NH 44ರಲ್ಲಿ ಭೀಕರ ಅಪಘಾತ‌: ತಂದೆ ಮಗಳ ದುರ್ಮರಣ.. ತಾಯಿಯ ಸ್ಥಿತಿ ಚಿಂತಾಜನಕ

Terrible accident on NH 44

ಚಿಕ್ಕಬಳ್ಳಾಪುರ (Harithalekhani): ಕ್ಯಾಂಟರ್ ಪಲ್ಟಿಯಾಗಿ ಬೈಕ್ ಮೇಲೆ ಬಿದ್ದ ಪರಿಣಾಮ ಬೈಕ್ ನಲ್ಲಿದ್ದ ತಂದೆ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿ, ಗೃಹಿಣಿಯ ಸ್ಥಿತಿ ಚಿಂತಾಜನಕವಾಗಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44ರ (NH 44) ಮರಸನಹಳ್ಳಿ ಬಳಿ ಈಶ ಟೆಂಪಲ್ ಗೆ ಹೋಗುವ ಸ್ಥಳದಲ್ಲಿ ಶನಿವಾರ ನಡೆದಿದೆ.

ಮೃತರನ್ನು ತಾಲ್ಲೂಕಿನ ಬಂಡಹಳ್ಳಿಯ ನಿವಾಸಿಗಳಾದ ವೆಂಕಟೇಶ್(34 ವರ್ಷ) ಮತ್ತು ವಿಕ್ಷಿತಾ(5 ವರ್ಷ), ಗಾಯಾಳುವನ್ನು ರೂಪ (28 ವರ್ಷ) ಎಂದು ಗುರ್ತಿಸಲಾಗಿದ್ದು, ಗಾಯಾಳಯವನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ತೆರಳಿಸಲಾಗಿದೆ.

NH 44ರಲ್ಲಿ ಭೀಕರ ಅಪಘಾತ‌: ತಂದೆ ಮಗಳ ದುರ್ಮರಣ.. ತಾಯಿಯ ಸ್ಥಿತಿ ಚಿಂತಾಜನಕ

ಮೃತ ವೆಂಕಟೇಶ್ ತನ್ನ ಪತ್ನಿ ರೂಪ ಮತ್ತು ಮಗಳು ವಿಕ್ಷಿತಾಳೊಂದಿಗೆ ಬಂಡಹಳ್ಳಿಯಿಂದ ಸಂಬಂಧಿಕರ ಮದುವೆಗೆ ಚಿಕ್ಕಬಳ್ಳಾಪುರಕ್ಕೆ ತೆರಳಲು ಬೈಕ್ ನಲ್ಲಿ ಬರುತ್ತಿದ್ದಾಗ ಮರಸನಹಳ್ಳಿ ಬಳಿಯ ಈಶಾ ಟೆಂಪಲ್ ರಸ್ತೆಯಿಂದ ಬಂದ ಕಾರು ಏಕಾ ಏಕಿ ಹೆದ್ದಾರಿಯಲ್ಲಿ ತಿರುವು ಪಡೆದು ಕೊಂಡಾಗ, ಬಾಗೇಪಲ್ಲಿ ಕಡೆಯಿಂದ ಚಿಕ್ಕಬಳ್ಳಾಪುರಕ್ಕೆ ಹೋಗುತ್ತಿದ್ದ ಕ್ಯಾಂಟರ್ ವಾಹನ ಎಡಕ್ಕೆ ತೆಗೆದು ಕೊಂಡಾಗ ಕ್ಯಾಂಟರ್ ವಾಹನ ಪಲ್ಟಿಯಾಗಿ ಬೈಕ್ ಮೇಲೆ ಬಿದ್ದಿದೆ.

ಕ್ಯಾಂಟರ್ ಬಿದ್ದ ರಭಸಕ್ಕೆ ಬೈಕ್ ಅಪ್ಪಚ್ಚಿಯಾಗಿ ವೆಂಕಟೇಶ್ ಮತ್ತು ಮಗಳು ವಿಕ್ಷಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ನಲ್ಲಿದ್ದ ಪತ್ನಿ ರೂಪಗೆ ತೀವ್ರ ತರವಾದ ಗಾಯಗಳಾಗಿ ಚಿಂತಾಜನಕ ಸ್ಥಿತಿ ತಲುಪಿದ್ದಾಳೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಚಿಕ್ಕಬಳ್ಳಾಪುರ ಗ್ರಾಮಾಂತರ ಪೋಲಿಸರು ಕ್ರೈನ್ ಸಹಾಯದಿಂದ ಕ್ಯಾಂಟರ್ ಸರಿಸಿ ಮೃತದೇಹಗಳನ್ನು ಹೊರ ತೆಗೆದು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

ಅಪಘಾತವನ್ನು ವೀಕ್ಷಿಸಿದ ಸಾರ್ವಜನಿಕರು ಈಶ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಅಧಿಕಾರಗಳ ವಿರುದ್ಧ ರೊಚ್ಚಿಗೆದ್ದಿದ್ದರು,

ಅಧಿಕಾರಿಗಳ ನಿರ್ಲಕ್ಷದಿಂದ ಇಂತಹ ಸಾವು ನೋವುಗಳು ಸಂಭವಿಸುತ್ತಿದ್ದು, ಈಶ ಸಂಸ್ಥೆಯು ಸರಿಯಾದ ಮೂಲಭೂತ ಸೌಕರ್ಯಗಳು ಇಲ್ಲದೆ ಜನರು ಹೈಸ್ಪೀಟ್ ನಲ್ಲಿ ಬಂದು ಹೆದ್ದಾರಿಯಲ್ಲಿ ತಿರುವು ಪಡೆಯುತ್ತಿರುವುದು ಅಪಘಾತಗಳಿಗೆ ಕಾರಣವಾಗಿದೆ. ಹೆಚ್ಚು ಅಪಘಾತಗಳು ಆಗುತ್ತಿರುವುದು ಈಶ ಫೌಂಡೇಶನ್ ಆದಮೇಲೆ ಎಂದು ಸಾರ್ವಜನಿಕರು ದೂರಿದ್ದಾರೆ.

ಹೆದ್ದಾರಿಯಿಂದ ಈಶ ಫೌಂಡೇಶನ್ ತಿರುವಿಗೆ ಯಾವುದೇ ಸೂಚನೆ ಫಲಕ ಇಲ್ಲ. ಪ್ಲೈಓವರ್ ಅಥವಾ ಅಂಡರ್ ಪಾಸ್ ಇಲ್ಲ ಅದರಿಂದ ಹೆಚ್ಚಿನ ಅಪಘಾತಗಳಿಗೆ ಮುಖ್ಯ ಕಾರಣ ಆಗುತ್ತಿದೆ.

ಯುಗಾದಿ ಹಬ್ಬದಿಂದ ಸುಮಾರು 15 ಅಪಘಾತಗಳಾಗಿದ್ದು ಯಾವ ಜನಪ್ರತಿನಿಧಿಯು, ಯಾವ ಅಧಿಕಾರಿಗಳು ಇತ್ತ ಗಮನ ಕೊಡುತ್ತಿಲ್ಲ, ಹೋದ ಪ್ರಾಣಕ್ಕೆ ಬೆಲೆ ಇಲ್ಲದಂತಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಸಂಬಂಧಪಟ್ಟಂತ ಇಲಾಖೆಗಳು ಮತ್ತು ಅಧಿಕಾರಿಗಳು ಇತ್ತ ಗಮನ ಹರಿಸಿ, ಈ ಸ್ಥಳದಲ್ಲಿ ಪ್ಲೈಓವರ್ ಅಥವಾ ಅಂಡರ್ ಪಾಸ್ ನಿರ್ಮಿಸಿ ಸಾರ್ವಜನಿಕರ ಪ್ರಾಣಕ್ಕೆ ರಕ್ಷಣೆಯನ್ನು ಕೊಡಬೇಕು. ಮತ್ತು ಓವರ್ ಟೆಕ್ ಮಾಡುವ ವಾಹನಗಳನ್ನು ಆರ್ ಟಿ ಓ ಅಧಿಕಾರಿಗಳು ಗಮನ ಹರಿಸಿ ಅಂಥಹವುಗಳಿಗೆ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ‌.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]