ಬೆಂಗಳೂರು: ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಐಎಎಫ್ ವಿಂಗ್ ಕಮಾಂಡರ್ ನಿಂದ ವಿಕಾಸ್ ಕುಮಾರ್ ಮೇಲೆ ಹಲ್ಲೆ ನಡೆಸಿರುವುದು ಸ್ವೀಕಾರಾರ್ಹವಲ್ಲ ಮತ್ತು ಅದನ್ನು ನಿಸ್ಸಂದೇಹವಾಗಿ ಖಂಡಿಸಬೇಕೆಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿಳಿಸಿದರು.
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಇಂತಹ ಅಧಿಕಾರ ದುರುಪಯೋಗವನ್ನು ನಿರ್ಲಕ್ಷಿಸಲಾಗುವುದಿಲ್ಲ. ನಾವು ವಿಕಾಸ್ ಜೊತೆ ದೃಢವಾಗಿ ನಿಲ್ಲುತ್ತೇವೆ. ನ್ಯಾಯಯುತ ಮತ್ತು ಪಾರದರ್ಶಕ ತನಿಖೆಯ ಮೂಲಕ ನ್ಯಾಯವನ್ನು ಕೋರುತ್ತೇವೆ ಎಂದು ಅವರು ತಿಳಿಸಿದರು.
ವಿಕಾಸ್ ಕುಮಾರ್ ಅಥವಾ ಅವರ ಕುಟುಂಬದೊಂದಿಗೆ ನನ್ನನ್ನು ಸಂಪರ್ಕಿಸಲು ಯಾರಾದರೂ ಸಹಾಯ ಮಾಡಬಹುದಾದರೆ, ದಯವಿಟ್ಟು ಮೆಸೇಜ್ ಮಾಡಿ. ನಾನು ಸಹಾಯ ಮಾಡಲು ಬಯಸುತ್ತೇನೆ ಎಂದರು.