Ambedkar was a great leader and humanitarian; Cmsiddaramaiah

ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಸಂವಿಧಾನ ಶಿಲ್ಪಿ ಡಾ: ಬಿ. ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ನಮ್ಮ ಸರ್ಕಾರವತ್ಯಂತ ಗೌರವ, ನಮ್ರತೆಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಚರಿಸುತ್ತಿದೆ. ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಅನ್ಯಾಯದಿಂದ ಮುಕ್ತಿ ಪಡೆಯಬೇಕೆಂದು ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದರು.

ಅಂಬೇಡ್ಕರ್ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಿಸಲು ಶ್ರಮಿಸಿದವರು

ಮಹಾನ್ ಮೇಧಾವಿಯಾಗಿದ್ದ ಅಂಬೇಡ್ಕರ್, ಅವರ ಸ್ವಾರ್ಥಕ್ಕಾಗಿ ಓದಿಕೊಳ್ಳದೆ ಶೋಷಿತರ, ಅಸ್ಪೃಶ್ಯತೆಯಿಂದ ನರಳುತ್ತಿರುವವ ಜನರಿಗೆ ವಿಮೋಚನೆ ನೀಡಲೆಂದೇ ಜ್ಞಾನಾರ್ಜನೆ ಮಾಡಿಕೊಂಡಿದ್ದರು. ದೇಶದ ಕೆಲವೇ ಮೇಧಾವಿಗಳಲ್ಲಿ ಅವರೂ ಒಬ್ಬರು. ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ.

ಎಲ್ಲರೂ ಮನುಷ್ಯರಾಗಿ ಬದುಕಬೇಕು. ಸಮಾಜದಲ್ಲಿ ಎಲ್ಲರಿಗೂ ಸಮಾನತೆ ದೊರಕಬೇಕು. ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಬೇಕು. ಹಾಗಾದಾಗ ಮಾತ್ರ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುತ್ತದೆ. ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು. ಅಸ್ಪೃಶ್ಯತೆ ನಾಶವಾಗಬೇಕು ಎಂದು ಅಂಬೇಡ್ಕರ್ ಶ್ರಮಿಸಿದ್ದರು ಎಂದರು.

ಮನುವಾದಿಗಳು ಇಂದು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ

ಇತ್ತೀಚೆಗೆ ಕೆಲವರು ಮಹಾತ್ಮಾ ಗಾಂಧಿ ಹಾಗೂ ಅಂಬೇಡ್ಕರ್ ಅವರನ್ನು ತಮಗೆ ಸೇರಿದವರೆಂದು (own) ಬಿಂಬಿಸಲು ಪ್ರಾರಂಭಿಸಿದ್ದಾರೆ.

ಮಹಾತ್ಮಾ ಗಾಂಧಿಯವರನ್ನು ಕೊಂದವರು, ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ ಮನುವಾದಿಗಳೇ ಇಂದು ಅವರನ್ನು ತಮ್ಮ ಸ್ವಂತ ಎನ್ನಲು ಪ್ರಾರಂಭಿಸಿದ್ದಾರೆ.

ಸಂವಿಧಾನ ಜಾರಿಗೆ ಬಂದ ನಾಲ್ಕೈದು ದಿನಗಳಲ್ಲೇ ‘ದಿ ಆರ್ಗನೈಜರ್’ ಪತ್ರಿಕೆಯಲ್ಲಿ ವಿರೋಧ ಮಾಡಿ ಬರೆದಿದ್ದರು. ಈಗ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿತ್ತು ಎಂದು ಮಾತನಾಡುತ್ತಾರೆ.

ಅಂಬೇಡ್ಕರ್ ಅವರೇ ನನ್ನನ್ನು ಸೋಲಿಸಿದವರು ಸಾವರ್ಕರ್ ಮತ್ತು ಕಮ್ಯುನಿಸ್ಟ್ ನಾಯಕ ಎಸ್.ಎ ಡಾಂಗೆ ಎಂದು ಪತ್ರ ಬರೆದಿದ್ದರು. ಬಿಜೆಪಿ ಸ್ವಾರ್ಥಕ್ಕಾಗಿ ಮಹಾತ್ಮಾ ಗಾಂಧಿ, ಸರ್ದಾರ್ ವಲ್ಲಭಭಾಯ್ ಪಟೇಲ್, ಅಂಬೇಡ್ಕರ್ ಅವರನ್ನು ತಮ್ಮದೇ ಸ್ವಂತ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ.

ಅಂಬೇಡ್ಕರ್ ಅವರು ‘ನಾನು ಹಿಂದೂ ಆಗಿ ಹುಟ್ಟಿದೆ ಆದರೆ ಹಿಂದೂವಾಗಿ ಸಾಯಲಾರೆ’ ಎಂದು ಹೇಳಿದ್ದರು. ಹಿಂದೂ ಧರ್ಮ ತ್ಯಜಿಸಿ ಭೌದ್ಧ ಧರ್ಮವನ್ನು ಸ್ವೀಕಾರ ಮಾಡಿದರು. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಿಸಿ, ಅದು ಸಾಧ್ಯವಾಗುವುದಿಲ್ಲ ಎಂದು ಅರಿವಾದ ನಂತರ ಹಿಂದೂ ಧರ್ಮವನ್ನು ತ್ಯಜಿಸಿ, ಮಾನವೀಯತೆ ಮತ್ತು ಸಮಾನತೆ ಇದ್ದ ಭೌದ್ಧ ಧರ್ಮವನ್ನು ಸ್ವೀಕರಿಸಿದರು ಎಂದರು.

ನೆಹರೂ ಅಂಬೇಡ್ಕರ್ ಅವರನ್ನು ವಿರೋಧಿಸಲಿಲ್ಲ

ಬಿಜೆಪಿಯವರು ಜವಾಹಾರ್ ನೆಹರೂ ಅವರನ್ನು ವಿರೋಧಿಸುತ್ತಾರೆ. ಅಂಬೇಡ್ಕರ್ ಅವರನ್ನು ನೆಹರೂ ವಿರೋಧಿಸಲಿಲ್ಲ. ಹಾಗಿದ್ದರೆ, ಅಂಬೇಡ್ಕರ್ ಅವರನ್ನು ಸಂವಿಧಾನ ಬರೆಯಲು ಆಯ್ಕೆ ಮಾಡುತ್ತಿರಲಿಲ್ಲ. ಹಿಂದೂ ಕೋಡ್ ಬಿಲ್ ತಂದಾಗ ನೆಹರೂ ಅದರ ಪರವಾಗಿಯೇ ಇದ್ದರು. ನಮ್ಮಲ್ಲಿರುವ ಕೆಲವು ಶಕ್ತಿಗಳು ನೆಹರೂ ಅವರು ಅದನ್ನು ಜಾರಿ ಮಾಡಲು ಬಿಡಲಿಲ್ಲ. ಆದರೆ ಹಿಂದೂ ಕೋಡ್ ಬಿಲ್ ನಲ್ಲಿರುವ ಅಂಶಗಳನ್ನು ನೆಹರೂ ಅವರು ಅವರ ಅಧಿಕಾರದ ಅವಧಿಯಲ್ಲಿ ಜಾರಿ ಮಾಡುವ ಪ್ರಯತ್ನ ಮಾಡಿದ್ದರು ಎಂದರು.

ಜಾತಿ ಜನಗಣತಿ

ಏಪ್ರಿಲ್ 17 ರಂದು ಸಚಿವ ಸಂಪುಟದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಜನಗಣತಿಯ ಬಗ್ಗೆ ಚರ್ಚಿಸಲೆಂದೇ ಕರೆಯಲಾಗಿದೆ. ಚರ್ಚೆ ಮಾಡಿದ ನಂತರ ಈ ಬಗ್ಗೆ ಮಾತನಾಡುವುದಾಗಿ ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!