 10935 ವಿದ್ಯಾರ್ಥಿಗಳ ಪೈಕಿ 8361 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಜಿಲ್ಲೆಯು ಶೇ. 76.46 ರಷ್ಟು ಫಲಿತಾಂಶ ಪಡೆದಿದ್ದು, ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳಲ್ಲಿ 2024-25ನೇ ಸಾಲಿನಲ್ಲಿ ಮೊದಲ ಬಾರಿಗೆ ಪರೀಕ್ಷೆಗೆ ಹಾಜರಾದ 10354 ವಿದ್ಯಾರ್ಥಿಗಳ ಪೈಕಿ 8252 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 79.70 ರಷ್ಟು ಫಲಿತಾಂಶ ದೊರಕಿದೆ.

ಬೆಂ.ಗ್ರಾ.ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 4893 ಬಾಲಕರು ಹಾಜರಾಗಿದ್ದು, 3530 ಬಾಲಕರು ತೇರ್ಗಡೆಯಾಗುವ ಮೂಲಕ ಶೇ. 72.14 ರಷ್ಟು ಫಲಿತಾಂಶ ಹಾಗೂ 6042 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದು, 4831 ಬಾಲಕಿಯರು ತೇರ್ಗಡೆ ಹೊಂದುವ ಮೂಲಕ ಶೇ. 79.96 ರಷ್ಟು ಫಲಿತಾಂಶ ದೊರಕಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ಕಲಾ ವಿಭಾಗದಿಂದ 1126 ವಿದ್ಯಾರ್ಥಿಗಳು ಹಾಜರಾಗಿದ್ದು,527 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 46.8 ರಷ್ಟು ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗದಿಂದ 5249 ವಿದ್ಯಾರ್ಥಿಗಳು ಹಾಜರಾಗಿದ್ದು, 3959 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 75.42 ರಷ್ಟು ಫಲಿತಾಂಶ ದೊರೆತಿದೆ.

ವಿಜ್ಞಾನ ವಿಭಾಗದಿಂದ 4560 ವಿದ್ಯಾರ್ಥಿಗಳು ಹಾಜರಾಗಿದ್ದು, 3875 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 84.98 ರಷ್ಟು ಫಲಿತಾಂಶ ಪಡೆದಿದೆ.

ನಗರ ಪ್ರದೇಶದ 8479 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 6531 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.77.03 ರಷ್ಟು ಫಲಿತಾಂಶ ದೊರೆತಿದೆ. ಗ್ರಾಮೀಣ ಪ್ರದೇಶದ 2456 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 1830 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 74.51 ರಷ್ಟು ಫಲಿತಾಂಶ ದೊರೆತಿದೆ

ಉಳಿದಂತೆ ನೆರೆಯ ಚಿಕ್ಕಬಳ್ಳಾಪುರ ಜಿಲ್ಲೆ 11ನೇ ಸ್ಥಾನ, ತುಮಕೂರು 18ನೇ ಸ್ಥಾನ, ಕೋಲಾರ 16ನೇ ಸ್ಥಾನ ಪಡೆದಿವೆ.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!