BJP is not anti-Muslim: B.Y. Vijayendra

ಬಿಜೆಪಿ ಮುಸಲ್ಮಾನರ ವಿರೋಧಿಯಲ್ಲ: ಬಿ.ವೈ.ವಿಜಯೇಂದ್ರ

ಬೀದರ್ (Harithalekhani): ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ 38,500 ಕೋಟಿ ಹಣವನ್ನು ಕಾಂಗ್ರೆಸ್ ಸರಕಾರವು ದುರುಪಯೋಗ ಮಾಡಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಆಕ್ಷೇಪಿಸಿದ್ದಾರೆ.

Guarantee scheme
ಎನ್ ವಿಶ್ವನಾಥ್

ಇಂದು ಇಲ್ಲಿ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು, ಸರಕಾರ ಜವಾಬ್ದಾರಿ ಮರೆತಿವೆ. ಅವರನ್ನು ಎಚ್ಚರಿಸುವ ಕೆಲಸವನ್ನು ವಿಪಕ್ಷವಾಗಿ ನಾವು ಮಾಡುತ್ತಿದ್ದೇವೆ. ಅದಕ್ಕಾಗಿ ಈ ಜನಾಕ್ರೋಶದ ಯಾತ್ರೆ ಎಂದು ತಿಳಿಸಿದರು.

ರಾಜ್ಯದ ಸಿಎಂ ಆಗಿ ರೈತರ ಕಣ್ಣೀರು ಒರೆಸಿದ್ದೀರಾ? ಬಡವರ ಕಣ್ಣೀರು ಒರೆಸಿದ್ದೀರಾ? ಪರಿಶಿಷ್ಟ ಜಾತಿ, ಪಂಗಡದವರ ನೋವಿಗೆ ಸ್ಪಂದಿಸಿದ್ದೀರಾ ಎಂದು ಸಿದ್ದರಾಮಯ್ಯನವರನ್ನು ಪ್ರಶ್ನಿಸಿದರು. ರಾಜ್ಯವು ಹಿಂದೆ ಯಡಿಯೂರಪ್ಪನವರ ನೇತೃತ್ವದಲ್ಲಿ ಅಭಿವೃದ್ಧಿ ವಿಚಾರದಲ್ಲಿ ದೇಶದಲ್ಲಿ ಎರಡನೇ ಸ್ಥಾನದಲ್ಲಿತ್ತು ಎಂದು ವಿವರಿಸಿದರು.

ರಾಜ್ಯವು ಈಗ ಭ್ರಷ್ಟಾಚಾರದಲ್ಲಿ ನಂಬರ್ ವನ್ ಸ್ಥಾನ ಪಡೆದಿದೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಈ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಂದು ತಿಳಿಸಿದರು. ಬಡವರ, ರೈತರ, ಪರಿಶಿಷ್ಟ ಜಾತಿ, ಪಂಗಡದ ಪರವಾಗಿದ್ದ ಕಾಳಜಿ ಎಲ್ಲಿ ಹೋಗಿದೆ ಸಿದ್ದರಾಮಯ್ಯನವರೇ ಎಂದು ಕೇಳಿದರು.

ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಈ ಸರಕಾರದ ಅಲ್ಪಸಂಖ್ಯಾತರ ಪರ ನೀತಿಯಿಂದ ಹಿಂದೂಗಳಿಗೆ ಅನ್ಯಾಯವಾಗಿದೆ ಎಂದು ತಿಳಿಸಿದರು.

ಬಿಜೆಪಿ ಮುಸಲ್ಮಾನರ ವಿರೋಧಿಯಲ್ಲ

ಪ್ರಧಾನಿ ನರೇಂದ್ರ ಮೋದಿಜೀ ಅವರು ತ್ರಿವಳಿ ತಲಾಖ್ ರದ್ದು ಮಾಡಿ ಮುಸಲ್ಮಾನ ಹೆಣ್ಮಕ್ಕಳಿಗೆ ನ್ಯಾಯ ದೊರಕಿಸಿದ್ದಾರೆ. ಆದರೆ, ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎನ್ನುವವರನ್ನು ನಾವು ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದರು.

ಬಿಜೆಪಿ ದೇಶಭಕ್ತರ ಪಕ್ಷ. ನಾವು ಕಾಂಗ್ರೆಸ್ಸಿನಿಂದ ಪಾಠ ಕಲಿಯಬೇಕಿಲ್ಲ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದ ದಲಿತ ಶಾಸಕರ ಮನೆಗೆ ದೇಶದ್ರೋಹಿಗಳು ಬೆಂಕಿ ಹಚ್ಚಿದಾಗ ಆ ದೇಶದ್ರೋಹಿಗಳ ಪರ ನಿಂತ ಪಕ್ಷ ಕಾಂಗ್ರೆಸ್ ಎಂದು ಟೀಕಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ 150 ಕೋಟಿ ಹಣವನ್ನು ಹೊರರಾಜ್ಯಕ್ಕೆ ಕಳುಹಿಸಿದ ಸಂಬಂಧ ಪ್ರಿಯಾಂಕ್ ಖರ್ಗೆಯವರು ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳನ್ನು ಯಾಕೆ ಪ್ರಶ್ನಿಸಿಲ್ಲ ಎಂದು ಕೇಳಿದರು.

ಸಿದ್ದರಾಮಯ್ಯನವರು ಹಿಂದೆ ಲಿಂಗಾಯತ- ವೀರಶೈವ ಪ್ರತ್ಯೇಕ ಧರ್ಮ ಎಂದು ಬೆಂಕಿ ಹಚ್ಚುವ ಕೆಲಸ ಮಾಡಿದ್ದರು. ಇವತ್ತು ಜಾತಿ ಜನಗಣತಿ ಎಂದು ಹೇಳಿ ಮುಸಲ್ಮಾನರನ್ನು ಎತ್ತಿಕಟ್ಟಿ ಹಿಂದೂಗಳಿಗೆ ಅವಮಾನ ಮಾಡಿದ್ದಾರೆ. ಹಿಂದೂ- ಮುಸ್ಲಿಮರ ಮಧ್ಯೆ ವೈರತ್ವ ಸೃಷ್ಟಿಸುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದ ಜನವಿರೋಧಿ, ರೈತ ವಿರೋಧಿ, ಭ್ರಷ್ಟ ಸರಕಾರ, ಇಂಥ ಹಿಂದೂ ವಿರೋಧಿ ಸರಕಾರವನ್ನು ಬುಡಸಮೇತ ಕಿತ್ತು ಹಾಕುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರಾದ ನಾವು ಮಾಡಬೇಕಿದೆ ಎಂದು ವಿನಂತಿಸಿದರು. ಅದಕ್ಕಾಗಿ ಬಿಜೆಪಿಯ ಜನಾಕ್ರೋಶ ಯಾತ್ರೆ ಇಲ್ಲಿಗೆ ಬಂದಿದೆ ಎಂದು ತಿಳಿಸಿದರು.

ಈ ಸರಕಾರದ ವಿರುದ್ಧ ಮುಂದಿನ 3 ವರ್ಷಗಳ ಕಾಲ ನಾವು ಬೀದಿಗಿಳಿದು ಹೋರಾಟ ಮಾಡಬೇಕಿದೆ. ಸರಕಾರಕ್ಕೆ ತಕ್ಕ ಪಾಠ ಕಲಿಸುವ ಕೆಲಸ ಮಾಡಬೇಕೆಂದು ಕೈ ಮುಗಿದು ವಿನಂತಿಸುವುದಾಗಿ ತಿಳಿಸಿದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರದ ಮಾಜಿ ಸಚಿವ ಭಗವಂತ್ ಖೂಬಾ, ಮಾಜಿ ಸಚಿವ ಮತ್ತು ಶಾಸಕ ಪ್ರಭು ಚೌಹಾಣ್, ಮಾಜಿ ಸಚಿವ ಬಿ.ಶ್ರೀರಾಮುಲು, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!