ಬೆಂಗಳೂರು (Harithalekhani): ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ (Om prakash) ಅವರನ್ನು ಅವರ ಮನೆಯಲ್ಲೇ ಕೊಲೆ (Murder) ಮಾಡಿರುವ ಆಘಾತಕಾರಿ ಘಟನೆ ಹೆಚ್‌ಎಸ್ ಆರ್ ಲೇಔಟ್‌ನಲ್ಲಿ ಇಂದು ನಡೆದಿದೆ.
ಓಂ ಪ್ರಕಾಶ್ ಅವರ ಪತ್ನಿಯೇ ಈ ಹತ್ಯೆ ಮಾಡಿದ್ದಾರೆಂಬ ಆರೋಪಗಳು ಕೇಳಿ ಬಂದಿದ್ದು, ಮಾನಸಿಕ ಸ್ಥಿಮಿತ ಕಳೆದುಕೊಂಡು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಿರಿಯ ಪೊಲೀಸರು ದೌಡಾಯಿಸಿ ಪರಿಶೀಲಿನೆ ನಡೆಸಿದ್ದಾರೆ. ಮನೆಯಲ್ಲಿ ರಕ್ತ-ಸಿಕ್ತ ಕಲೆಗಳನ್ನು ಕಂಡು ಪೊಲೀಸರೇ ಒಂದು ಕ್ಷಣ ಶಾಕ್ ಆಗಿದ್ದಾರೆ.
ಹಲವು ದಿನಗಳಿಂದ ಓಂ ಪ್ರಕಾಶ್ ಅವರ ಪತ್ನಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರಿಂದ ಅವರಿಗೆ ನಿರಂತರವಾಗಿ ಚಿಕಿತ್ಸೆ ಕೊಡಿಸಲಾಗುತಿತ್ತು. ಇಂದು ದಿಢೀರ್ ಚಾಕುವಿನಿಂದ ಚುಚ್ಚಿ-ಚುಚ್ಚಿ ಅವರ ಪತ್ನಿಯೇ ಹತ್ಯೆ ಮಾಡಿದ್ದಾರೆ ಎಂಬ ಮಾತು ಪೊಲೀಸ್ ವಲಯದಲ್ಲಿ ಕೇಳಿಬಂದಿದೆ.
ಇನ್ನು ಓಂ ಪ್ರಕಾಶ್ ಅವರ ಮೃತ ದೇಹವನ್ನು ಸೆಂಟ್ ಜಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಪ್ರಕರಣ ಕುರಿತು ಅವರ ಪತ್ನಿ ಪಲ್ಲವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಒಂದು ಚಾಕುವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ ಎಂದು ವರದಿಯಾಗಿದೆ.