Commission scam in Congress government; 224 MLAs know about it, says H.D. Kumaraswamy

ಜಾತಿ ಗಣತಿ ವಿವಾದಕ್ಕೆ ಹೊಸ ಟ್ವಿಸ್ಟ್ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು (Harithalekhani): ಜಾತಿ ಗಣತಿ ವರದಿಗೆ ರಾಜ್ಯದ ಉದ್ದಗಲಕ್ಕೂ ಆಕ್ರೋಶ ಭುಗಿಲೇಳುತ್ತಿರುವ ಬೆನ್ನಲ್ಲಿಯೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು 2A ಪ್ರವರ್ಗ ಸೌಲಭ್ಯ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಅತೀ ಹಿಂದುಳಿದ ‌2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು? ಎಂದು ಪ್ರಶ್ನೆ ಮಾಡಿದ್ದಾರೆ.

ಜಾತಿ ಗಣತಿ ರಾಜಕೀಯ ಫಸಲಿಗೆ ಹೊಂಚು ಹಾಕಿರುವ ಸಿದ್ದರಾಮಯ್ಯನವರೇ.. ಸತ್ಯವನ್ನೇ ಹೇಳಿ ಎಂದು ಟಾಂಗ್ ಕೊಟ್ಟಿರುವ ಕೇಂದ್ರ ಸಚಿವರು; ಅತೀ ಹಿಂದುಳಿದ ‌2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು? ಕಿರುಬೆರಳ ತುದಿಯಲ್ಲೇ ದತ್ತಾಂಶವಿದೆ. ನೀವು ಸುಳ್ಳು ಹೇಳಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಅಲ್ಲವೇ? ಸತ್ಯಮೇವ ಜಯತೇ.. ಎಂದು ಕುಟುಕಿದ್ದಾರೆ.

ನಿಮಗೂ ಗೊತ್ತು. 2A ಪ್ರವರ್ಗದಲ್ಲಿ 101 ಜಾತಿಗಳಿವೆ, 15% ಮೀಸಲು ಪಾಲು ಇದೆ. ಈ ಪಾಲಿನಲ್ಲಿ ಅತಿಹೆಚ್ಚು ಪಾಲು ನುಂಗಿದವರು ಯಾರು ದೇವ್ರು..? ಈ ನುಂಗುವಿಕೆಯಲ್ಲಿಯೂ ನಿಮ್ಮ ಪಾತ್ರವೇನು ಸ್ವಾಮೀ..? ಸತ್ಯ ಹೇಳಿ ಎಂದು ಕೇಂದ್ರ ಸಚಿವರು ಕೇಳಿದ್ದಾರೆ.

ನೇಮಕಾತಿ, ವೃತ್ತಿಪರ ಕೋರ್ಸ್ ಪ್ರವೇಶ ವಿಷಯ ಪ್ರಸ್ತಾಪ

ಕಳೆದ 15-20 ವರ್ಷಗಳಲ್ಲಿ A B C D ಗ್ರೂಪ್ ಗಳಲ್ಲಿ ನಡೆದಿರುವ ನೇಮಕಾತಿ, ವೃತ್ತಿಪರ ಕೋರ್ಸ್‌ ಪ್ರವೇಶ, ಇನ್ನಿತರೆ ಎಲ್ಲಾ ಸೌಲಭ್ಯಗಳ ಅಂಕಿ ಅಂಶ ಸುಳ್ಳು ಹೇಳುವುದಿಲ್ಲ, ಹೌದಲ್ಲವೇ? ಎಂದಿರುವ ಕುಮಾರಸ್ವಾಮಿ ಅವರು; ವೃತ್ತಿಪರ ಕೋರ್ಸ್‌; ಅಂದರೆ ಮೆಡಿಕಲ್, ಡೆಂಟಲ್, ಎಂಜಿನಿಯರಿಂಗ್, ಡಿ ಫಾರ್ಮ, ಬಿ ಫಾರ್ಮ, ಕೃಷಿ ಇತ್ಯಾದಿ ವಿಭಾಗಗಳಲ್ಲಿ 2A ಪ್ರವರ್ಗದ ನೂರೊಂದು ಜಾತಿಗಳಲ್ಲಿ ಯಾವ್ಯಾವ ಜಾತಿಯ ಎಷ್ಟೆಷ್ಟು ಮಕ್ಕಳಿಗೆ ಪ್ರವೇಶ ಸಿಕ್ಕಿದೆ. ಇಲ್ಲಿಯೂ ಸಿಂಹಪಾಲು ಪ್ರವೇಶ, ಲಾಭ ದಕ್ಕಿದ್ದು ಯಾರಿಗೆ? ಮಲ್ಲೇಶ್ವರಂ 18ನೇ ಅಡ್ಡರಸ್ತೆಯಲ್ಲಿ (CET) ಸಮಗ್ರ ದತ್ತಾಂಶ ಲಭ್ಯವಿದೆ, ತಾವು ತರಿಸಿ ನೋಡಬಹುದು ಎಂದು ಚಾಟಿ ಬೀಸಿದ್ದಾರೆ.

2A ಪ್ರವರ್ಗದ ನೂರೊಂದು ಸಮಾಜಗಳ ಪೈಕಿ ಎಲ್ಲಾ ನೂರು ಸಮಾಜಗಳಲ್ಲಿ ನನ್ನ ಮನವಿ ಇಷ್ಟೇ; ಒಕ್ಕಲಿಗರು, ವೀರಶೈವ ಲಿಂಗಾಯತರ ಕಡೆ ಬೆರಳು ತೋರಿಸಿ ನಿಮ್ಮ ಮೂಗಿಗೆ ಬೆಣ್ಣೆ ಕೊಸರು ಸವರುತ್ತಿದ್ದಾರೆ! ನಿಮ್ಮ ನ್ಯಾಯಯುತ ಪಾಲಿನಲ್ಲಿ ಸಿಂಹಪಾಲು ಕಬಳಿಸಿದ್ದು ಯಾರೆಂದು ನಿಮಗೂ ಚೆನ್ನಾಗಿ ಗೊತ್ತು? ಆದರೂ ಸುಮ್ಮನಿದ್ದೀರಿ! ಯಾಕೆ? ನಿಮ್ಮ ಎದುರು ನಿಂತು ಲಿಂಗಾಯಿತರು, ಒಕ್ಕಲಿಗರನ್ನು ಬೈದರೇ ನಿಮ್ಮ ಹೊಟ್ಟೆ ತುಂಬುವುದೇ? ನಿಮ್ಮ ಮಕ್ಕಳಿಗೆ ನ್ಯಾಯ ಸಿಗುವುದೇ? ಎಂದು ಅವರು ಖಾರವಾಗಿ ಪ್ರಶ್ನಿಸಿದ್ದಾರೆ.

ಅತೀ ಹಿಂದುಳಿದ 2A ಪ್ರವರ್ಗದಲ್ಲಿ ಅತೀ ಹೆಚ್ಚು ಪಾಲು ಬೆಣ್ಣೆ ತಿಂದವರು ಯಾರು? ಈಗಲಾದರೂ ಸತ್ಯ ಹೇಳಿ ಸಿದ್ದರಾಮಯ್ಯನವರೇ.. ನಿಮ್ಮಿಂದ ಉತ್ತರ ನಿರೀಕ್ಷಿಸುತ್ತೇನೆ. ಸತ್ಯಮೇವ ಜಯತೇ.. ಸತ್ಯಕ್ಕೆ ಜಯವಾಗಲಿ ಎಂದು ಅವರು ಹೇಳಿದ್ದಾರೆ.

ರಾಜಕೀಯ

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ.

“ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ”: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="112873"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!