No decision has been taken on closing universities: CM Siddaramaiah

ಕನ್ನಡಿಗನ ಮೇಲೆ ಹಲ್ಲೆ ಪ್ರಕರಣ: ಸುಳ್ಳನ್ನು ವೈಭವೀಕರಿಸಿದ ರಾಷ್ಟ್ರೀಯ ಸುದ್ದಿವಾಹಿನಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು (Harithalekhani): ರಸ್ತೆಯಲ್ಲಿ ವಾಹನ ಹಿಂದಿಕ್ಕುವ ವಿಚಾರವಾಗಿ ಭಾರತೀಯ ವಾಯು ದಳದ ವಿಂಗ್ ಕುಮಾಂಡರ್ (Wing Commander) ಹಾಗೂ ಬೈಕ್‌ ಸವಾರ ಪರಸ್ಪರ ಬಡಿ ದಾಡಿಕೊಂಡಿರುವ ಘಟನೆ ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಈ ಘಟನೆಯನ್ನು ಭಾಷೆ ವಿಚಾರವಾಗಿ ನಡೆದ ಹಲ್ಲೆ ಎಂದು ವಿಂಗ್ ಕುಮಾಂಡರ್ ಶಿಲಾದಿತ್ಯ ಬೋಸ್ ಕನ್ನಡಿಗರ ಮೇಲೆ ಆರೋಪ ಹೊರೆಸಿರುವ ಕುರಿತು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಅಲ್ಲದೆ ವಿಂಗ್ ಕುಮಾಂಡರ್ ಶಿಲಾದಿತ್ಯ ಬೋಸ್ ಸುಳ್ಳು ಹೇಳಿಕೆಯನ್ನೇ ಏಕಪಕ್ಷೀಯವಾಗಿ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುವಂತೆ, ಕನ್ನಡಿಗರ ಮೇಲೆ ಆರೋಪ ಹೊರಸಿ ವರದಿ ಮಾಡಿದ ಕೆಲ ರಾಷ್ಟ್ರೀಯ ವಾಹಿನಿಗಳ ಬೇಜವಬ್ದಾರಿಯುತ ವರ್ತನೆ ಟೀಕೆಗೆ ಗುರಿಯಾಗಿದೆ.

ಈ ಕುರಿತಂತೆ ಸಿಎಂ ಸಿದ್ದರಾಮಯ್ಯ (Cmsiddaramaiah) ಅವರು ಕೂಡ ಪ್ರತಿಕ್ರಿಯೆ ನೀಡಿದ್ದು, ರಾಷ್ಟ್ರೀಯ ಸುದ್ದಿವಾಹಿನಗಳ ವಿರುದ್ಧ ಹರಿಹಾಯ್ದಿದ್ದಾರೆ.

ಘಟನೆ ಕುರಿತು ಟ್ವಿಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ.

ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ.

ದೇಶದ ಮೂಲೆ ಮೂಲೆಗಳಿಂದ ಬಂದು ಇಲ್ಲಿ ನೆಲೆಸಿರುವ ಪ್ರತಿಯೊಬ್ಬರನ್ನು ಗೌರವದಿಂದ ಕಾಣುತ್ತಿರುವ, ಅವರನ್ನೂ ಕನ್ನಡಿಗರೇ ಎಂದು ಪ್ರೀತಿಸುವ ಸಂಸ್ಕೃತಿ ಕನ್ನಡ ಮಣ್ಣಿನದ್ದು. ಇದಕ್ಕೆ ಇತಿಹಾಸ ಸಾಕ್ಷಿ.

ರಾಷ್ಟ್ರೀಯ ಮಾಧ್ಯಮಗಳು ತಮ್ಮ ಜವಾಬ್ದಾರಿ ಮತ್ತು ವೃತ್ತಿಧರ್ಮ ಮರೆತು ಯಾರೋ ಒಬ್ಬ ಮಾಡಿದ ಆಧಾರ ರಹಿತ ಆರೋಪವನ್ನು ಹಿಡಿದುಕೊಂಡು ಇಡೀ ಕರ್ನಾಟಕದ ಘನತೆಗೆ ಮಸಿಬಳಿಯುವ ಕೆಲಸವನ್ನು ಮಾಡಿದ್ದು ನಿಜಕ್ಕೂ ವಿಷಾದನೀಯ. ಇದರಿಂದ ಪ್ರತಿಯೊಬ್ಬ ಕನ್ನಡಿಗನ ಮನಸಿಗೆ ಘಾಸಿಯಾಗಿದೆ.

ಕನ್ನಡಿಗರು ಉದ್ವೇಗ ಅಥವಾ ಪ್ರಚೋದನೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಕನ್ನಡಿಗರಿಂದ ಆಯ್ಕೆಯಾದ ಕನ್ನಡದ್ದೆ ಸರ್ಕಾರ ಕರ್ನಾಟಕದಲ್ಲಿದೆ.

ನಿನ್ನೆಯ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಯಾವ ಹುದ್ದೆಯಲ್ಲೇ ಇರಲಿ‌ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಕಮಿಷನರ್ ಅವರಿಗೆ ಆದೇಶಿಸಿದ್ದೇನೆ.

ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅನ್ಯಾಯಕ್ಕೊಳಗಾದ ವ್ಯಕ್ತಿಗೆ ನ್ಯಾಯ ಕೊಡಿಸಲು ಬದ್ಧವಾಗಿದೆ ಎಂದಿದ್ದಾರೆ.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!