ಗೌರಿಬಿದನೂರು: ರೈತನೊಬ್ಬ ನೇಣಿಗೆ ಶರಣಾಗಿರುವ (Suicide) ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಮೃತನನ್ನು ಪವನ್ (22 ವರ್ಷ) ಎಂದು ಗುರ್ತಿಸಲಾಗಿದೆ.
ರೈತ ರಾಮ್‌ಕುಮಾರ್‌ಗೆ ಇಬ್ಬರು ಗಂಡು, ಒಂದು ಹೆಣ್ಣು ಮಗು ಇದ್ದು, ಕೊನೆಯವನಾದ ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು.
ಈ ಮಧ್ಯೆ ಸಹಕಾರಿ ಬ್ಯಾಂಕಿನಲ್ಲಿ ಎರಡು ಲಕ್ಷ ರೂಪಾಯಿಗಳನ್ನು ಸಾಲ ಮಾಡಿರುವುದಾಗಿ ತಿಳಿದು ಬಂದಿದೆ. ಪವನ್‌ಗುರುವಾರ ಮುಂಜಾನೆ ಹೊಲದಲ್ಲಿ ಮರಕ್ಕೆ ನೇಣು ಬಿಗಿದು ಕೊಂಡು ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ್ ಮಹೇಶ್ ಪತ್ರಿ ಯುವ ರೈತ ಪವನ್ ಕುಟುಂಬಕ್ಕೆ ಸಾಂತ್ವನ ಹೇಳಿ, ಅತ್ಮಹತ್ಯೆ ಸಮಸ್ಯೆಗೆ ಪರಿಹಾರವಲ್ಲ. ನಿಮ್ಮೊಂದಿಗೆ ನಾವಿದ್ದೇವೆ ಎಂದು ತಿಳಿಸಿದರು.
ಈ ಕುರಿತಂತೆ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.