ಬೆಂ.ಗ್ರಾ ಜಿಲ್ಲೆ: ದೇವನಹಳ್ಳಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ 40.50 ಲಕ್ಷ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಂಸದರಾದ ಡಾ.ಕೆ ಸುಧಾಕರ್ (Dr.K Sudhakar) ಅವರು ಇಂದು ಗುದ್ದಲಿಪೂಜೆ ನೆರವೇರಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಗ್ರಾಮ ಪಂಚಾಯಿತಿಯ ಬೂದಿಗೆರೆ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ನೂತನ ಮಾದರಿ ಕೊಠಡಿ ನಿರ್ಮಾಣ ಕಾಮಗಾರಿ, ಬಿಜ್ಜವಾರ ಗ್ರಾಮ ಪಂಚಾಯಿತಿಯ ಹೊಲೇರಹಳ್ಳಿ ಬಸ್ ತಂಗುದಾಣ ನಿರ್ಮಾಣ ಕಾಮಗಾರಿ, ಗೊಡ್ಲು ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿಯ ವೆಂಕಟೇನಹಳ್ಳಿಯಲ್ಲಿ ಆರ್.ಸಿ.ಸಿ ಕಟ್ಟಡ ದೊಂದಿಗೆ ಶುದ್ಧ ಕುಡಿಯುವ ನೀರಿನ ಘಟಕದ ನಿರ್ಮಾಣ ಕಾಮಗಾರಿ, ಹಾರೋಹಳ್ಳಿ ಗ್ರಾಮ ಪಂಚಾಯಿತಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ ಹೈ ಮಾಸ್ಟ್ ವಿದ್ಯುತ್ ದೀಪ ಅಳವಡಿಕೆ ಕಾಮಗಾರಿ, ಹಾರೋಹಳ್ಳಿ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಹೈ ಮಾಸ್ಟ್ ವಿದ್ಯುತ್ ದೀಪದ ಅಳವಡಿಕೆ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ದೇವನಹಳ್ಳಿ ಮಾಜಿ ಶಾಸಕರಾದ ಪಿಳ್ಳಮುನಿಶಾಮಪ್ಪ, ಆಯಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.