ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಮಧುರೆ ಕೆರೆಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ.
ಸುಮಾರು 35-40 ವರ್ಷದ ಅಪರಿಚಿತ ಶವ ಇದಾಗಿದ್ದು, ಮೂರು ದಿನಗಳ ಹಿಂದೆ ಕೆರೆಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.
ಇಂದು ಸ್ಥಳೀಯರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ವರಲಕ್ಷ್ಮೀ ಹಾಗೂ ಸಿಬ್ಬಂದಿಗಳು ದೌಡಾಯಿಸಿ, ಪರಿಶೀಲನೆ ನಡೆಸಿದ್ದು, ಶವವನ್ನು ನೀರಿನಿಂದ ಹೊರತೆಗೆದಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.