2nd Airport; Team inspects site

2ನೇ ವಿಮಾನ ನಿಲ್ದಾಣ; ಸ್ಥಳ ಪರಿಶೀಲನೆ ನಡೆಸಿದ ತಂಡ

ಬೆಂಗಳೂರು: ನಗರದಲ್ಲಿ ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (2nd Airport) ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ ಕನಕಪುರ ರಸ್ತೆಯಲ್ಲಿರುವ ಎರಡು ತಾಣಗಳ ಪರಿಶೀಲನೆಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡವು ಮಂಗಳವಾರ ನಡೆಸಿತು.

ನಂತರ ತಂಡದ ಸದಸ್ಯರು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರನ್ನು ಭೇಟಿಯಾಗಿ ವಿಚಾರ ವಿನಿಮಯ ನಡೆಸಿದರು.

ಈ ಸಂದರ್ಭದಲ್ಲಿ ಸಚಿವರು ಕೂಡ ಉದ್ದೇಶಿತ ವಿಮಾನ ನಿಲ್ದಾಣದ ಅಗತ್ಯ, ಬೆಂಗಳೂರಿನ ನಾಗರಿಕ ಮತ್ತು ಕೈಗಾರಿಕಾ ಅಗತ್ಯ ಇತ್ಯಾದಿಗಳನ್ನು ತಂಡದ ಸದಸ್ಯರಿಗೆ ವಿವರಿಸಿ, ಪ್ರಾತ್ಯಕ್ಷಿಕೆ ಪ್ರದರ್ಶಿಸಿದರು. ಅತ್ಯಂತ ಪಾರದರ್ಶಕವಾಗಿ ಸ್ಥಳ ಗುರುತಿಸುವ ಕೆಲಸ ಆಗಲಿ ಎಂದು ತಂಡಕ್ಕೆ ಸಲಹೆ ನೀಡಿದರು.

ನಾಳೆಯೂ ಈ ತಂಡ ನೆಲಮಂಗಲ- ಕುಣಿಗಲ್ ರಸ್ತೆಯ ಸ್ಥಳ ಪರಿಶೀಲನೆ ನಡೆಸಲಿದೆ.

ಉದ್ದೇಶಿತ ಎರಡನೆಯ ವಿಮಾನ ನಿಲ್ದಾಣವನ್ನು ಬೆಂಗಳೂರಿನ ಅಗತ್ಯಗಳನ್ನು ಗಮನದಲ್ಲಿ ಇಟ್ಟುಕೊಂಡು ನಿರ್ಮಿಸಲು ಸರಕಾರ ತೀರ್ಮಾನಿಸಿದೆ.

ಸ್ಥಳ ಪರಿಶೀಲನೆಯ ಬಳಿಕ ಪ್ರಾಧಿಕಾರದ ಅಭಿಪ್ರಾಯ ಏನೆಂಬುದನ್ನು ತಿಳಿದುಕೊಂಡು, ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಪ್ರಾಧಿಕಾರದ ತಂಡದಲ್ಲಿ ಜನರಲ್ ಮ್ಯಾನೇಜರ್ ವಿಕ್ರಮ್ ಸಿಂಗ್, ಜಂಟಿ ಜನರಲ್ ಮ್ಯಾನೇಜರ್ ಕೆ. ಶ್ರೀನಿವಾಸರಾವ್, ಸಹಾಯಕ ಜನರಲ್ ಮ್ಯಾನೇಜರ್ ಮನುಜ್ ಭಾರದ್ವಾಜ್, ಪ್ರಧಾನ ಕಚೇರಿಯ ಅಧಿಕಾರಿಗಳಾದ ಸಚ್ಚಿದಾನಂದ್, ಸಂತೋಷಕುಮಾರ್ ಭಾರತಿ, ಅಮನ್ ಚಿಪಾ ಇದ್ದರು.

ಸರಕಾರದ ಪರವಾಗಿ ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ಹೆಚ್ಚುವರಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಖುಷ್ಬೂ ಗೋಯಲ್, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಹಾಜರಿದ್ದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!