2nd Airport: Study by expert organizations after AAI report - MB Patil

2ನೇ ಏರ್ಪೋರ್ಟ್: ಎಎಐ ವರದಿ ಬಳಿಕ ಪರಿಣತ ಸಂಸ್ಥೆಗಳಿಂದ ಅಧ್ಯಯನ – ಎಂ ಬಿ ಪಾಟೀಲ

ಬೆಂಗಳೂರು: ರಾಜಧಾನಿಯ ಸಮೀಪ ನಿರ್ಮಿಸಲು ಉದ್ದೇಶಿಸಿರುವ ಎರಡನೇ ಏರ್ಪೋರ್ಟ್ ಸಂಬಂಧ ಮೂರೂ ಸ್ಥಳಗಳ ಪರಿಶೀಲನೆ ನಡೆಸಿರುವ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡವು ಇನ್ನು ಒಂದು ತಿಂಗಳಲ್ಲಿ ತನ್ನ ಅಭಿಪ್ರಾಯ ತಿಳಿಸುವ ಸಾಧ್ಯತೆ ಇದೆ. ಬಳಿಕ ಇದನ್ನು ವಿಸ್ತೃತ ಅಧ್ಯಯನಕ್ಕೆ ವಿಮಾನ‌ ನಿಲ್ದಾಣಗಳ ಅಭಿವೃದ್ಧಿಪಡಿಸುವಂತಹ ಪರಿಣತ ಕಂಪನಿಗಳ ಮುಂದೆ ಕೊಂಡೊಯ್ಯಲಾಗುವುದು. ಬಳಿಕ ಸರಕಾರವು ವಿಮಾನ‌ ನಿಲ್ದಾಣಕ್ಕೆ ಸ್ಥಳವನ್ನು ಅಂತಿಮಗೊಳಿಸಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ (MB patila) ಹೇಳಿದ್ದಾರೆ.

ಎಎಐ ತಂಡ ಬಂದು ಹೋಗಿರುವುದು ನಿಜ. ವಿಮಾನ‌ ನಿಲ್ದಾಣವನ್ನು ಎಲ್ಲಿ ಮಾಡಿದರೆ ಸೂಕ್ತವೆನ್ನುವುದು ಪ್ರಯಾಣಿಕರ ದಟ್ಟಣೆ, ಕಾರ್ಗೋ ದಟ್ಟಣೆ ಮತ್ತು ಕೈಗಾರಿಕಾ ಅಗತ್ಯ ಮುಂತಾದ ಅಂಶಗಳನ್ನು ಅವಲಂಬಿಸಿದೆ ಎಂದು ಅವರು ತಿಳಿಸಿದ್ದಾರೆ.

ಈಗ ದೇವನಹಳ್ಳಿ ಬಳಿ ವಿಮಾನ‌ ನಿಲ್ದಾಣವಿದೆ. 2033ರವರೆಗೂ ಇಲ್ಲಿಂದ 150 ಕಿ.ಮೀ. ಅಂತರದಲ್ಲಿ ಇನ್ನೊಂದು ಏರ್ಪೋರ್ಟ್ ಮಾಡಬಾರದು ಎನ್ನುವ ಷರತ್ತಿದೆ. ನಾವು ಈಗಿನಿಂದಲೇ ಪ್ರಾರಂಭಿಸಿದರೆ, 2030ರ ವೇಳೆಗೆ ಎರಡನೇ ಏರ್ಪೋರ್ಟ್ ಅಭಿವೃದ್ಧಿ ಪ್ರಾರಂಭಿಸಬಹುದು. ಇಲ್ಲದೆ ಹೋದರೆ 2040ನೇ ಇಸವಿ ಬಂದರೂ ವಿಮಾನ‌ ನಿಲ್ದಾಣ ಆಗುವುದಿಲ್ಲ ಎಂದು ಅವರು ವಿವರಿಸಿದ್ದಾರೆ.

ಹಿರಿಯ ನಾಯಕ ಟಿ ಬಿ ಜಯಚಂದ್ರ ಅವರು ತಮ್ಮ ಕ್ಷೇತ್ರವಾದ ಶಿರಾ ಸಮೀಪ ಏರ್ಪೋರ್ಟ್ ಬರಲೆಂದು ಪ್ರಯತ್ನ ಶುರು ಮಾಡಿದ್ದಾರೆ. ಅಲ್ಲಿ ಜಿಲ್ಲಾ ಮಟ್ಟದ ಏರ್ಪೋರ್ಟ್ ಮಾಡಬಹುದೇ ವಿನಾ ಅದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗುವುದಿಲ್ಲ.

ಬಿಜೆಪಿಯ ಅರವಿಂದ ಬೆಲ್ಲದ್ ಕೂಡ ಉತ್ತರ ಕರ್ನಾಟಕಕ್ಕೆ ಅನುಕೂಲವಾಗುವ ಜಾಗದಲ್ಲಿ ಹೊಸ ಏರ್ಪೋರ್ಟ್ ಬರಲಿ ಎನ್ನುತ್ತಿದ್ದಾರೆ. ಕೇವಲ ಜಾಗವನ್ನು ಕೊಟ್ಟ ಮಾತ್ರಕ್ಕೆ ಎಲ್ಲವೂ ಆಗುವುದಿಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿದೆ. ಸುಪ್ರೀಂಕೋರ್ಟಿನಲ್ಲಿ ಪರಿಸರ ಇಲಾಖೆಯ ಅನುಮತಿ ಸಂಬಂಧ ಒಂದು ಪ್ರಕರಣವಿದೆ. ಅದು ಸದ್ಯದಲ್ಲೇ ಇತ್ಯರ್ಥಗೊಳ್ಳುವ ಲಕ್ಷಣಗಳಿವೆ. ಇದಾದರೆ, ಇನ್ನು 6 ತಿಂಗಳಲ್ಲಿ ಉದ್ಘಾಟನೆ ಆಗಲಿದೆ ಎಂದು ಅವರು ತಿಳಿಸಿದ್ದಾರೆ.

ರಾಯರಡ್ಡಿ ಮಾತನ್ನು ಪಕ್ಷ ಗಮನಿಸಲಿದೆ

ಕಾಂಗ್ರೆಸ್ಸಿನ ಹಿರಿಯ ನಾಯಕ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಕರ್ನಾಟಕವು ಭ್ರಷ್ಟಾಚಾರದಲ್ಲಿ ನಂಬರ್ ಒನ್ ಆಗಿದೆ ಎಂದು ಹೇಳಿದ್ದಾರೆ. ಭ್ರಷ್ಟಾಚಾರದಲ್ಲಿ ಯಾರಾರು ಭಾಗಿಯಾಗಿದ್ದಾರೆ ಎನ್ನುವುದನ್ನೂ ಅವರು ಹೇಳಬೇಕಿತ್ತು. ಅವರ ಮಾತುಗಳನ್ನು ಪಕ್ಷವು ಗಮನಿಸಿದೆ. ಯಾರೂ ಪಕ್ಷಕ್ಕಿಂತ ದೊಡ್ಡವರಿಲ್ಲ ಎಂದು ಅವರು ಹೇಳಿದ್ದಾರೆ.

ಅಹಮದಾಬಾದ್ ಎಐಸಿಸಿ ಅಧಿವೇಶನದಲ್ಲಿ ಪಕ್ಷವು ಬಡವರು, ದಲಿತರು, ಮಹಿಳೆಯರು ಮತ್ತು ಅಲ್ಪಸಂಖ್ಯಾತರನ್ನು ಗಮನದಲ್ಲಿಟ್ಟುಕೊಂಡು ನಿರ್ಣಯಗಳನ್ನು ತೆಗೆದುಕೊಂಡಿದೆ.

ಒಬ್ಬರಿಗೆ ಒಂದೇ ಹುದ್ದೆ ಎನ್ನುವ ನಿಯಮಕ್ಕೆ ಪಕ್ಷದಲ್ಲಿ ಕೆಲವು ಅಪವಾದಗಳೂ ಇವೆ. ಅನುಭವ ಮತ್ತು ಹಿರಿತನಗಳ ಮೇಲೆ ಇಂತಹ ವಿನಾಯಿತಿ ಕೊಡಬೇಕಾಗುತ್ತದೆ ಎಂದು ಪಾಟೀಲ ಪ್ರತಿಪಾದಿಸಿದ್ದಾರೆ.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!