ಧರ್ಮಸ್ಥಳ (Harithalekhani): ಇತ್ತೀಚೆಗಷ್ಟೇ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಇಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಶ್ರೀ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿರುವ ಅವರು, ಧರ್ಮಸ್ಥಳೇಶ ಸಕಲೇಶಾ ದಯಾಪಯೋಧೇ
ಶ್ರೀ ಮಂಜುನಾಥ ನಿತರಾಂ ಕುರು ಮಂಗಳಂ ಮೇ
ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ ಕೃತಾರ್ಥನಾದೆ. ನಾಡಿನ ಸಮಸ್ತ ಜನರ ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥಿಸಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅವರನ್ನು ಭೇಟಿಯಾಗಿ ಆಶಿರ್ವಾದ ಪಡೆದಿದ್ದಾರೆ.
ಪವರ್ ಶೇರಿಂಗ್ ವಿಚಾರವಾಗಿ ತೀವ್ರ ಚರ್ಚೆಯ ನಡುವೆ ಡಿಕೆ ಶಿವಕುಮಾರ್ ಅವರು ವಿವಿಧ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ.