The government has destroyed the faith that has been held for thousands of years; R. Ashoka attacks

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಬೆಂಗಳೂರು (Harithalekhani): ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸರ್ಕಾರಕ್ಕೆ ಬರೆದ ಪತ್ರದ ಪ್ರಕಾರ, ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಅಭಿವೃದ್ಧಿ ಬಗ್ಗೆ ಯೋಚಿಸದೆ ಜಾತಿ ಗಣತಿ ವರದಿ ಬಿಡುಗಡೆ ಮಾಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರು ಸಾಯುತ್ತಿದ್ದಾರೆ. ಒಂದು ರಸ್ತೆ ಕೂಡ ನಿರ್ಮಾಣವಾಗಿಲ್ಲ. ಪರಿಸ್ಥಿತಿ ಹೀಗಿರುವಾಗ ಜಾತಿ ಗಣತಿ ವರದಿ ಬಗ್ಗೆ ಸರ್ಕಾರ ಚಿಂತಿಸುತ್ತಿದೆ.

ಕಾಂಗ್ರೆಸ್‌ನ ಸಚಿವರು ಇದನ್ನು ವೈಜ್ಞಾನಿಕ ಹಾಗೂ ಅಸಲಿ ಎಂದು ಹೇಳುತ್ತಿದ್ದಾರೆ. ಜಯಪ್ರಕಾಶ್‌ ಹೆಗ್ಡೆ ವರದಿ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 26-08-2021 ರಂದು ಸೀಲ್‌ ಮಾಡಿದ ಬಾಕ್ಸ್‌ ತೆರೆದಾಗ ವರದಿಯಲ್ಲಿ ಆಯೋಗದ ಹಿಂದಿನ ಅಧ್ಯಕ್ಷರ ಸಹಿ ಇಲ್ಲ ಎಂಬುದನ್ನು ಗಮನಿಸಲಾಗಿದೆ. ಹಸ್ತಪ್ರತಿ ಅಥವಾ ಮೂಲ ವರದಿ ಲಭ್ಯವಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಹಿಂದಿನ ಅಧ್ಯಕ್ಷ ಕಾಂತರಾಜು ಸಹಿ ಹಾಕದೆ ಓಡಿಹೋಗಿದ್ದಾರೆ. ಮೂಲ ವರದಿ ಸಿಎಂ ಸಿದ್ದರಾಮಯ್ಯನವರ ಮನೆಯಲ್ಲಿದೆ. ಬೇಕಾದ ಜಾತಿಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ ಎಂದು ಸಚಿವ ಸಂಪುಟದಲ್ಲಿ ಗಲಾಟೆಯಾಗಿದೆ.

ಯಾರ ಮನೆಗೂ ಹೋಗದೆ ಸಮೀಕ್ಷೆ ಮಾಡಲಾಗಿದೆ. ಎಲ್ಲರೂ ಸಿದ್ದರಾಮಯ್ಯನವರ ಮನೆ, ಕಚೇರಿಯಲ್ಲಿ ಕುಳಿತು ವರದಿ ತಯಾರಿಸಿದ್ದಾರೆ. 150 ಕೋಟಿ ರೂ. ಎಲ್ಲಿ ಹೋಗಿದೆ ಎಂದು ಸರ್ಕಾರ ತಿಳಿಸಲಿ ಎಂದು ಆಗ್ರಹಿಸಿದರು.

ನ್ಯಾಷನಲ್‌ ಹೆರಾಲ್ಡ್‌ ಹಗರಣ

ಕಾಂಗ್ರೆಸ್‌ನ ಗಾಂಧಿ ಕುಟುಂಬದವರು ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯನ್ನು 2008 ರಲ್ಲಿ ಮುಚ್ಚಿಹಾಕಿದ್ದರು. ಆ ಸಂಸ್ಥೆಗೆ ವಿವಿಧೆಡೆ ಎರಡೂವರೆ ಸಾವಿರ ಕೋಟಿ ರೂ. ಆಸ್ತಿ ಇತ್ತು. ಆ ಸಂಸ್ಥೆಯನ್ನೇ ಯಂಗ್‌ ಇಂಡಿಯಾ ಸಂಸ್ಥೆಯಾಗಿ ಬದಲಿಸಿ ಚಾರಿಟೇಬಲ್‌ ಉದ್ದೇಶ ಎಂದು ತೋರಿಸಲಾಯಿತು. ಆದರೆ ಯಾವುದೇ ಸಾಮಾಜಿಕ ಕಾರ್ಯ ಮಾಡಲಿಲ್ಲ.

ಗಾಂಧಿ ಕುಟುಂಬದಲ್ಲೇ ಎರಡು ಷೇರಿನಂತೆ ಒಟ್ಟು ಶೇ.38 ರಷ್ಟು ಷೇರು ಪಡೆಯಲಾಯಿತು. ಕೇವಲ 50 ಲಕ್ಷ ರೂ. ಹೂಡಿಕೆ ಮಾಡಿ ಎರಡೂವರೆ ಸಾವಿರ ಕೋಟಿ ರೂ. ಆಸ್ತಿಯನ್ನು ಗಾಂಧಿ ಕುಟುಂಬ ಪಡೆದಿದೆ. ಒಟ್ಟು 5,000 ಜನರು ಷೇರುದಾರರು ಇದ್ದರೂ, ಅವರು ಯಾರು ಎಂದು ಪತ್ತೆಯಾಗಿಲ್ಲ ಎಂದರು.

ಇದು ಸ್ವಾತಂತ್ರ್ಯ ಹೋರಾಟಗಾರರು ಆರಂಭಿಸಿದ ಪತ್ರಿಕೆಯೇ ಹೊರತು ಕಾಂಗ್ರೆಸ್‌ ಪಕ್ಷದ ಪತ್ರಿಕೆಯಲ್ಲ. ಜನದ ಧ್ವನಿಯಾಗಬೇಕಾದ ಪತ್ರಿಕೆ ಒಂದು ಕುಟುಂಬದ ಸ್ವತ್ತಾಗಿದೆ. ಈಗ ಕೋರ್ಟ್‌ ಕೂಡ ಈ ಪ್ರಕರಣವನ್ನು ವಜಾ ಮಾಡಿಲ್ಲ. ಇದು ಸರ್ಕಾರದ ಆಸ್ತಿಯೇ ಹೊರತು ಕಾಂಗ್ರೆಸ್‌ ನಾಯಕರ ಆಸ್ತಿಯಲ್ಲ. ಕಾಂಗ್ರೆಸ್‌ ಇದರ ವಿರುದ್ಧ ಹೋರಾಟ ಮಾಡುವುದು ಬೂಟಾಟಿಕೆ ಎಂದು ದೂರಿದರು.

ಪಿಎಸ್‌ಐ ಪರಶುರಾಮ್‌ ಅವರ ಪತ್ನಿ ಈಗ ಸಂಕಷ್ಟಲ್ಲಿದ್ದಾರೆ. ಸರ್ಕಾರಿ ಕೆಲಸ ಕೊಡುತ್ತೇವೆಂದು ಹೇಳಿ ಸರ್ಕಾರ ಏನೂ ಮಾಡಿಲ್ಲ. ಈಗ ಆ ಪ್ರಕರಣಕ್ಕೆ ಬಿ ರಿಪೋರ್ಟ್‌ ನೀಡಲಾಗಿದೆ. ವರ್ಗಾವಣೆಯ ಕಿರುಕುಳದಿಂದಲೇ ಅವರು ಸತ್ತಿದ್ದರು. ಆದರೆ ಸರ್ಕಾರ ಈ ಸಾವಿಗೆ ನ್ಯಾಯ ನೀಡಿಲ್ಲ ಎಂದರು.

ಸಿಇಟಿ ಪರೀಕ್ಷೆಯಲ್ಲಿ ಒಬ್ಬ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಬಿಸಾಡಲಾಗಿದೆ. ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ.

ಲಿಂಗಾಯತರ ಶಿವದಾರವನ್ನೂ ಕತ್ತರಿಸಿದ್ದಾರೆ. ಹಿಜಾಬ್‌ ಬಗ್ಗೆ ಪ್ರಶ್ನೆ ಮಾಡಿದ್ದಾಗ ಅದನ್ನು ಕಾಂಗ್ರೆಸ್‌ ನಾಯಕರು ಸಮರ್ಥಿಸಿಕೊಂಡಿದ್ದರು. ಬಟ್ಟೆಯೊಳಗೆ ಏನು ಬೇಕಾದರೂ ಬಚ್ಚಿಟ್ಟುಕೊಳ್ಳಬಹುದು. ಆದರೆ ಜನಿವಾರದಲ್ಲಿ ಏನೂ ಅಡಗಿಸಿಕೊಳ್ಳಲಾಗುವುದಿಲ್ಲ. ಇದರ ಜೊತೆಗೆ ತಾಳಿ, ಓಲೆಗೂ ಕೈ ಹಾಕಿದ್ದಾರೆ ಎಂದು ದೂರಿದರು.

ಹಿಂದೂಗಳು ಕುಂಕುಮ ಇಟ್ಟುಕೊಳ್ಳಲು, ಜನಿವಾರ ಹಾಕಿಕೊಳ್ಳಲು ಅವಕಾಶವಿಲ್ಲ. ಹಿಜಾಬ್‌ ಹಾಕಿಕೊಂಡವರನ್ನು ತಪಾಸಣೆ ಮಾಡುವುದಿಲ್ಲ. ಹಿಂದೂಗಳ ಮೇಲೆ ಸಿಎಂ ಸಿದ್ದರಾಮಯ್ಯನವರಿಗೆ ಕೋಪ ಇದೆ. ಈ ಸರ್ಕಾರ ಹಿಂದೂಗಳನ್ನು ದಮನ ಮಾಡುತ್ತಿದೆ. ಈ ಮೂಲಕ ವಿಕೃತ ಸಂತೋಷ ಕಂಡುಕೊಳ್ಳುತ್ತಿದೆ. ಇದನ್ನು ಜನರು ಅರ್ಥ ಮಾಡಿಕೊಳ್ಳಲಿ ಎಂದರು.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!