Welfare Party strongly opposes passage of Wakf Bill

ವಕ್ಫ್ ಮಸೂದೆ ಅಂಗಿಕಾರಕ್ಕೆ ವೆಲ್ಫೇರ್ ಪಾರ್ಟಿ ತೀವ್ರ ವಿರೋಧ.. ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಬೆಂಗಳೂರು (Harithalekhani): ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ (Wakf Bill) ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ (Welfare Party of India) ರಾಜ್ಯಾಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ (Taher Hussain) ಆಕ್ರೋಶ ವ್ಯಕ್ತಪಡಿಸಿದರು.

ಇಂದು ಶಿವಾಜಿನಗರದ ವೆಲ್ಫೇರ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅಸಂವಿಧಾನಿಕ ತಿದ್ದುಪಡಿಯ ವಿರುದ್ಧ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕೇಂದ್ರ ಸಮಿತಿಯು ದೇಶವ್ಯಾಪಿ ಹೋರಾಟಕ್ಕೆ ಕರೆ ನೀಡಿದ್ದು, ಇದರ ಅಂಗವಾಗಿ ರಾಜ್ಯದ್ಲಲಿ ವಕ್ಫ್ ಸಂರಕ್ಷಣೆ -ನಮ್ಮ ಹೊಣೆ ಎಂಬ ಶೀರ್ಷಿಕೆ ಅಡಿಯಲ್ಲಿ ದಿನಾಂಕ 20ನೇ ಏಪ್ರಿಲ್ ರಿಂದ ಏಪ್ರಿಲ್ 27ರ ವರೆಗೆ ರಾಜ್ಯವ್ಯಾಪಿ ಚಳುವಳಿ ಹಮ್ಮಿಕೊಂಡಿದೆ ಎಂದರು.

ಚಳುವಳಿಯ ಭಾಗವಾಗಿ ರಾಜ್ಯಾದ್ಯಂತ ಸುದ್ದಿಗೋಷ್ಠಿ ನಡೆಸಿ, ಬಿತ್ತಿ ಪತ್ರ , ವಿಚಾರಗೋಷ್ಠಿಗಳು, ಪ್ರತಿಭಟನೆ, ಧರಣಿ ಸತ್ಯಾಗ್ರಹ, ಪಾದಯಾತ್ರೆ, ಸಹಿ ಸಂಗ್ರಹಣೆ, ಕರಪತ್ರ ಹಂಚಿಕೆ, ಹೀಗೆ ಹಲವಾರು ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುವುದು.

ವಕ್ಫ್ ತಿದ್ದುಪಡಿ ಕಾಯ್ದೆಯು ಸಂವಿಧಾನಿಕ ಚೌಕಟ್ಟಿನ ವಿರುದ್ಧವಾಗಿದೆ. ವಿಧಿ 14ರ ಪ್ರಕಾರ ಇದು ತಾರತಮ್ಯ ವೆಂದು ಪರಿಗಣಿಸಲಾಗುವುದು. ಏಕೆಂದರೆ ಇದು ಮುಸ್ಲಿಂ ದತ್ತಿಗಳಿಗೆ ಮಾತ್ರ ಅಸಮಾನವಾಗಿ ಪರಿಣಾಮ ಬಿರುತ್ತದೆ. ಅದೇರೀತಿ ವಿಧಿ 25 ಮತ್ತು 28ರ ಪ್ರಕಾರ ಈ ಕಾಯ್ದೆಯು ಮುಸ್ಲಿಂ ನಾಗರಿಕರ ಧಾರ್ಮಿಕ ವ್ಯವಹಾರಗಳನ್ನು ನಿರ್ವಹಿಸುವ ಹಕ್ಕು ಮತ್ತು ಸ್ವಾತಂತ್ರವನ್ನು ಉಲಂಘಿಸುತ್ತದೆ.

ವಿಧಿ 30ರ ಪ್ರಕಾರ ಮುಸ್ಲಿಂ ನಾಗರಿಕರಿಗೆ ತಮ್ಮ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪನೆಮಾಡುವ ಮತ್ತು ನಿರ್ವಹಣೆ ಮಾಡುವ ಹಕ್ಕಿನಲ್ಲು ಕೂಡ ಹಸ್ತಕ್ಷೇಪ ಮಾಡುತ್ತದೆ

ಈ ಕಾಯ್ದೆ ವಕ್ಫ್ ಆಸ್ತಿಗಳ ಮೂಲ ಉದ್ದೇಶವನ್ನು ಬದಲಾಯಿಸಲು ಅವಕಾಶ ನೀಡುತ್ತದೆ, ಇದು ವಕ್ಫ್ ಆಸ್ತಿಯ ಶಾಶ್ವತ ಸಮರ್ಪಣೆಯ ಇಸ್ಲಾಮಿ ತತ್ವಕ್ಕೆ ವಿರುದ್ಧವಾಗಿದೆ.

ವಕ್ಫ್ ತಿದ್ದುಪಡಿ ಕಾಯ್ದೆಯ ಮೂಲ ಉದ್ದೇಶ ವಕ್ಫ್ ಆಸ್ತಿಗಳ ಮೇಲೆ ಸರಕಾರದ ನಿಯಂತ್ರಣ ಹೆಚ್ಚಿಸುವುದು ಮತ್ತು ವಕ್ಫ್ ಸಂಸ್ಥೆಯ ಸ್ವಾಯತ್ತತ್ತೆಯನ್ನು ದುರ್ಬಲಗೊಳಿಸುತ್ತದೆ.

ವಕ್ಫ್ ಕಾಯ್ದೆ 1995 ರ ಸೆಕ್ಷನ್ 3(ಆರ್) ರಲ್ಲಿ 5 ವರ್ಷಗಳ ಕಾಲ ಇಸ್ಲಾಂ ಧರ್ಮವನ್ನು ಆಚರಿಸುವ ಸ್ಥಿತಿಯನ್ನು ಸೇರಿಸುವುದು,
ವಕ್ಫ್ ರಚಿಸಲು ಅರ್ಹತಾ ಮಾನದಂಡವಾಗಿ 5 ವರ್ಷಗಳ ಪೂರ್ವಾಪೇಕ್ಷಿತ ಷರತ್ತು ವಿಚಿತ್ರ ಮತ್ತು ಅಸಂಬದ್ಧವಾಗಿದೆ. ಈ ತಿದ್ದುಪಡಿಯ ಮೂಲಕ ಅವನು/ ಅವಳು ಮುಸ್ಲಿಂ ಎಂದು ನಿರ್ಧರಿಸುವ ಅಧಿಕಾರ ಯಾರಿಗೆ ಇರುತ್ತದೆ ಎಂಬ ಬಗ್ಗೆ ಅನುಮಾನವಿದೆ.

ವಕ್ಫ್ ಕಾಯ್ದೆ 2025 ರ ಈ ನಿಬಂಧನೆಯು ಅಸಂವಿಧಾನಿಕ ಮತ್ತು ಸಂಸತ್ತಿನ ಸಾಮರ್ಥ್ಯವನ್ನು ಮೀರಿದೆ.
ಹಾಗಾಗಿ ಯಾವುದೇ ಕಾರಣಕ್ಕೂ ಈ ಕಾಯ್ದೆಯನ್ನು ಒಪ್ಪಲಾಗದು ಸರಕಾರ ಈ ಕಾಯ್ದೆ ವಾಪಸ್ ಪಡೆಯವವರೆಗೂ ಹೋರಾಟ ನಡೆಸಲಾಗುವುದು, ಇದು ಕೇವಲ ಒಂದು ಸಮುದಾಯದ ವಿಷವಲ್ಲದೆ ಸಂವಿಧಾನ ವಿರೋಧಿ ನಡೆಯಾಗಿದ್ದು ರಾಜ್ಯದ ಎಲ್ಲಾ ನಾಗರಿಕರು ಈ ಹೋರಾಟಕ್ಕೆ ಬೆಂಬಲಿಸಬೇಕೆಂದು ಮನವಿ ಮಾಡಿದರು.

ಕೇಂದ್ರ ಸರ್ಕಾರದ ನಡೆ ದ್ವೇಷದಿಂದ ಕೂಡಿದೆ. ಇಂತಹ ಸೂಕ್ಷ್ಮ ವಿಷಯದಲ್ಲಿ ದ್ವೇಷ ಸಾಧಿಸುವಂಥದ್ದು ಸರಿಯಲ್ಲ. ಕೇಂದ್ರವು ಸಂಯಮದಿಂದ ನಡೆದುಕೊಳ್ಳಬೇಕಿತ್ತು. ಹಿಂದೂ ಧರ್ಮದ ಟ್ರಸ್ಟ್‌ಗಳು, ವಕ್ಫ್ ಮಂಡಳಿ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿದೆ. ಭೂಮಿ ಮೇಲೆ ಹಕ್ಕು ಇರುವುದು ರಾಜ್ಯಕ್ಕೆ. ರಾಜ್ಯದ ಹಕ್ಕನ್ನು ಕಿತ್ತುಕೊಳ್ಳುವ ಯತ್ನವನ್ನು ಕೇಂದ್ರ ಸರ್ಕಾರ ಮಾಡಿದೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಅಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್, ರಾಜ್ಯ ಉಪಾಧ್ಯಕ್ಷ ಇಂಜಿನಿಯರ್ ಹಬಿಬುಲ್ಲಾಹ್ ಖಾನ್ ಹಾಗೂ ಮಾಧ್ಯಮ ಸಂಚಾಲಕ ರಿಜ್ವಾನ್ ಹುಮನಾಬಾದ್ ಇದ್ದರು.

ರಾಜಕೀಯ

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ.

“ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ”: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="112873"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!