ದೊಡ್ಡಬಳ್ಳಾಪುರ (Harithalekhani; ತಾಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟ ರವಿಚಂದ್ರನ್ (Ravichandran) ಅವರ ಸಹೋದರ ಬಾಲಾಜಿ (Balaji) ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇತ್ತೀಚಿಗಷ್ಟೇ ನಟಿ ಮಾಲಾಶ್ರೀ (Malashri) ಅವರು ಮಕ್ಕಳೊಂದಿಗೆ ಘಾಟಿ ದೇವಾಲಯಕ್ಕೆ ಭೇಟಿ ಬೆನ್ನಲ್ಲೇ, ಇಂದು ಬಾಲಾಜಿ ಅವರು ಕುಟುಂಬ ಸಮೇತ ಬಂದು ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ದೇವಾಲಯದ ಆಡಳಿತ ಮಂಡಳಿ ಬಾಲಾಜಿ ಅವರಿಗೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿತ್ತು.
ಈ ಸಂಧರ್ಭದಲ್ಲಿ ದೇವಾಲಯದ ಪ್ರಧಾನ ಅರ್ಚಕರು ಶ್ರೀನಿಧಿ, ಕಾರ್ಯದರ್ಶಿ ಎಂ ನಾರಾಯಣಸ್ವಾಮಿ, ಕರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ, ಮನು, ಮುಖಂಡ ಮುತ್ತಣ್ಣ ಮತ್ತಿತರರಿದ್ದರು.