ಚಿಕ್ಕಬಳ್ಳಾಪುರ: ಎಂಬಿಬಿಎಸ್ (MBBS) ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ಪಟ್ರೇನಹಳ್ಳಿ ಗ್ರಾಮದಿಂದ ವರದಿಯಾಗಿದೆ.
ಆತ್ಮಹತ್ಯೆಗೆ ಶರಣಾಗಿರುವ ವೈದ್ಯ ವಿದ್ಯಾರ್ಥಿಯನ್ನು ಹೇಮಂತ್(18 ವರ್ಷ) ಎಂದು ಗುರ್ತಿಸಲಾಗಿದೆ.
ಪಟ್ರೇನಹಳ್ಳಿಯ ತೋಟದ ಮನೆಯಲ್ಲಿ ಬುಧವಾರ ನೇಣುಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾನೆ.
ಮುದ್ದೇನಹಳ್ಳಿಯ ಸತ್ಯಸಾಯಿ ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ಓದುತ್ತಿದ್ದ ಹೇಮಂತ್, ತಾಯಿ ವೈದ್ಯೆಯ ಜೊತೆ ವಿಯಟ್ನಾಂ ದೇಶದ ಪ್ರವಾಸ ಮುಗಿಸಿ ಮನೆಗೆ ಬಂದಿದ್ದನಂತೆ. ಆದರೆ, ಅದೇನಾಯ್ತೋ ಏನೋ ಸಂಜೆ ಸ್ನಾನ ಮುಗಿಸಿ ಇದ್ದಕ್ಕಿದ್ದಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸದ್ಯ ಹೇಮಂತ್ ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರ ಮಾಡಲಾಗಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.