ಶ್ರೀನಗರ: ಉಗ್ರರ ದಾಳಿಯಲ್ಲಿ ಮೃತಪಟ್ಟಿರುವವರ ಗುರುತು ಪತ್ತೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh lad) ಅವರು ಮೃತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಲಾಡ್ ಅವರು ಕಾಶ್ಮೀರದಲ್ಲಿ ತೊಂದರೆಗೊಳಗಾದ ಕನ್ನಡಿಗರ ರಕ್ಷಣೆಗೆ ಕಾಶ್ಮೀರಕ್ಕೆ ತೆರಳಿದ್ದಾರೆ.
ಪಹಲ್ಗಾಮ್‍ನಲ್ಲಿ ಮೃತದೇಹಗಳನ್ನು ಇರಿಸಲಾಗಿದ್ದು, ಮೃತರ ಸಂಬಂಧಿಕರೊಂದಿಗೆ ಪಾರ್ಥಿವ ಶರೀರಗಳನ್ನು ಗುರುತಿಸಲು ನೆರವಾಗಿದ್ದಾರೆ.
ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಭೀಕರ ದಾಳಿಗೆ ತುತ್ತಾಗಿರುವ ಕರ್ನಾಟಕದ ಪ್ರವಾಸಿಗರ ರಕ್ಷಣೆಗಾಗಿ ಮಾನ್ಯ @CMofKarnataka ಶ್ರೀ @siddaramaiah ಅವರ ಸೂಚನೆಯಂತೆ ನಾನು ಮತ್ತು ವಿಶೇಷ ಅಧಿಕಾರಿಗಳ ತಂಡ ಕಾಶ್ಮೀರದ ಪಹಲ್ಗಾಮ್ ತಲುಪಿದ್ದೇವೆ.
— Santosh Lad Official (@SantoshSLadINC) April 23, 2025
ಸಂತ್ರಸ್ತರಾಗಿರುವ ರಾಜ್ಯದ ಪ್ರವಾಸಿಗರ ಸಂಪೂರ್ಣ ಮಾಹಿತಿ ಕಲೆಹಾಕಲಾಗುತ್ತಿದೆ. ದಾಳಿಯಲ್ಲಿ… pic.twitter.com/Uwg0eN41oI
ಮೃತದೇಹಗಳು ನಿಮ್ಮ ಸಂಬಂಧಿಕರೇ ಎಂಬುದನ್ನು ಖಚಿತಪಡಿಸಿಕೊಳ್ಳಿ, ನೀವು ಎಷ್ಟು ಜನ ಬಂದಿದ್ದೀರಿ ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಯಾವ ಮೃತದೇಹಗಳನ್ನು ಈಗಾಗಲೇ ನೋಡಲಾಗಿದೆ ಎಂಬುದನ್ನೂ ಸಹ ಅವರು ತಪಾಸಣೆ ಮಾಡುತ್ತಿದ್ದಾರೆ.
ಮೃತದೇಹಗಳನ್ನು ಇರಿಸಲಾಗಿರುವ ಪೆಟ್ಟಿಗೆಗಳ ಮೇಲೆ ದೂರವಾಣಿ ಕರೆಗಳನ್ನು ನಮೂದಿಸಲಾಗಿದ್ದು, ಸಂಬಂಧಿಕರಿಗೆ ಕರೆ ಮಾಡಿ ಸ್ವತಃ ಸಂತೋಷ್ ಲಾಡ್ ಅವರೇ ತಿಳಿಸುತ್ತಿದ್ದಾರೆ.
“ಮೃತದೇಹಗಳನ್ನು ಕರ್ನಾಟಕಕ್ಕೆ ತರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು. ತೊಂದರೆಗೊಳಗಾದವರಿಗೆ ಅಗತ್ಯ ನೆರವನ್ನು ಮಾಡಲಾಗುವುದು. ನಮ್ಮ ಸರ್ಕಾರ ಏಲ್ಲಾ ರೀತಿಯಲ್ಲಿ ಸಹಾಯ ಮಾಡಲಿದೆ” ಎಂದು ಲಾಡ್ ಅವರು ತಿಳಿಸಿದ್ದಾರೆ.
ಸಚಿವ ಲಾಡ್ ಅವರಿಗೆ ಧನ್ಯವಾದ ಹೇಳಿದ ಪ್ರವಾಸಿಗರು
ಪಹಲ್ಗಾಮ್‍ನಲ್ಲಿ ನಡೆದ ದಾಳಿಯಲ್ಲಿ ತೊಂದರೆಗೊಳಗಾಗಿರುವ ಕನ್ನಡಿಗ ಪ್ರವಾಸಿಗರು ಸಚಿವ ಸಂತೋಷ್ ಲಾಡ್ ಅವರ ಸಹಾಯಕ್ಕೆ ಧನ್ಯವಾದ ಹೇಳಿದ್ದಾರೆ.
ಸಚಿವ ಲಾಡ್ ಅವರಿಗೆ ಬೆಳಿಗ್ಗೆ ಕರೆ ಮಾಡಿದ್ದೆ. ಅವರು ಹತ್ತು ನಿಮಿಷದಲ್ಲಿ ಬರುತ್ತೇನೆ ಎಂದಿದ್ದರು. ಅವರು ಹೇಳಿದಂತೆ ತಮ್ಮ ತಂಡದೊಂದಿಗೆ ಇಲ್ಲಿಗೆ ಬಂದರು. ಎಲ್ಲಾ ಭದ್ರತಾ ಕ್ರಮಗಳನ್ನು ಕೈಗೊಂಡರು. ಲಾಡ್ ಅವರು ಹಾಗೂ ಕರ್ನಾಟಕ ಸರ್ಕಾರ ಸದಾ ನಮ್ಮೊಂದಿಗೆ ಇದೆ. ಲಾಡ್ ಅವರಿಗೆ ಧನ್ಯವಾದಗಳು ಎಂದು ಪ್ರವಾಸಿಗರೊಬ್ಬರು ಹೇಳಿದ್ದಾರೆ.
ಸಂತ್ರಸ್ತರಾಗಿರುವ ಕನ್ನಡಿಗ ಪ್ರವಾಸಿಗರಿಗೆ ಲಾಡ್ ಅವರು ಧೈರ್ಯ ಹೇಳಿ ಅವರ ಯೋಗಕ್ಷೇಮವನ್ನೂ ವಿಚಾರಿಸಿದರು.