Mgnarega: 4th place for Bengaluru rural district

ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ: ಬೆಂ.ಗ್ರಾ.ಜಿಲ್ಲೆಗೆ 4ನೇ ಸ್ಥಾನ| Mgnarega

ಬೆಂ.ಗ್ರಾ.ಜಿಲ್ಲೆ (Harithalekhani): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ (Mgnarega) ಯೋಜನೆಯಡಿ 100 ದಿನಗಳ ಉದ್ಯೋಗವನ್ನು ನೀಡಲಾಗುತ್ತಿದ್ದು, ಇದರಿಂದ ರಾಜ್ಯದಲ್ಲಿ ಜಿಲ್ಲೆಯು ಮಾನವ ದಿನಗಳ ಸೃಜನೆಯಲ್ಲಿ ಗುರಿ ಮೀರಿ ಸಾಧನೆಮಾಡಿದ್ದು, ನರೇಗಾ ಯೋಜನೆಯಡಿ 4ನೇ ಸ್ಥಾನವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ಪಡೆದುಕೊಂಡಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಡಿ ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಕಳೆದ 2023-24ನೇ ಸಾಲಿನಲ್ಲಿ 14ನೇ ಸ್ಥಾನದಲ್ಲಿತ್ತು. ಆರ್ಥಿಕ ವರ್ಷ 2024-25ನೇ ಸಾಲಿನಲ್ಲಿ 14 ಲಕ್ಷ ಗುರಿಗೆ 16,310 ಲಕ್ಷ ಮಾನವ ದಿನಗಳ ಸೃಜನೆ ಮಾಡಿ ಶೇ 116.50% ಪ್ರಗತಿಯನ್ನು ಸಾಧಿಸಿದೆ.

ಗ್ರಾಮಗಳ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಿ ಆಸ್ತಿಗಳ ಸೃಜನೆ ಮಾಡುವ ಮೂಲಕ ಗ್ರಾಮೀಣ ಜನರ ಸಬಲೀಕರಣಕ್ಕೆ ಹೆಚ್ಚಿನ ಅದ್ಯತೆಯನ್ನು ನೀಡಿ, ಗುರಿಯನ್ನು ಮಿರಿ ಸಾಧನೆ ಮಾಡುವ ಮೂಲಕ ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು 4ನೇ ಸ್ಥಾನದಲ್ಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್‌ಅನುರಾಧ ತಿಳಿಸಿದ್ದಾರೆ.

ಈ ಯೋಜನೆಯಲ್ಲಿ ಜಿಲ್ಲೆಯಲ್ಲಿ ಮಾನವ ದಿನಗಳ ಸೃಜನೆಯಲ್ಲಿ ತಾಲ್ಲೂಕುವಾರು ಪ್ರಗತಿಯನ್ನು ಸಾಧಿಸಿದೆ, ದೇವನಹಳ್ಳಿ ತಾಲ್ಲೂಕು ಶೇ 113.48%, ದೊಡ್ಡಬಳ್ಳಾಪುರ ತಾಲ್ಲೂಕು ಶೇ 104.19%, ಹೊಸಕೋಟೆ ತಾಲ್ಲೂಕು 139.30% ಮತ್ತು ನೆಲಮಂಗಲ ತಾಲ್ಲೂಕು ಶೇ 91.38% ಪ್ರಗತಿಯನ್ನು ಸಾಧಿಸಿದೆ.

ಸದರಿ ಯೋಜನೆಯಲ್ಲಿ ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದ ಒಟ್ಟು 1,19,669 ಉದ್ಯೋಗ ಚೀಟಿಯನ್ನು ಹೊಂದಿರುವ ನೋಂದಾಯಿತ ಕುಟುಂಬಗಳಿದ್ದು, ಅದರಲ್ಲಿ 2,61,128 ಜನರು ಕೂಲಿಕಾರರಿದ್ದು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ.

ಯೋಜನೆಯಲ್ಲಿ ಉದ್ಯೋಗ ಚೀಟಿಯನ್ನು ಹೊಂದಿರುವ ಕುಟುಂಬಗಳಿಗೆ ವಾರ್ಷಿಕವಾಗಿ 100 ದಿನಗಳ ಉದ್ಯೋಗವನ್ನು ನೀಡಲಾಗುತ್ತಿದ್ದು, ಅರ್ಥಿಕವಾಗಿ ಸಬಲರಾಗಲು ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ರೇಷ್ಮೆ, ಸಾಮಾಜಿಕ ಅರಣ್ಯ ಇಲಾಖೆ, ಪಂಚಾಯತ್‌ ರಾಜ್‌ ಇಂಜನಿಯರಿಂಗ್‌ (ಪಿಆರ್‌ಇಡಿ) ಇಲಾಖೆಗಳು ಮಹತ್ವದ ಪಾತ್ರವನ್ನು ವಹಿಸಿವೆ, ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ನಡೆಯುತ್ತಿರುವ ಸಮುದಾಯ ಚಟುವಟಿಕೆಗಳು ಸಮಗ್ರವಾಗಿ..

ಶಾಲಾಭಿವೃದ್ಧಿ, ಸ್ಮಶಾನ, ಚರಂಡಿ, ಬೂದು ನೀರು ನಿರ್ವಹಣೆ ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ, ಸಂಜೀವಿನಿ ಭವನ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (NRLM)ಗಳ ಅಭಿವೃದ್ದಿ ಸಹಕಾರಿಯಾಗಿದೆ. ಹಾಗೇ ವೈಯಕ್ತಿಕ ಕಾಮಗಾರಿಗಳಾದ ಹಸುಶೆಡ್‌, ಕುರಿಶೆಡ್‌, ಹಂದಿಶೆಡ್‌, ಕೋಳಿಶೆಡ್‌, ವಸತಿ ಯೋಜನೆಯ ಫಲಾನುಭವಿಗಳು, ವಿಶೇಷ ಚೇತನರು, ಹಿರಿಯ ನಾಗರಿಕರು ಮತ್ತು ಗರ್ಭಿಣಿ ಸ್ತ್ರೀಯರು ಇದರ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ.

ಸ್ವಚ್ಚ ಭಾರತ್‌ ಮಿಷನ್‌ ಮತ್ತು ಬೂದು ನೀರು ನಿರ್ವಹಣೆ ಗ್ರಾಮೀಣ ಯೋಜನೆ ಅಧೀನದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮೂಲಕ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಮಾಡಲಾಗುತ್ತಿದೆ. ಇದರ ಹೊರತಾಗಿ ನರೇಗಾ ಮೂಲಕವೂ ವಿಶೇಷ ಯೋಜನೆ ರೂಪಿಸಿಕೊಂಡು ಅನುಷ್ಠಾನಗೊಳಿಸಲಾಗುತ್ತಿದೆ.

ಮಹಿಳಾ ಸಬೀಕರಣಕ್ಕೆ ಸಹಕಾರಿಯಾದ ನರೇಗಾ ಯೋಜನೆಯಡಿ ಮಹಿಳೆಯರು ಭಾಗವಹಿಸುವಿಕೆಗೆ ಹೆಚ್ಚಿನ ಆದ್ಯತೆ ನೀಡಿದ್ದರಿಂದ, ಅರ್ಥಿಕ ವರ್ಷ 2024-25ನೇ ಸಾಲಿನಲ್ಲಿ ಶೇ 51.97% ಪ್ರಗತಿಯನ್ನು ಸಾಧಿಸಲಾಗಿರುತ್ತದೆ.

ಮುಖ್ಯವಾಗಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಭಾಗವಹಿಸುತ್ತಿರುವುದು ಸಂತಸದ ವಿಷಯ.

ಸ್ತ್ರೀ ಚೇತನ, ದುಡಿಯೋಣ ಬಾ ಅಭಿಯಾನ

ಮಹಿಳೆಯರು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಭಾಗವಹಿಸುವುದಕ್ಕೆ ಏಪ್ರಿಲ್‌ 1ರಿಂದ ಜೂನ್‌ 30 ರವರೆಗೆ ಮೂರು ತಿಂಗಳ ಕಾಲ ಅಭಿಯಾನವನ್ನು ಹಮ್ಮಿಕೊಂದಿದೆ.

ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಸ್ತ್ರೀಚೇತನ ಮತ್ತು ದುಡಿಯೋಣ ಬಾ ಅಭಿಯಾನ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಶೇ60% ಗುರಿ ಸಾಧಿಸಲು, ಕರಪತ್ರ ವಿತರಣೆ, ಮನೆ ಮನೆಗೆ ಭೇಟಿ, ಆಟೋ ಮೂಲಕ ಪ್ರಚಾರ ಮಾಡುವುದು, ವಾರ್ಡ್‌ಗಳಲ್ಲಿ ಸಭೆ ಮಾಡುವುದು, ಗ್ರಾಮಗಳಲ್ಲಿನ ಸಭೆ ಮೂಲಕ ಇನ್ನೂ ಹೆಚ್ಚಿನ ಪ್ರಚಾರ ಮಾಡಲು ಯೋಜನೆ ರೂಪಿಸಿ 101 ಗ್ರಾಮ ಪಂಚಾಯಿತಿಗಳಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ.

ಆರ್ಥಿಕ ವರ್ಷ 2025-26 ನೇ ಸಾಲಿನಲ್ಲಿ 15ಲಕ್ಷ ಮಾನವ ದಿನಗಳ ಸೃಜನೆಯ ಗುರಿಯನ್ನು ಹೊಂದಲಾಗಿದ್ದು. ಗ್ರಾಮ ಪಂಚಾಯಿತಿಗಳಿಂದ ಬಂದಂತಹ ಯೋಜನೆಗಳಿಗೆ ರಾಜ್ಯದಿಂದ ಅನುಮೊದನೆಯನ್ನು ಪಡೆದುಕೊಂಡು ಕಾಮಗಾರಿಗಳಿಗೆ ನಿಯಮಾನುಸಾರ ಚಾಲನೆ ನೀಡಲಾಗಿರುತ್ತದೆ.

ನೈಸರ್ಗಿಕ ಸಂಪನ್ಮೂಲಗಳಾದ ಜಲ ಸಂರಕ್ಷಣೆ, ಅರಣ್ಯೀಕರಣ, ಗ್ರಾಮಗಳ ಸ್ವಚ್ಚತೆ ಮತ್ತು ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್‌ ತಿಳಿಸಿದ್ದಾರೆ.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!