ಶ್ರೀನಗರ: ಮಂಗಳವಾರ ಜಮ್ಮು ಕಾಶ್ಮೀರದ ಪಹಲ್ಯಾಮ್‌ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನೆ ಕೆಲವೇ ಗಂಟೆಗಳಲ್ಲಿ ಭದ್ರತಾಪಡೆಗಳು ಇಬ್ಬರು ಉಗ್ರರನ್ನು (terrorists) ಹೊಡೆದುರುಳಿಸಿದ್ದಾರೆ.

ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.
ಮಂಗಳವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದ್ದ ದಾಳಿಯಲ್ಲಿ ಕನ್ನಡಿಗರು ಸೇರಿದಂತೆ 30 ಜನರ ಸಾವಾಗಿದೆ.
ಇನ್ನು ಪಹಲ್ಯಾಮ್ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ.
ಬಾರಾಮುಲ್ಲಾದ ಉರಿ ನಾಲಾದ ಸಾಮಾನ್ಯ ಪ್ರದೇಶ ಸರ್ಜೀವನ್ ಮೂಲಕ ಸುಮಾರು ಮೂವರು ನುಸುಳಲು ಪ್ರಯತ್ನಿಸಿದಾಗ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.
ಭಯೋತ್ಪಾದಕರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಯುದ್ಧೋಚಿತ ದಾಸ್ತಾನುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನೆಯ ಚಿನಾರ್ ಕಾರ್ಪ್ಸ್ ಪೋಸ್ಟ್ ಮಾಡಿದೆ.
ಜಮ್ಮು-ಕಾಶ್ಮೀರದ ಪಹಲ್ಲಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಕುರಿತು ಸೇನೆಯು ಹೇಳಿಕೆ ಬಿಡುಗಡೆ ಮಾಡಿದ್ದು, ಇದನ್ನು ಹೇಡಿತನ ಮತ್ತು ಹೃದಯ ವಿದ್ರಾವಕ ಹಿಂಸಾಚಾರ ಎಂದು ಕರೆದಿದೆ.
ಬೈಸರನ್, ಪಹಲ್ಲಾಮ್ ಮತ್ತು ಅನಂತ್‌ನಾಗ್‌ನಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ತಿಳಿಸಿದೆ.
ದಾಳಿಕೋರ ವಿರುದ್ಧ ಸರಿಯಾದ ಕ್ರಮವನ್ನು ಕೈಗೊಳ್ಳಲು ಎಲ್ಲಾ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಸೇನೆ ತಿಳಿಸಿದೆ.