Some private channels are deeply disappointed

ಕೆಲ ಖಾಸಗಿ ಚಾನಲ್‌ಗಳಿಗೆ ತೀವ್ರ ನಿರಾಸೆ.. ಜಾತಿ ಸಮೀಕ್ಷೆ ಸಚಿವ ಸಂಪುಟ ಸಭೆಯಲ್ಲಾಗಿದ್ದು ಇಷ್ಟೇ..!

ಬೆಂಗಳೂರು (Harithalekhani): ಜಾತಿ ಸಮೀಕ್ಷೆ ಎಂಬಂತೆ ಆ ಜಾತಿ ಹೆಚ್ಚು, ಈ ಜಾತಿ ಕಡಿಮೆ.. ಇಷ್ಟೇನಾ ಇವರ ಜಾತಿ..? ಮುಸ್ಲಿಂ ಸಮುದಾಯ ಹೆಚ್ಚು, ಜಾತಿಗಳನ್ನು ಒಡೆಯಲಾಗಿದೆ, ಯಾರ ಮನೇಗೂ ಹೋಗಿಲ್ಲ ಎಂಬಂತೆ ಕಳೆದೊಂದು ವಾರದಿಂದ ರಾಜ್ಯ ಸರ್ಕಾರವನ್ನು ಮಾತ್ರ ಜನ ವಿರೋಧಿ ಎಂಬಂತೆ ವರದಿ ಪ್ರಸಾರ ಮಾಡಿದ್ದ ಕೆಲ ಖಾಸಗಿ ಚಾನಲ್‌ಗಳಿಗೆ ತೀವ್ರ ನೀರಾಸೆಯಾಗುವ ಮಾಹಿತಿ ಹೊರಬಿದ್ದಿದೆ.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಅವರು ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಂಪುಟ ಸಭೆಯ ಬಳಿಕ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್ .ತಂಗಡಗಿ ಅವರೊಂದಿಗೆ ಮಾಧ್ಯಮಗೋಷ್ಠಿ ನಡೆಸಿ, ಸಚಿವ ಸಂಪುಟದ ಸಭೆಯ ನಿರ್ಣಯಗಳ ಕುರಿತು ಮಾಹಿತಿ ನೀಡಿದರು.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ಮಾಡಿದ್ದು ಇನ್ನಷ್ಟು ಮಾಹಿತಿ, ತಾಂತ್ರಿಕ ವಿವರಗಳು ಚರ್ಚೆಗೆ ಅಗತ್ಯ ಎನಿಸಿ, ಅವುಗಳನ್ನು ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಚರ್ಚೆ ಅಪೂರ್ಣವಾಗಿದೆ. ಅತ್ಯಂತ ಸೌಹಾರ್ದಯುತವಾಗಿ ನಡೆದ ಚರ್ಚೆಯಲ್ಲಿ ಜನಸಂಖ್ಯೆ ಹಿಂದುಳಿದಿರುವಿಕೆ, ಅಧ್ಯಯನ ಮಾಡುವ ಸಂದರ್ಭದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಸಂದರ್ಭದಲ್ಲಿ ಕೈಗೊಂಡ ಮಾನದಂಡಗಳ ವಿವರಗಳನ್ನು ಸ್ವಲ್ಪ ಮಟ್ಟಿಗೆ ಚರ್ಚಿಸಲಾಗಿದ್ದು, ಚರ್ಚೆ ಅಪೂರ್ಣವಾಗಿರುವುದರಿಂದ ಮುಂದಿನ ಸಚಿವ ಸಂಪುಟ ಸಭೆ ಏಪ್ರಿಲ್ 24 ರಂದು ಮಲೆಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿದ್ದು, ಆಯಾ ಭಾಗದ ವಿಷಯಗಳು ಹೆಚ್ಚಾಗಿ ಚರ್ಚೆಗೆ ಬರುತ್ತದೆ. ಮೇ 2 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲು ಸಚಿವ ಸಂಪುಟ ನಿರ್ಧರಿಸಿದೆ.

ಸಮೀಕ್ಷೆಯ ಮಾನದಂಡಗಳ ಬಗ್ಗೆ ಚರ್ಚೆ

ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಉತ್ಪನ್ನದ ಮೂಲ ಹಾಗೂ ಕೈಗೊಂಡ ಮಾನದಂಡಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಕೆಲವು ಹಿರಿಯ ಸಚಿವರು ಮಾರ್ಗದರ್ಶನ ಮಾಡಿದ್ದಾರೆ. ಮುಂದಿನ ಸಚಿವ ಸಂಪುಟದಲ್ಲಿ ಅಧಿಕಾರಿಗಳು ಅಗತ್ಯ ಮಾಹಿತಿಯನ್ನು ಒದಗಿಸಲಿದ್ದಾರೆ ಎಂದರು.

ಈ ವರದಿಯನ್ನು ಇತ್ತೀಚೆಗೆ ಸರ್ಕಾರದ ಕೈಸೇರಿದ್ದು ಮಾನದಂಡಗಳನ್ನು ಚರ್ಚಿಸಿದ್ದೇವೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಹಲವಾರು ಮಾನದಂಡಗಳನ್ನು ಚರ್ಚಿಸಿದ್ದೇವೆ ಎಂದು ಸಚಿವರು ಪುನರುಚ್ಚರಿಸಿದರು.

ಜಾತಿ ಸಂಖ್ಯಾಬಲದ ಬಗ್ಗೆ ತಪ್ಪು ಗ್ರಹಿಕೆ

ಜಾತಿ ಸಂಖ್ಯಾಬಲದ ಬಗ್ಗೆ ತಪ್ಪು ಗ್ರಹಿಕೆಗಳು ಹೊರಬೀಳುತ್ತಿದ್ದು, ಅವುಗಳು ಸರಿಯಾದ ವಿವರಗಳಲ್ಲ. 94.17% ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ ಎಂದರು. ಸಮೀಕ್ಷಾ ವರದಿಯ ಮಾಹಿತಿ ಪತ್ರಿಕೆಗಳಲ್ಲಿ ಈಗಾಗಲೇ ಬಂದಿದೆ.ವರದಿ ಮಂಡನೆಯಾಗಿ ಚರ್ಚೆ ನಡೆದಿದೆ ಎಂದು ಸಚಿವರು ತಿಳಿಸಿದರು.

ರಾಜಕೀಯ

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ.

“ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ”: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="112873"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!