ಬೆಂಗಳೂರು (Harithalekhani): ಬಿರುಬೇಸಿಗೆಯ ಬಿಸಿಲಿನಿಂದ ತತ್ತರಿಸುತ್ತಿದ್ದ ರಾಜ್ಯದ ಅನೇಕ ಕಡೆ ಮಳೆರಾಯ (Rain) ತಂಪೆರೆಯುತ್ತಿದ್ದಾನೆ.
ಈ ನಡುವೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮುಂದಿನ 1 ವಾರ ಭಾರಿ ಮಳೆಯಾಗುವ ಕುರಿತು ಮಾಹಿತಿ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವು ಕಡೆ ಪೂರ್ವ ಮುಂಗಾರು ಮಳೆ ಚುರುಕಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ ತುಮಕೂರು, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.