ದೊಡ್ಡಬಳ್ಳಾಪುರ (Harithalekhani): 50 ವರ್ಷದ ಗೃಹಿಣಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ಮಜರಾಹೊಸಹಳ್ಳಿಯಲ್ಲಿ ನಡೆದಿದೆ.
ಮೃತರನ್ನು ಅರುಣ ( 50 ವರ್ಷ) ಎಂದು ಗುರುತಿಸಲಾಗಿದೆ.
ಮೃತರು ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಬೇಸತ್ತು ವಿಷ ಸೇವಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.