Cyber ​​attack on the Police Commissioner.. What about the common people..?

ಪೊಲೀಸ್ ಆಯುಕ್ತರಿಗೇ ಸೈಬರ್ ಅಟ್ಯಾಕ್.. ಜನ ಸಾಮಾನ್ಯರ ಗತಿಯೇನು..?

ಬೆಂಗಳೂರು: ಸರಕಾರಿ ಅಧಿಕಾರಿಗಳಂತೆ ನಟಿಸಿ ನಿಮ್ಮನ್ನು ಯಾಮಾರಿ ಸಬಹುದು. ಹಾಗಾಗಿ ಎಚ್ಚರವಾಗಿ ಎಂದು ಇತ್ತೀಚೆಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಹೆಚ್ಚುತ್ತಿರುವ ಸೈಬರ್ ಅಪರಾಧದ ಬಗ್ಗೆ ಸಲಹೆ ನೀಡಿದ್ದರು. ಆದರೆ ಸೈಬರ್ ಖದೀಮರು ಆಯುಕ್ತರ ಫೇಸ್‌ಬುಕ್ ಖಾತೆಯನ್ನೇ ಮಾಡಿ ನಕಲಿ ಖಾತೆ ಸೃಷ್ಟಿಸಿದ್ದಾರೆ (cyber attack).

ಫೇಸ್‌ಬುಕ್‌ನಲ್ಲಿ ಬಿ.ದಯಾನಂದ ಹೆಸರಿನಲ್ಲಿ ಫೇಕ್ ಅಕೌಂಟ್ ಓಪನ್ ಮಾಡಿರುವ ವಂಚಕರು ಜನರಿಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸುತ್ತಿರುವುದು ಬೆಳಕಿಗೆ ಬಂದಿದೆ.

ಫೇಸ್‌ಬುಕ್‌ನಲ್ಲಿ ಬಿ.ದಯಾನಂದ ಹೆಸರಿನಲ್ಲಿ ನಕಲಿ ಖಾತೆ ತೆರೆದಿರುವ ಸೈಬರ್ ಖದೀಮರು ಹಿಂದಿ ಭಾಷೆಯಲ್ಲಿ ಜನರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋಗಳು ವೈರಲ್ ಆಗಿದೆ. ಒಂದು ವೇಳೆ ಈ ರಿಕ್ವೆಸ್ಟ್‌ಗಳನ್ನು ಸ್ವೀಕರಿಸಿದರೆ, ವಂಚಕರು ವೈಯಕ್ತಿಕ ಮಾಹಿತಿ ಕದಿಯುವ ಅಥವಾ ಹಣಕಾಸಿನ ವಂಚನೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ಪೊಲೀಸ್‌ ಇಲಾಖೆಯ ಮೂಲಗಳು ಎಚ್ಚರಿಸಿವೆ.

ನಕಲಿ ವಾಟ್ಸ್ ಆ್ಯಪ್ ಖಾತೆ

ಇತ್ತೀಚೆಗೆ ಪೊಲೀಸ್‌ ಆಯುಕ್ತ ಬಿ.ದಯಾನಂದ್ ಅವರ ಹೆಸರಿನಲ್ಲೇ ನಕಲಿ ವಾಟ್ಸ್ ಆ್ಯಪ್ ಖಾತೆ ತೆರೆದಿದ್ದ ಖದೀಮರು ವಂಚನೆಗೆ ಮುಂದಾಗಿದ್ದರು. ಖದೀಮರು ಪೊಲೀಸ್ ಕಮಿಷನರ್ ಪೋಟೋವನ್ನು ವಾಟ್ಸ್ ಆ್ಯಪ್ ಡಿಪಿಗೆ ಹಾಕಿದ್ದರು.

ಬಳಿಕ ನಾನು ಬಿ.ದಯಾನಂದ್, ಬೆಂಗಳೂರು ಪೊಲೀಸ್ ಕಮಿಷನರ್ ಎಂದು ಆಪ್ತರಿಗೆ, ಸಾರ್ವಜ ನಿಕರಿಗೆ, ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವು ಜನರಿಗೆ ಮೆಸೇಜ್ ಕಳುಹಿಸಲಾಗಿತ್ತು.

ಆ ಮೂಲಕ ಕಮಿಷನರ್ ಹೆಸರಲ್ಲಿ ಹಣ ವಸೂಲಿಗೆ ಮುಂದಾಗಿದ್ದರು ಎಂದು ಶಂಕಿಸಲಾಗಿತ್ತು. ಬಳಿಕ ಈ ವಿಚಾರ ಸೈಬರ್ ಕ್ರೈಂ ಪೊಲೀಸರ ಗಮನಕ್ಕೆ ಬರುತ್ತಿದ್ದಂತೆ ನಕಲಿ ಖಾತೆಯನ್ನು ಡಿ ಆಕ್ಟಿವೇಟ್ ಮಾಡಲಾಗಿತ್ತು.

ಸೈಬರ್ ಕ್ರೈಂ ಪೊಲೀಸರಿಂದ ಆರೋಪಿಗಾಗಿ ಶೋಧ ನಡೆದಿತ್ತು. ಕರ್ನಾಟಕದಲ್ಲಿ ಇತ್ತೀಚೆಗೆ ಮಿತಿಮೀರಿದ ಸೈಬರ್ ಅಪರಾಧಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಆಯುಕ್ತ ಬಿ.ದಯಾನಂದ ಹೇಳಿದ್ದರು.

ಸರಕಾರಿ ಅಧಿಕಾರಿ ಗಳಂತೆ ನಟಿಸಿ ನಿಮ್ಮನ್ನು ಯಾಮಾರಿಸಬಹುದು. ಹಣಕ್ಕೆ ಬೇಡಿಕೆ ಇಡಬಹುದು. ಹಾಗಾಗಿ ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದರು. ಆಯುಕ್ತರ ಹೆಸರಿನಲ್ಲಿ ತೆರೆಯಲಾಗಿರುವ ಈ ನಕಲಿ ಫೇಸ್‌ಬುಕ್ ಖಾತೆಯು ಹಿಂದಿ ಭಾಷೆಯಲ್ಲಿದೆ.

ಈ ಖಾತೆಯ ಮೂಲಕ ಖದೀಮರು, ಸಾಮಾನ್ಯ ಜನರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದಾರೆ. ಈ ಖಾತೆಯಿಂದ ಕಳುಹಿಸಲಾಗುವ ಸಂದೇಶ ಅಥವಾ ರಿಕ್ವೆಸ್ಟ್ ಆಯುಕ್ತರಿಂದ ಬಂದಿರುವಂತೆ ತೋರಿಸುವಂತೆ ರಚಿತವಾಗಿವೆ, ಇದು ಗೊಂದಲವನ್ನುಂಟು ಮಾಡುತ್ತಿದೆ ಎಂದು ವರದಿಯಾಗಿದೆ.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!