ದೊಡ್ಡಬಳ್ಳಾಪುರ (Harithalekhani): ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿ (Accident) ಹೊಡೆದಿರುವ ಘಟನೆ ತಾಲ್ಲೂಕಿನ ಮಾಕಲಿ ದುರ್ಗಾ ಸಮೀಪ ಘಟನೆ.
ಬೆಂಗಳೂರು ನಿಂದ ಹಿಂದೂಪುರ ಮಾರ್ಗವಾಗಿ ಸಂಚರಿಸುತ್ತಿದ್ದ ಖಾಸಗಿ ಬಸ್ ಇದಾಗಿದ್ದು, ಕೆಲ ಪ್ರಯಾಣಿಕರಿಗೆ ಕೈ ಕಾಲು ಮುರಿತ ಸೇರಿದಂತೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಕೂಡಲೇ ಗಾಯಾಳುಗಳು ದೊಡ್ಡಬಳ್ಳಾಪುರ ನಗರದ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮಳೆಯಿಂದಾಗಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿರುವ ಬಸ್ ಪಲ್ಟಿ ಹೊಡೆದಿದೆ ಎನ್ನಲಾಗುತ್ತಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.