CM Siddaramaiah calls meeting of DC, CEO and District In-charge Secretary

ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಬೆಂ.ಗ್ರಾ.ಜಿಲ್ಲೆ (Harithalekhani); ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಏಪ್ರಿಲ್ 28 ರಂದು ಜಿಲ್ಲೆಗೆ ಆಗಮಿಸುತ್ತಿದ್ದು ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಸೂಚಿಸಿದರು.

ಈ ಸಂಬಂಧ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಸರ್ಕಾರ ಅಧಿಕಾರಕ್ಕೆ ಬಂದು ಮುಂದಿನ ತಿಂಗಳಿಗೆ 2 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಎರಡು ವರ್ಷಗಳ ಸಾಧನೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿ ನಿವೇಶನ ರಹಿತ ಅರ್ಹರನ್ನು ಗುರ್ತಿಸಲಾಗಿದ್ದು, ಫಲಾನುಭವಿಗಳಿಗೆ ಮುಖ್ಯಮಂತ್ರಿಗಳಿಂದ ಹಕ್ಕು ಪತ್ರ ವಿತರಿಸಲಾಗುವುದು. ಇದಕ್ಕಾಗಿ ಸಂಬಂಧಿಸಿದ ಆಯಾ ತಾಲ್ಲೂಕು ತಹಶೀಲ್ದಾರ್ ಗಳು, ಇಒ ಗಳು ಶೀಘ್ರ ಫಲಾನುಭವಿಗಳ ಅಂತಿಮ ಪಟ್ಟಿ ಸಿದ್ಧಪಡಿಸಿ ಎಂದರು. ಪೋಡಿ ದುರಸ್ತಿ ಜಮೀನುಗಳಿಗೆ ಹಕ್ಕು ಪತ್ರ ವಿತರಿಸುವುದು, ವಸತಿ ರಹಿತರಿಗೆ ವಸತಿ ಸೌಲಭ್ಯ ವಿತರಣೆ ಮಾಡಲಾಗುವುದು.

ಜಿಲ್ಲೆಯಲ್ಲಿ ಶಂಕುಸ್ಥಾಪನೆಗೆ, ಉದ್ಘಾಟನೆಗೆ ಸಿದ್ಧವಿರುವ ಕಾಮಗಾರಿಗಳ ಪಟ್ಟಿಯನ್ನು ತಯಾರಿಸಿ, ವಿವಿಧ ಇಲಾಖೆಗಳು ಎರಡು ವರ್ಷಗಳಲ್ಲಿ ಮಾಡಿರುವಂತಹ ಆಯವ್ಯಯ, ಅಭಿವೃದ್ಧಿ ಕೆಲಸಗಳು, ಸೌಲಭ್ಯ ಪಡೆದ ಫಲಾನುಭವಿಗಳ ಮಾಹಿತಿ ನೀಡಿ ಜೊತೆಗೆ ಕಾರ್ಯಕ್ರಮದಲ್ಲಿ ವಿವಿಧ ಸೌಲಭ್ಯಗಳನ್ನು ವಿತರಿಸುವ ಸಲುವಾಗಿ ಸಂಬಂಧಪಟ್ಟ ಇಲಾಖೆಗಳು ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿ ವರದಿ ನೀಡಿ ಎಂದರು.

ಉದ್ಯೋಗ ಭಾಗ್ಯ

ಕಳೆದ ಸೆಪ್ಟೆಂಬರ್ನಲ್ಲಿ ನಡೆದ ಬೃಹತ್ ಉದ್ಯೋಗ ಮೇಳದಲ್ಲಿ 10000 ಕ್ಕು ಅಧಿಕ ಅಭ್ಯರ್ಥಿಗಳು ಭಾಗವಹಿಸಿದ್ದರು. ಅವರಲ್ಲಿ 2000 ಕ್ಕು ಅಧಿಕ ಅಭ್ಯರ್ಥಿಗಳು ಕಂಪನಿಗಳಲ್ಲಿ ಉದ್ಯೋಗ ಪಡೆದುಕೊಂಡಿದ್ದಾರೆ.

ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಹಲವು ಅಭ್ಯರ್ಥಿಗಳಿಗೆ ಉದ್ಯೋಗ ನೇಮಕಾತಿ ಪತ್ರ ವಿತರಿಸಲಾಗುವುದು. ಈ ಸಂಬಂಧ ಕಂಪನಿಗಳ ಮುಖ್ಯಸ್ಥರ ಸಭೆ ನಡೆಸಿ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಸಾಕಷ್ಟು ರೈತರು ಭೂಮಿ ಕಳೆದುಕೊಂಡಿದ್ದಾರೆ, ಅಂತಹ ಕುಟುಂಬಗಳಿಗೆ ಒಂದು ಉದ್ಯೋಗ ಸಿಗಬೇಕು ಎನ್ನುವುದು ನನ್ನ ಗುರಿ. ಕುಟುಂಬಕ್ಕೆ ಒಂದು ಉದ್ಯೋಗ, ಸ್ಥಳಿಯರಿಗೆ ಮೊದಲ ಆದ್ಯತೆ ನೀಡಿ, ಅರ್ಹರಿಗೆ ಉದ್ಯೋಗ ಕಲ್ಪಿಸಿ ಎಂದು ಕಂಪನಿ ಮುಖ್ಯಸ್ಥರಿಗೆ ಹೇಳಿದರು.

ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪಿಸಿ ಕಂಪನಿಗಳಿಗೆ ಅವಶ್ಯಕತೆ ಇರುವಂತಹ ಕೌಶಲ್ಯ ತರಬೇತಿಗಳನ್ನು ವಿದ್ಯಾರ್ಥಿಗಳಿಗೆ ನೀಡುವ ಮೂಲಕ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ಕ್ರಮ ವಹಿಸಿ ಎಂದರು.

ಸಭೆಯಲ್ಲಿ ಹೊಸಕೋಟೆ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ಬಯಪ ಅಧ್ಯಕ್ಷರಾದ ಶಾಂತಕುಮಾರ್, ದೊಡ್ಡಬಳ್ಳಾಪುರ ಮಾಜಿ ಶಾಸಕ ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಡಾ.ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!