The first phase of the Janakrosha Yatra was a success: BY Vijayendra

ಜನಾಕ್ರೋಶ ಯಾತ್ರೆಯ ಮೊದಲ ಹಂತ ಯಶಸ್ವಿ: ಬಿವೈ ವಿಜಯೇಂದ್ರ

ಬಾಗಲಕೋಟೆ (Harithalekhani): ಮಾನ್ಯ ಸಿದ್ದರಾಮಯ್ಯನವರೇ ನೀವು ಮುಖ್ಯಮಂತ್ರಿ ಸ್ಥಾನದಲ್ಲಿ ಬಡವರ, ದಲಿತರ, ರೈತರ ಕಣ್ಣೀರು ಒರೆಸಿದ್ದೀರಾ? ಅಭಿವೃದ್ಧಿ ಕೆಲಸ ಮಾಡಿದ್ದೀರಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಅವರು ಪ್ರಶ್ನಿಸಿದ್ದಾರೆ.

ಇಲ್ಲಿ ಇಂದು ಜನಾಕ್ರೋಶ ಯಾತ್ರೆಯ ಸಂದರ್ಭದಲ್ಲಿ ಸರಕಾರದ ವಿರುದ್ಧ ಬಾರುಕೋಲು ಪ್ರದರ್ಶಿಸಿದ ಅವರು ಬಳಿಕ ಸಸಿಗೆ ನೀರೆರೆದರು.

ನಂತರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಜನಾಕ್ರೋಶ ಯಾತ್ರೆಯ ಮೊದಲ ಹಂತ ಯಶಸ್ವಿಯಾಗಿ ಮುಗಿದಿದೆ ಎಂದು ಹೇಳಿದರು. ಮಾನ್ಯ ಸಿದ್ದರಾಮಯ್ಯನವರೇ, ನೀವು ಮುಖ್ಯಮಂತ್ರಿಗಳಾದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಹಿಂದೂ ಹೆಣ್ಮಕ್ಕಳ ಮೇಲೆ ಅಪಮಾನ, ಲವ್ ಜಿಹಾದ್ ಹೆಚ್ಚಾಗಿದೆ. ಗೋಹತ್ಯೆಗಳು ಜಾಸ್ತಿ ಆಗಿದೆ. ಅದಕ್ಕಾಗಿ ಮುಂದಿನ ದಿನಗಳಲ್ಲಿ ಜನರು ನಿಮ್ಮನ್ನು ನೆನಪಿಸಿಕೊಳ್ಳಬೇಕೇ ಎಂದು ಕೇಳಿದರು.

ಹಿಂದೆ ಯಡಿಯೂರಪ್ಪನವರ ಬಿಜೆಪಿ ಸರಕಾರ ಇದ್ದಾಗ ರೈತರು ತಮ್ಮ ಹೊಲಕ್ಕೆ ಟ್ರಾನ್ಸ್‍ಫಾರ್ಮರ್ ಹಾಕಿಸಲು 25 ಸಾವಿರ ಕಟ್ಟಿದ್ದರೆ ಸಾಕಾಗಿತ್ತು. ಆದರೆ, ರೈತಪರ ಮೊಸಳೆ ಕಣ್ಣೀರು ಹಾಕುವ ಸಿದ್ದರಾಮಯ್ಯನವರ ಸರಕಾರದಲ್ಲಿ ಎರಡೂವರೆಯಿಂದ 3 ಲಕ್ಷ ರೂ. ಕಟ್ಟಬೇಕಿದೆ ಎಂದು ಟೀಕಿಸಿದರು.

ಹಿಂದೆ 5 ವರ್ಷ ನೀವು ಸಿಎಂ ಆಗಿದ್ದಾಗ ಏನು ಸಾಧನೆ ಮಾಡಿದ್ದೀರಿ ಸಿದ್ದರಾಮಯ್ಯನವರೇ ಎಂದು ಕೇಳಿದರು.

ಹಿಂದಿನ ಬಾರಿ ವೀರಶೈವ ಧರ್ಮ ಎಂದು ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದೀರಲ್ಲವೇ ಎಂದು ಆಕ್ಷೇಪಿಸಿದರು. ಅದಕ್ಕಾಗಿ ರಾಜ್ಯದ ಜನ ನಿಮ್ಮನ್ನು ನೆನಪಿಟ್ಟುಕೊಳ್ಳಬೇಕೇ ಎಂದರು.

ಮುಸಲ್ಮಾನರಿಗೆ ಸರಕಾರಿ ಕಾಮಗಾರಿಯಲ್ಲಿ ಶೇ 4ರಷ್ಟು ಮೀಸಲಾತಿ ಕೊಡುತ್ತಿದ್ದೀರಿ. ಯಾರಪ್ಪನ ದುಡ್ಡು ಸ್ವಾಮಿ ಎಂದು ಪ್ರಶ್ನೆಯನ್ನು ಮುಂದಿಟ್ಟರು.

ಮುಸಲ್ಮಾನರ ಹೆಣ್ಮಕ್ಕಳಿಗೆ ಮದುವೆಗೆ 50 ಸಾವಿರ ಕೊಡುತ್ತಾರಂತೆ. ಹಿಂದೂಗಳಲ್ಲಿ ಬಡವರಿಲ್ಲವೇ? ಮುಸಲ್ಮಾನ ಯುವಜನರು ವಿದೇಶಕ್ಕೆ ಉನ್ನತ ಶಿಕ್ಷಣ ಪಡೆಯಲು ಹೋಗುವುದಾದರೆ 30 ಲಕ್ಷ ನೀಡುವುದಾಗಿ ಹೇಳಿದ್ದೀರಿ.

ಹಿಂದೂಗಳಲ್ಲಿ ಬಡವರಿಲ್ಲವೇ ಹಾಗಿದ್ದರೆ ಎಂದು ಪ್ರಶ್ನಿಸಿದರು. ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಎಂದು ಕೇಳಿದರು.

ರಾಜ್ಯದಲ್ಲಿ ಯಾವುದೇ ಲೋಕಸಭಾ, ವಿಧಾನಸಭಾ ಚುನಾವಣೆ ಇಲ್ಲ. ಆದರೂ, ನಾವು ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದ್ದೇವೆ. ಅಭಿವೃದ್ಧಿ ಕೆಲಸ, ಸರ್ವತೋಮುಖ ಅಭಿವೃದ್ಧಿಯ ಭರವಸೆ ನೀಡಿ ಕಾಂಗ್ರೆಸ್ಸಿನವರು ಅಧಿಕಾರಕ್ಕೆ ಬಂದವರು. ಆದರೆ, ಸಿದ್ದರಾಮಯ್ಯನವರ ನೇತೃತ್ವದ ಜನವಿರೋಧಿ, ರೈತ ವಿರೋಧಿ, ಹಿಂದೂ ವಿರೋಧಿ ಸರಕಾರ ಇದೆ.

50ಕ್ಕೂ ಜನೋಪಯೋಗಿ ವಸ್ತುಗಳ ಬೆಲೆ ಏರಿಸಿದ್ದಾರೆ ಎಂದು ಟೀಕಿಸಿದರು. ಪರಿಶಿಷ್ಟ ಜಾತಿ, ಜನಾಂಗದ 38 ಸಾವಿರ ಕೋಟಿ ಹಣವನ್ನು ದುರುಪಯೋಗ ಮಾಡಿಕೊಂಡಿದೆ. ಅಲ್ಪಸಂಖ್ಯಾತರ ತುಷ್ಟೀಕರಣ ಹೆಚ್ಚಾಗಿದೆ ಎಂದು ಆಕ್ಷೇಪಿಸಿದರು.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!