Ready for CET exam..!; 5 exam centers in Doddaballapura taluk

CET ಪರೀಕ್ಷೆಗೆ ಸಜ್ಜು..!; ದೊಡ್ಡಬಳ್ಳಾಪುರ ತಾಲೂಕಿನಲ್ಲಿ 5 ಪರೀಕ್ಷಾ ಕೇಂದ್ರಗಳು

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ 5 ಪರೀಕ್ಷಾ ಕೇಂದ್ರಗಳಲ್ಲಿ  ಒಟ್ಟು 2021 ವಿದ್ಯಾರ್ಥಿಗಳು ಏಪ್ರಿಲ್ 16 ಮತ್ತು 17 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ( CET) ಬರೆಯಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ  ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಎನ್.ಮೋಹನ್ ಕುಮಾರ್ ತಿಳಿಸಿದ್ದಾರೆ.

ಅವರು ಸಿಇಟಿ ಪರೀಕ್ಷೆಯ ಪೂರ್ವ ಸಿದ್ದತೆ ಕುರಿತು ಮಾಹಿತಿ ನೀಡಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜಿನಲ್ಲಿ 688,     ಮಾದಗೊಂಡನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ  432,    ಹೊಸ ಬಸ್ ನಿಲ್ದಾಣ ಮುಂಭಾಗದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ  360,  ವಿದ್ಯಾನಿಧಿ ಸ್ವತಂತ್ರ್ಯ ಪದವಿಪೂರ್ವ ಕಾಲೇಜಿನಲ್ಲಿ 270,  ಶ್ರೀ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 271  ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆ ನಡೆಯುತ್ತದೆ ಎಂದರು.

ಏ.16 ರಂದು ಬುಧವಾರ 10.30 ರಿಂದ 11.50ರ ವರೆಗೆ ಭೌತವಿಜ್ಞಾನ, ಮಧ್ಯಾಹ್ನ 2.30 ರಿಂದ 3.50ರವರೆಗೆ ರಸಾಯನವಿಜ್ಞಾನ ಮತ್ತು ಏ.17 ರಂದು ಗುರುವಾರ ಬೆಳಿಗ್ಗೆ 10.30 ರಿಂದ 11.50ರ ವರೆಗೆ ಗಣಿತ, ಮಧ್ಯಾಹ್ನ 2.30 ರಿಂದ 3.50ರ ವರೆಗೆ ಜೀವವಿಜ್ಞಾನ ಪರೀಕ್ಷೆಗಳು ದೊಡ್ಡಬಳ್ಳಾಪುರ ನಗರದ 5 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯುತ್ತದೆ ಎಂದರು.

ವೆಬ್ ಕಾಸ್ಟಿಂಗ್

ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಸಿಇಟಿ ಪರೀಕ್ಷೆಯ 5 ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಕಡ್ಡಾಯವಾಗಿದೆ. ಯಾವುದೇ ಲೋಪಗಳು ಉಂಟಾಗದಂತೆ ಪರೀಕ್ಷೆಗಳು ಸುಗಮವಾಗಿ ನಡೆಸಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ‌ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ.

ಸಿಇಟಿ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್‌ವರೆಗೆ ನಿಷೇಧಾಜ್ಞೆ ಜಾರಿ ಇರುತ್ತದೆ. ಝೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್ ಬಂದೋಬಸ್ತ್ ಸೇರಿದಂತೆ ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ಮೂಲ ಸೌಕರ್ಯಗಳ ಕಲ್ಪಿಸುವ ವ್ಯವಸ್ಥೆ ಮಾಡಲಾಗಿದೆ ಎಂದರು.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!