Doddaballapura; The procession, which was not even able to withstand the rain, was a celebration.. The chant of Jai Shri Ram reached the end.

ದೊಡ್ಡಬಳ್ಳಾಪುರ; ಮಳೆಗೂ ಜಗ್ಗದ ಶೋಭಾಯಾತ್ರೆ ಸಂಭ್ರಮ.. ಮುಗಿಲು ಮುಟ್ಟಿದ ಜೈ ಶ್ರೀರಾಮ್ ಘೋಷಣೆ

ದೊಡ್ಡಬಳ್ಳಾಪುರ (Doddaballapura): ವಿಶ್ವಹಿಂದೂಪರಿಷತ್ ಬಜರಂಗದಳ ದೊಡ್ಡಬಳ್ಳಾಪುರ ಪ್ರಖಂಡವತಿಯಿಂದ ಆಯೋಜಿಸಲಾಗಿರುವ ಶ್ರೀರಾಮ ಶೋಭಾ ಯಾತ್ರೆ ಅದ್ದೂರಿಯಾಗಿ ನಡೆಯುತ್ತಿದೆ.

ಮಧ್ಯಾಹ್ನ 3ಗಂಟೆಗೆ ನಗರದ ಪಿಎಲ್‌ಡಿ ಬ್ಯಾಂಕ್ ಮುಂಭಾಗದಿಂದ ಆರಂಭವಾಗಿರುವ ಶೋಭಾಯಾತ್ರೆ ಮಳೆಯ ನಡುವೆಯು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಿದೆ.

ಭಾರತ ಮಾತೆ, ಶ್ರೀರಾಮ, ಹನುಮ, ಶಿವ, ಭುವನೇಶ್ವರಿ, ಡಾ.ಬಿ.ಆರ್.ಅಂಬೇಡ್ಕರ್, ಶಿವಾಜಿ ಪ್ರತಿಮೆಗಳೊಂದಿಗೆ ವಿವಿಧ ಕಲಾತಂಡಗಳು ಭಾಗವಹಿಸಿವೆ.

ಶ್ರೀರಾಮನ ಚಿತ್ರವುಳ್ಳ ಕೇಸರಿ ಧ್ವಜ ಹಿಡಿದು ಜೈ ಶ್ರೀ ರಾಮ್.. ಜೈ‌ ಶ್ರೀ ರಾಮ್ ಎಂದು ಭಕ್ತಿ ಭಾವದಿಂದ ಭಕ್ತರು ಉದ್ಘೋಷ ಕೂಗಿದರು.

ಶೋಭಾ ಯಾತ್ರೆಯಲ್ಲಿ ಸಾವಿರಾರು ಯುವಕರು ಶ್ರೀ ರಾಮನ‌ ಭಕ್ತಿಗೀತೆಗಳಿಗೆ ಹೆಜ್ಜೆ ಹಾಕಿ ಸಂಭ್ರಮಿಸುತ್ತಿದ್ದಾರೆ.

ಅಪರ ಪೊಲೀಸ್ ವರಿಷ್ಠಾಧಿಕಾರಿ ನಾಗರಾಜ್, ಡಿವೈಎಸ್ಪಿ ರವಿ, ಇನ್ಸ್ಪೆಕ್ಟರ್ಗಳಾದ ಅಮರೇಶ್ ಗೌಡ, ಸಾಧಿಕ್ ಪಾಷಾ, ಡಾ.ಎಂ.ಬಿ.ನವೀನ್ ಕುಮಾರ್, ರಾವ್ ಗಣೇಶ್ ಜನಾರ್ಧನ್, ಸೇರಿದಂತೆ ವಿಶ್ವನಾಥಪುರ, ನೆಲಮಂಗಲ ಮುಂತಾದ ಕಡೆಗಳಿಂದ ಸಾವಿರಾರು ಸಿಬ್ಬಂದಿಗಳು ಭದ್ರತೆಯಲ್ಲಿ ನಿರತರಾಗಿದ್ದಾರೆ.

ಸಂಜೆ ಕಾಸರಗೂಡಿನ ಕುಂಟಾರು ರವೀಶ್ ತಂತ್ರಿ ಅವರಿಂದ ದಿಕ್ಸೂಚಿ ಭಾಷಣವಿದೆ. ಸಂಜೆ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಲೇಸರ್ ಶೋ, ಬೃಹತ್ ರಾವಣ ದಹನ ಮತ್ತು ಆಕರ್ಷಕ ಸಿಡಿಮದ್ದುಗಳ ಪ್ರದರ್ಶನ ಕಾರ್‍ಯಕ್ರಮಗಳಿವೆ.

ರಾಜಕೀಯ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು (JDS) ಏನೇ ಹೇಳಿದರೂ ಮಾತಾಡಬೇಡಿ ಎಂದು ನಮ್ಮವರಿಗೆ ಹೇಳಿದ್ದೇನೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H.D. Kumaraswamy) ಮಾತನಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ತಿಳಿಸಿದರು.

[ccc_my_favorite_select_button post_id="119469"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಗೀತಂ ವಿಶ್ವವಿದ್ಯಾಲಯದಲ್ಲಿ (Geetham University) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ (Suicide) ಪ್ರಕರಣಗಳಿಗೆ ಕೊನೆ ಇಲ್ಲವೇ ಎಂಬ ಪ್ರಶ್ನೆ ಪೋಷಕರನ್ನು ಕಾಡುತ್ತಿದ್ದು, ವಿದ್ಯಾರ್ಥಿಗಳ ಆಕಸ್ಮಿಕ ಸಾವು, ಆತ್ಮಹತ್ಯೆ ಕುರಿತಂತೆ ಪದೇ ಪದೇ ದೂರು ದಾಖಲಾಗುತ್ತಿದೆ.

[ccc_my_favorite_select_button post_id="119472"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!