623 fake doctors in the state..!

ರಾಜ್ಯದಲ್ಲಿ 623 ಮಂದಿ ನಕಲಿ ವೈದ್ಯರು..!

ಬೆಂಗಳೂರು (Harithalekhani): ರಾಜ್ಯದಲ್ಲಿ 623 ನಕಲಿ ವೈದ್ಯರು ( fake doctors) ಅಮಾಯಕರ ಜೀವದ ಜತೆಗೆ ಚೆಲ್ಲಾಟವಾಡುತ್ತಿರುವ ಆಘಾತಕಾರಿ ಮಾಹಿತಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಹಿರಂಗಪಡಿಸಿದೆ.

ಅದರಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಬೀದರ್‌ನಲ್ಲಿ ಪತ್ತೆಯಾಗಿದ್ದಾರೆ. ಇನ್ನೂ 623 ನಕಲಿ ವೈದ್ಯರ ಪೈಕಿ 442 ನಕಲಿ ವೈದ್ಯರಿಗೆ ಆರೋಗ್ಯ ಇಲಾಖೆ ನೋಟಿಸ್‌ ಜಾರಿ ಮಾಡಿದೆ ಹಾಗೂ ಕಾನೂನಿನ ಅಡಿಯಲ್ಲಿ 67 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜತೆಗೆ 89 ಜನ ವೈದ್ಯರಿಗೆ ದಂಡವನ್ನು ಆರೋಗ್ಯ ಇಲಾಖೆ ವಿಧಿಸಿದೆ.

ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ನಕಲಿ ವೈದ್ಯರ ಹಾವಳಿ ಹೆಚ್ಚಾಗುತ್ತಿದ್ದು. ನಕಲಿ ವೈದ್ಯರ ವಿರುದ್ಧ ಇಲಾಖೆ ಮೆಗಾ ಡ್ರೈವ್ ನಡೆಸಿದೆ.

ರಾಜ್ಯದಲ್ಲಿ ನಕಲಿ ವೈದ್ಯರಿಗೆ ಕಾನೂನಿನ ಅಡಿಯಲ್ಲಿ 1 ಲಕ್ಷ ವರೆಗೂ ದಂಡ ಹಾಗೂ 3 ವರ್ಷದ ವರೆಗೂ ಜೈಲು ಶಿಕ್ಷೆಗೆ ಗುರಿಯಾಗಿಸಬಹುದು. ಕೆಲ ಸಮಯದಲ್ಲಿ ಶಿಕ್ಷೆ ಹೆಚ್ಚಾಗುವ ಸಾಧ್ಯತೆ ಕೂಡ ಇರುತ್ತದೆ.

ಇಲಾಖೆ ನಕಲಿ ವೈದ್ಯರ ವಿರುದ್ದ ಸಮರಸಾರಿದ್ದು. ಮುಂದಿನ ದಿನಗಳಲ್ಲಿ ಮತ್ತಷ್ಟು ವೈದ್ಯರಿಗೆ ಬಲೆ ಬೀಸಲು ಇಲಾಖೆ ಸಜ್ಜಾಗಿದೆ.

ಅಮಾಯಕರ ಜೀವನದ ಜತೆ ಚೆಲ್ಲಾಟ

ನಕಲಿ ವೈದ್ಯರು ಅಮಾಯಕರ ಜೀವನದ ಜತೆಗೆ ಚೆಲ್ಲಾಟ ಆಡುತ್ತಿದ್ದಾರೆ. ಸರ್ಕಾರಿ ವೈದ್ಯರ ಕೊರತೆಯಿರುವ ಗ್ರಾಮೀಣ ಪ್ರದೇಶಗಳಲ್ಲೂ ಇವರ ಹಾವಳಿ ವಿಪರೀತವಾಗಿದೆ. ಬಡವರು ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರು ಇವರಿಂದ ಮೋಸ ಹೋಗುತ್ತಿದ್ದಾರೆ.

ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದರೂ ಅದರಿಂದ ದೊಡ್ಡ ಮಟ್ಟದಲ್ಲಿ ಪ್ರಯೋಜನ ಆಗುತ್ತಿಲ್ಲ.

ಅಷ್ಟೇ ಅಲ್ಲದೆ ನ್ಯಾಯಾಲಯದಲ್ಲೂ ಕೆಲವು ಪ್ರಕರಣಗಳು ವಿಚಾರಣೆಯಲ್ಲಿರುವುದರಿಂದ ಇವರ ಹಾವಳಿಗೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ ಹಾಕಲು ಸಾಧ್ಯವಾಗಿಲ್ಲ ಎಂದು ವರದಿಯಾಗಿದೆ.

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!