Terrorist attack again in Jammu and Kashmir..

Video: ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಕನ್ನಡಿಗರ ರಕ್ಷಣೆಗೆ ಸಂತೋಷ್ ಲಾಡ್ ದೌಡು.. ಮೃತ ದೇಹಗಳಿಗಾಗಿ ಹುಡುಕಾಟ

ಶ್ರೀನಗರ: ಕಣಿವೆ ಪ್ರದೇಶ ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ (Terrorist attack) ನಡೆದಿದ್ದು, ಇಷ್ಟು ದಿನ ಸೇನಾ ಪಡೆಗಳನ್ನು ಟಾರ್ಗೆಟ್ ಮಾಡುತ್ತಿದ್ದ ಉಗ್ರರು ಈಗ ಪ್ರವಾಸಿಗರನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಿದ್ದಾರೆ.

ಲಷ್ಕರ್-ಎ-ತೊಯ್ದಾದ ಸ್ಥಳೀಯ ಅಂಗಸಂಸ್ಥೆಯಾದ ಪಾಕಿಸ್ತಾನದ ಉಗ್ರ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ ಈ ದಾಳಿಯ ಹೊಣೆ ಹೊತ್ತುಕೊಂಡಿದೆ.

ಪಹಲ್‌ಗಾಮ್‌ನ ಬೈಸರನ್ ವ್ಯಾಲಿಯ ಹುಲ್ಲು ಗಾವಲಿನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ಗುಂಪು ಗುಂಡಿನ ದಾಳಿ ನಡೆಸಿದೆ.

ಈ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ್ ರಾವ್, ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಭರತ್ ಭೂಷಣ್ ಸೇರಿ 30 ಪ್ರವಾಸಿಗರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ.

ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಯಾಗುವ ಸಾಧ್ಯತೆ ಇದೆ. ದಾಳಿಯ ಬೆನ್ನಲ್ಲೇ ಸೇನೆ ಹೈ ಅಲರ್ಟ್ ಆಗಿದ್ದು, ಉಗ್ರರ ಹೆಡೆಮುರಿ ಕಟ್ಟಲು ಶುರು ಮಾಡಿದೆ.

ಪಹಲ್‌ಗಾಮ್ ಪಟ್ಟಣದ ಬೈಸರನ್ ಹುಲ್ಲುಗಾವಲಿನ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಗಾಯಾಳುಗಳನ್ನು ಹೆಲಿಕಾಪ್ಟ‌ರ್ ಮೂಲಕ ಸ್ಥಳಾಂತರಿಸಲಾಗಿದೆ. 12 ಮಂದಿ ಪ್ರವಾಸಿಗರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣವೇ ಭದ್ರತಾ ಪಡೆ, ಸಿಆರ್‌ಪಿಎಫ್ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಘಟನೆ ನಡೆದ ವಹಲ್‌ಗಾಮ್ ಪಟ್ಟಣದ ಬೈಸರನ್ ಧಾವಿಸಿದ್ದು, ದಾಳಿಕೋರರ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.

ಭಯೋತ್ಪಾದನಾ ವಿರೋಧಿ ಕಾರ್ಯಾ ಚರಣೆ ಪ್ರಾರಂಭಿಸಲಾಗಿದೆ. ಸ್ಥಳದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಭಯೋತ್ಪಾದಕರ ಈ ಪೈಶಾಚಿಕ ಕೃತ್ಯದ ನಂತರದ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.

ಮೃತ ದೇಹಗಳು ಅಲ್ಲಲ್ಲಿ ಬಿದ್ದಿರುವುದು, ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿರುವುದು ವಿಡಿಯೊದಲ್ಲಿದೆ.

ಕನ್ನಡಿಗರ ರಕ್ಷಣೆಗೆ ಸಂತೋಷ್ ಲಾಡ್ ದೌಡು

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಂದು ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ ಎಂದು ಸಿಎ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ. ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.

ಭಯೋತ್ಪಾದಕರ ಈ ಹೇಯ ಕೃತ್ಯದಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಕೂಡ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರ.

ಉಗ್ರಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ಸಂಜೆಯೇ ರವಾನಿಸಲಾಗಿದೆ.

ಈ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವಿನ ಅಗತ್ಯ ಇದೆ ಎನ್ನುವುದನ್ನು ಅರಿತು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಕಾಶ್ಮೀರಕ್ಕೆ ತೆರಳಿ ಇಡೀ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸುವಂತೆ ಸೂಚನೆ ನೀಡಿದ್ದೇನೆ.

ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ನಮ್ಮ ಸರ್ಕಾರ ಮಾಡಲಿದೆ.

ರಾಜಕೀಯ

ನೇಕಾರರ ಭವನ ಶಂಕುಸ್ಥಾಪನೆ.. ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆಯ ಬಿಸಿ.. ಸಂಪೂರ್ಣ ವರದಿ ಇಲ್ಲಿದೆ.

ನೇಕಾರರ ಭವನ ಶಂಕುಸ್ಥಾಪನೆ.. ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆಯ ಬಿಸಿ.. ಸಂಪೂರ್ಣ ವರದಿ ಇಲ್ಲಿದೆ.

ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿಕೊಂಡು ದೊಡ್ಡಬಳ್ಳಾಪುರ (Doddaballapura) ನಗರದ ಪ್ರವಾಸಿ ಮಂದಿರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

[ccc_my_favorite_select_button post_id="118224"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆಯಾಗಿದ್ದು, ಹತ್ಯೆ ಶಂಕೆ (Murder (Suspected) ವ್ಯಕ್ತವಾಗಿದೆ.

[ccc_my_favorite_select_button post_id="118057"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!