"Always keep a smile on the faces of photographers"

ಫೋಟೋಗ್ರಾಫರ್ಸ್ ಮುಖದಲ್ಲಿ ಸದಾ “ಸ್ಮೈಲ್ ಇರಲಿ”: ಕೆ.ವಿ.ಪ್ರಭಾಕರ್

ಬೆಂಗಳೂರು; “ಸ್ಮೈಲ್ ಪ್ಲೀಸ್” ಎನ್ನುವ ಮೂಲಕ ಎಲ್ಲರ ಮುಖದಲ್ಲಿ ನಗು ತರಿಸುವ ಫೋಟೋಗ್ರಾಫರ್ ಗಳ (photographers) ಮುಖದಲ್ಲಿ ಸದಾ ಸ್ಮೈಲ್ ಇರಬೇಕು. ಛಾಯಾಗ್ರಾಹಕರು ಏಕ ಕಾಲಕ್ಕೆ ಕಲಾವಿದರೂ ಮತ್ತು ಚರಿತ್ರಕಾರರೂ ಆಗಿರುತ್ತಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಕರ್ ಅಭಿಪ್ರಾಯ ಪಟ್ಟರು.

ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕ ಛಾಯಾಗ್ರಾಹಕರ 7 ನೇ ವರ್ಷದ ಸಮಾವೇಷವನ್ನು ಉದ್ಘಾಟಿಸಿ ಮಾತನಾಡಿದರು.

ಹಳೆ ತಂತ್ರಜ್ಞಾನ ಸಾಯಬಹುದು. ಆದರೆ ಹಳೆ ಫೋಟೋಗಳು ಸಾಯುವುದಿಲ್ಲ.
ನನ್ನ ಮಕ್ಕಳಿಗೆ ನನ್ನ ಅಜ್ಜ, ಅಜ್ಜಿಯನ್ನು ತೋರಿಸಲು ಇರುವ ಏಕೈಕ ಮಾರ್ಗ ಫೋಟೋಗಳು ಎಂದು ತಮ್ಮ ಹಳೆಯ ನೆನಪುಗಳನ್ನು ಸ್ಮರಿಸಿದರು.

ಛಯಾಗ್ರಾಹಕರು ಏಕ ಕಾಲಕ್ಕೆ ಕಲಾವಿದರೂ ಮತ್ತು ಚರಿತ್ರಕಾರರೂ ಆಗಿರುತ್ತಾರೆ.

ಸಾವಿರ ಅಕ್ಷರಗಳು ಹೇಳಲಾಗದ್ದನ್ನು ಒಂದು ಫೋಟೋ ಹೇಳುತ್ತದೆ.
ಸ್ವಾತಂತ್ರ್ಯ ಹೋರಾಟದ ಬಗ್ಗೆ ಸಾವಿರಾರು ಪುಟಗಳು ಹೇಳಬಹುದಾದದ್ದನ್ನು ಹತ್ತು ಫೋಟೋಗಳು ಹೇಳುತ್ತವೆ ಎಂದು ವಿವರಿಸಿದರು.

ಸ್ವಾತಂತ್ರ್ಯ ಬಂದಾಗ 75 ವರ್ಷಗಳ ಹಿಂದೆ ಈ ಅರಮನೆ ಮೈದಾನ ಹೇಗಿತ್ತು ಅಂತ ಒಂದು ಫೋಟೋ ಹೇಳಿ ಬಿಡುತ್ತದೆ.
ಒಂದು ಕಾಲದಲ್ಲಿ ಫೋಟೋ ತೆಗೆಸುವುದು ಬಹಳ ಭಾವನಾತ್ಮಕ ಕ್ರಿಯೆಯಾಗಿತ್ತು. ಮದುವೆ ಒಪ್ಪಿಗೆಯಿಂದ ಹಿಡಿದು, ವರದಕ್ಷಿಣೆ ತಟ್ಟೆಯಿಂದ ಗಟ್ಟಿಮೇಳದವರೆಗೂ ಫೋಟೋಗಳ ಜೊತೆಗೆ ನೆನಪುಗಳ ನದಿಯೇ ನಮ್ಮಲ್ಲಿ ಹರಿಯುತ್ತಿತ್ತು. ಹುಟ್ಟಿನಿಂದ ಸವಿನವರೆಗೂ ಫೋಟೋಗಳು ನೆನಪಿನ ಮಾಲೆ ಸೃಷ್ಟಿಸುತ್ತವೆ ಎಂದರು.

ಇವತ್ತು ಕೈಯಲ್ಲಿ ಮೊಬೈಲ್ ಹಿಡಿದ ಎಲ್ಲರೂ ಫೋಟೋ ತೆಗೆಯಹುದು. ಆದರೆ ಎಲ್ಲರೂ ಛಾಯಾಗ್ರಾಹಕರಾಗಲು, ಛಾಯಾಗ್ರಹಣದ ಕಲೆ ಕಲಿಯಲು ಸಾಧ್ಯವಿಲ್ಲ.

ಯಾವುದೇ ಕ್ಯಾಪ್ಷನ್ ಇಲ್ಲದೆ ಫೋಟೋ ಏನು ಹೇಳುತ್ತಿದೆ ಎನ್ನುವುದು ಅರ್ಥವಾದರೆ ಆತ ಉತ್ತಮ ಫೋಟೋ ಜರ್ನಲಿಸ್ಟ್ ಅಂತ ನಾವು ಹೇಳ್ತಾ ಇದ್ದೆವು ಎಂದರು.

ಅಂಬೇಡ್ಕರ್ ಅವರ ‘ಚರಿತ್ರೆ ಅರಿಯದವರು ಇತಿಹಾಸ ನಿರ್ಮಿಸಲಾರರು’
ಎನ್ನುವ ಮಾತು ಉಲ್ಲೇಖಿಸಿದ ಕೆ.ವಿ.ಪ್ರಭಾಕರ್ ಅವರು ಚರಿತ್ರೆಯನ್ನು ದಾಖಲಿಸುವ ಛಾಯಾಗ್ರಾಹಕರ ಸಮಸ್ಯೆಗಳಿಗೆ ಸರ್ಕಾರದ ಸ್ಪಂದನೆ ಸದಾ ಇರುತ್ತದೆ.

ಛಾಯಾಗ್ರಾಹಕರ ಅಕಾಡೆಮಿ‌ ರಚಿಸಬೇಕು ಎನ್ನುವ ಬೇಡಿಕೆ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಕಾರ್ಮಿಕ‌ ಸಚಿವರ ಜೊತೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎನ್‌ಡಿ‌ಎ (NDA) ಬೆಂಬಲಿತ ಅಭ್ಯರ್ಥಿಗಳ ಪರ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ (B. Mune

[ccc_my_favorite_select_button post_id="115484"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಅಕ್ಕ-ತಮ್ಮನ ಸ್ಥಿತಿ ಚಿಂತಾಜನಕ..!

ದೊಡ್ಡಬಳ್ಳಾಪುರ: ಅಪಘಾತ.. ಅಕ್ಕ-ತಮ್ಮನ ಸ್ಥಿತಿ ಚಿಂತಾಜನಕ..!

ಕೆಎಸ್‌ಆರ್‌ಟಿಸಿ (KSRTC) ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ (Accident) ಅಕ್ಕ ಮತ್ತು ತಮ್ಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಎಪಿಎಂಸಿ

[ccc_my_favorite_select_button post_id="115491"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!