Hubballi case; Encounter was right - Nikhil Kumaraswamy

ಹುಬ್ಬಳ್ಳಿ ಪ್ರಕರಣ; ಎನ್ ಕೌಂಟರ್ ಮಾಡಿದ್ದು ಸರಿ – ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಜಾತಿ ಗಣತಿ ವರದಿಯು ಸಿದ್ದರಾಮಯ್ಯ ಅವರಿಂದ ಸಿದ್ದರಾಮಯ್ಯ ಅವರಿಗಾಗಿ ಸಿದ್ದರಾಮಯ್ಯನವರೇ ಮಾಡಿಕೊಂಡ ವರದಿ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಲೇವಡಿ ಮಾಡಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಸೋರಿಕೆ ಆಗಿರುವ ಈ ವರದಿಯಲ್ಲಿ ಇವೆ ಎನ್ನಲಾದ ಅಂಕಿ ಅಂಶಗಳನ್ನು ಒಮ್ಮೆ ನೋಡಿದರೆ ಈ ವರದಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಕ್ಷೇಮಕ್ಕಾಗಿ ತಯಾರು ಮಾಡಿಸಿಕೊಂಡಿರುವ ವರದಿ ಎಂದು ವಾಗ್ದಾಳಿ ನಡೆಸಿದರು.

ನಮ್ಮ ರಾಜ್ಯದಲ್ಲಿ ಏಳು ಕೋಟಿ ಕನ್ನಡಿಗರು ಇದ್ದಾರೆ. ಸಮೀಕ್ಷೆ ನಡೆಸಿದವರು ಎಷ್ಟು ಮನೆಗಳಿಗೆ ಹೋಗಿದ್ದಾರೆ ಎಂಬ ದಾಖಲೆಗಳು ಇರಬೇಕು. ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿಗಳು ಆಗಿರುವ ನಮ್ಮ ತಂದೆಯ ಮನೆಗೆ ಯಾರೂ ಬಂದು ಸಮೀಕ್ಷೆ ಮಾಡಿಲ್ಲ. ಅದೇ ರೀತಿ ನಮ್ಮ ಅಜ್ಜ, ಈ ದೇಶದ ಮಾಜಿ ಪ್ರಧಾನಿಗಳು. ಅವರ ಮನೆಗೂ ಯಾರೂ ಭೇಟಿ ಕೊಟ್ಟು ಸಮೀಕ್ಷೆ ಮಾಡಿಲ್ಲ.

ಇಂಥ ಅಸಂಖ್ಯಾತ ಉದಾಹರಣೆಗಳನ್ನು ಕೊಡಬಲ್ಲೆ. ನನಗೆ ಗಣತಿ ನಡೆದಿರುವ ಬಗ್ಗೆಯೇ ಅನುಮಾನವಿದೆ. ಗಣತಿ ವೈಜ್ಞಾನಿಕವಾಗಿ, ಪ್ರತಿಯೊಂದು ಕುಟುಂಬದ ಮನೆ ಬಾಗಿಲಿಗೆ ಹೋಗಿ ಮಾಡಬೇಕಿತ್ತು. ಆ ರೀತಿ ಆಗಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆರೋಪಿಸಿದರು.

ಜಾತಿ ಗಣತಿ ನೆಪದಲ್ಲಿ ಸಿದ್ದರಾಮಯ್ಯ ಟೆಸ್ಟ್ ರನ್ ಮಾಡ್ತಿದ್ದಾರೆ!

ಜಾತಿ ಗಣತಿ ವರದಿಯವು ಎನ್ನಲಾದ ಕೆಲ ಅಂಕಿ-ಅಂಶ ಸೋರಿಕೆಯಾಗಿದೆ. ಎಲ್ಲಾ ಪತ್ರಿಕೆ, ಸುದ್ದಿವಾಹಿನಿಗಳು ಆ ಅಂಕಿ ಅಂಶಗಳು ಬಿತ್ತರವಾಗಿತ್ತಿವೆ. ಈ ಅಂಕಿ ಅಂಶಗಳನ್ನು ಹೊರ ಹಾಕಿರುವವರು ಅಥವಾ ಸೋರಿಕೆ ಮಾಡಿದವರು ಯಾರು? ವರದಿ ಅಧಿಕೃತವಾಗಿ ಇನ್ನೂ ಬಹಿರಂಗ ಆಗಿಲ್ಲ. ಅಂಕಿ ಅಂಶಗಳು ಎಲ್ಲಾ ಕಡೆ ತೇಲಾಡುತ್ತಿವೆ. ಆದರೆ, ಇದು ಅನಧಿಕೃತ ಮಾಹಿತಿ.

ಊಹಾಪೋಹದ ಅಂಕಿ ಅಂಶಗಳು. ಇದು ಸರ್ಕಾರದ ಕಡೆಯಿಂದಲೇ ಸೋರಿಕೆ ಆಗಿರುವ ಅನಧಿಕೃತ ಅಂಕಿ ಅಂಶಗಳು ಎನ್ನುವುದು ನನ್ನ ಅಭಿಪ್ರಾಯ. ಸಾರ್ವಜನಿಕ ವಲಯದಲ್ಲಿ ಯಾವ ರೀತಿ ಚರ್ಚೆ ಬರಬಹುದೆಂದು ನೋಡೋಣ ಎಂದು ಸಿದ್ದರಾಮಯ್ಯ ಅವರು ಟೆಸ್ಟ್ ರನ್ ಮಾಡುತ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದರು.

ಗಣತಿಗೆ ₹150 ಕೋಟಿ ಖರ್ಚಾಗಿದೆ ಸರಿ, ತನಿಖೆ ನಡೆಸಿ

ಕಾಂತರಾಜು ಆಯೋಗದ ವರದಿಗೆ ₹150 ಕೋಟಿ ಖರ್ಚು ಮಾಡಿದ್ದಾರೆ ಎಂದು ಸರ್ಕಾರ ಹೇಳುತ್ತಿದೆ. ಆದರೆ, ಆಯೋಗ ಯಾರ ಮನೆಗೂ ಹೋಗಿ ಸಮೀಕ್ಷೆ ಮಾಡಿಲ್ಲ ಎಂದು ಜನರೇ ಹೇಳುತ್ತಿದ್ದಾರೆ. ನಾಲ್ಕು ಗೋಡೆಗಳ ಮಧ್ಯೆ ಸೃಷ್ಟಿಯಾದ ವರದಿ ಇದು. ಹಾಗಾದರೆ, ಇಷ್ಟು ಮೊತ್ತವನ್ನು ಎಲ್ಲಿ ಖರ್ಚು ಮಾಡಿದ್ದಾರೆ. ಯಾರ ಮನೆಗೆ ಹೋಗಿದ್ದಾರೆ? ಯಾಕೆ ಇಷ್ಟು ಹಣ ಖರ್ಚು ಮಾಡಿದ್ದಾರೆ? ಲೆಕ್ಕ ಬೇಕಲ್ಲವೇ? ಇದರ ಬಗ್ಗೆಯೂ ತನಿಖೆ ನಡೆಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಜನರ ಕಲ್ಯಾಣಕ್ಕಾಗಿ ಜಾತಿ ಗಣತಿ ನಡೆಯಬೇಕು

ಜಾತಿಗಣತಿ ಆಗಬೇಕಿರೋದು ಆರ್ಥಿಕವಾಗಿ, ಶೈಕ್ಷಣಿಕ, ಸಮಾನತೆ ಜಾತಿಗಣತಿ ಆಗಬೇಕಿತ್ತು. ಅದರೆ ಜಾತಿಗಣತಿ ಒಂದು ದಶಕದ ಹಿಂದೆಯೇ ಕಾಂತರಾಜು ಸಮಿತಿಯನ್ನ ರಚನೆ ಮಾಡಿ ಅವರ ಮೂಲಕ ಸರ್ವೇ ಮಾಡಲು ತೆಗೆದುಕೊಂಡು ತೀರ್ಮಾನ ಇದು ಎಂದು ನಿಖಿಲ್ ಅವರು ತಿಳಿಸಿದರು.

ಜಾತಿ ಗಣತಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಕೆಲ ಸಚಿವರು ಅಸಮಾಧಾನ ಹೊರ ಹಾಕಿದ್ದಾರೆ. ಹಾಗಾಗಿ ಎಲ್ಲಿಯವರೆಗೆ ವರದಿ ಹೊರಗೆ ಬಂದಿಲ್ಲ. ಅಲ್ಲಿಯವರೆಗೆ ನಾವು ಚರ್ಚೆ ಮಾಡೋಕೆ ಆಗಲ್ಲ. ಒಟ್ಟಿನಲ್ಲಿ ರಾಜ್ಯದ ಮುಖ್ಯಮಂತ್ರಿ ರಾಜಕೀಯ ಅಸ್ತಿತ್ವಕ್ಕಾಗಿ ಜಾತಿಗಣತಿ ಮಂಡಿಸುವುದಕ್ಕೆ ಮುಂದಾಗಿದ್ದಾರಾ ಎಂಬ ಅನುಮಾನಗಳು ಚರ್ಚೆ ನಡೆಯುತ್ತಿದೆ ಎಂದರು.

ಒಂದು ಸಮುದಾಯ ಮೆಚ್ಚಿಸುವುದಕ್ಕೆ ಗಣತಿ

ಒಂದು ಸಮುದಾಯ ಮೆಚ್ಚಿಸುವುದಕ್ಕೆ ಮತ್ತು ತಮ್ಮ ಕುರ್ಚಿ ಉಳಿಸಿಕೊಳ್ಳುವುದಕ್ಕೆ ಜಾತಿ ಗಣತಿ ಮಂಡಿಸುತ್ತಿದ್ದಾರೆ. ಒಂದು ಸಲ ಅಂಕಿ ಅಂಶಗಳ ಹೊರ ಹಾಕಲಿ. ಜಾತಿ ಗಣತಿ ಮಾಡಿರುವುದರಲ್ಲಿ ಸ್ಪಷ್ಟತೆ, ಪಾರದರ್ಶಕ ಇಲ್ಲದಿದ್ದರೆ. ನಾವು ಮರುಪರಿಶೀಲನೆಗೆ ಒತ್ತಡ ಹಾಕ್ತೀವಿ. ಪಾರದರ್ಶಕ ಇದೆ, ವೈಜ್ಞಾನಿಕವಾಗಿ ಇದೆ ಸಾರ್ವಜನಿಕ ವಲಯದಲ್ಲಿ ಇಡಲಿ ಎಂದು ಆಗ್ರಹಿಸಿದರು.

ಸರ್ಕಾರ ಅಂಕಿ ಅಂಶಗಳ ಬಿಡುಗಡೆ ಮಾಡಿ ಟೆಸ್ಟ್ ರನ್ ಮಾಡ್ತಾ ಇರಬಹುದು. ಇದು ಅನಧಿಕೃತ ಮಾಹಿತಿನೇ ಎಲ್ಲರಿಗೂ ಆತಂಕ ಇದೆ. ಜೆಡಿಎಸ್ ಅಲ್ಲ, ಎಲ್ಲರಿಗೂ ಆತಂಕ ಇದೆ, ಅನುಮಾನ ಇದೆ ಹಲವಾರು ಸಮುದಾಯಗಳಲ್ಲಿ ಹಾಗೂ ಸ್ವಾಮೀಜಿಗಳಲ್ಲಿ ಆತಂಕ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಹುಬ್ಬಳ್ಳಿ ಪ್ರಕರಣ; ಎನ್ ಕೌಂಟರ್ ಮಾಡಿದ್ದು ಸರಿ ಎಂದ ನಿಖಿಲ್

ಹುಬ್ಬಳ್ಳಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪಾತಕಿಯನ್ನು ಎನ್ ಕೌಂಟರ್ ಮಾಡಿದ್ದು ಸರಿ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಈ ಘಟನೆ ಅತ್ಯಂತ ಹೇಯ. ಮನುಕುಲವೇ ತಲೆ ತಗ್ಗಿಸುವ ಇಂಥ ಘಟನೆಗಳು ಪದೇ ಪದೆ ನಡೆಯುತ್ತಿವೆ. ಹುಬ್ಬಳ್ಳಿ ಪ್ರಕರಣದಲ್ಲಿ ಶೂಟ್ ಔಟ್ ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಎರಡು ವರ್ಷಗಳಿಂದ ಅನೇಕ ಘಟನೆಗಳು ನಡೆಯುತ್ತಿವೆ. ಇಂತಹ ಪ್ರಕರಣಗಳು ನಡೆಯದಂತೆ ಸರಕಾರ ಕ್ರಮ ಕೈಗೊಳ್ಳಬೇಕು ಎಂದರು.

ಕಳೆದ ಎರಡು ವರ್ಷದ ಕಾಂಗ್ರೆಸ್ ಸರ್ಕಾರದಲ್ಲಿ ಅರಾಜಕತೆ ಮಿತಿಮೀರಿದೆ. ಮಹಿಳೆಯರು, ಮಕ್ಕಳು, ಜನಸಾಮಾನ್ಯರ ರಕ್ಷಣೆ, ಸುರಕ್ಷತೆ ಬಗ್ಗೆ ಕಾಳಜಿ ಇಲ್ಲವಾಗಿದೆ. ರಾಜ್ಯದಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಕೊಲೆ, ದರೋಡೆ, ಹಲ್ಲೆಯಂತಹ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಜನಸಾಮಾನ್ಯರಿಗೆ ಅಸುರಕ್ಷತೆಯ ಭಯ ಕಾಡುತ್ತಿದೆ ಎಂದು ಕಿಡಿಕಾರಿದರು.

ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಜವರಾಯಿ ಗೌಡ, ಮಾಜಿ ಶಾಸಕ ಡಾ. ಕೆ.ಅನ್ನದಾನಿ, ಮಾಜಿ ಎಂಎಲ್ಸಿ ಹಾಗೂ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ, ರಾಜ್ಯ ಮಹಿಳಾ ಜೆಡಿಎಸ್ ಅಧ್ಯಕ್ಷೆ ರಶ್ಮಿ ರಾಮೇಗೌಡ ಮುಂತಾದವರು ಉಪಸ್ಥಿತರಿದ್ದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!