ಬೆಂಗಳೂರು: ಮಂಗಳವಾರ ಜಮ್ನುಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಭಯೋತ್ಪಾದಕರು ಗುಂಡಿನ ದಾಳಿ ನಡೆದಿದ್ದು, ಕರ್ನಾಟಕದ 40ಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕನ್ನಡಿಗರ ರಕ್ಷಣೆಗೆಂದು ರಾಜ್ಯ ಸರ್ಕಾರ 2 ತಂಡಗಳನ್ನು ಕಳುಹಿಸಿದೆ. ಸ್ವಯಂ ಸಚಿವ ಸಂತೋಷ್ ಲಾಡ್ ಕೂಡ ತೆರಳಿದ್ದಾರೆ.
ಪಹಲ್ ಗಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದವರ ಕುಟುಂಬದವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿ ಸಾತ್ವನ ಹೇಳಿದರು.
ಶಿವಮೊಗ್ಗದ ಮಂಜುನಾಥರಾವ್ ಅವರ ಪತ್ನಿ ಪಲ್ಲವಿ ಹಾಗೂ ಬೆಂಗಳೂರಿನ ಮತ್ತಿಕೆರೆಯ ಭರತ್ ಭೂಷಣ್ ಅವರ ಪತ್ನಿ ಸುಜಾತ ಅವರೊಂದಿಗೆ ಸಿಎಂ ಅವರು ಮಾತನಾಡಿ ಧೈರ್ಯ ಹೇಳಿದರು.
ಆತಂಕ ಬೇಡ
ಈ ಜುರುತಂತೆ ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದು, ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ಪ್ರತಿಯೊಬ್ಬ ಕನ್ನಡಿಗನನ್ನು ಮರಳಿ ರಾಜ್ಯಕ್ಕೆ ಕ್ಷೇಮವಾಗಿ ಕರೆತರುವ ಸಂಕಲ್ಪದೊಂದಿಗೆ ನಮ್ಮ ಸರ್ಕಾರವು ಕಾರ್ಯಾಚರಣೆಗೆ ಇಳಿದಿದೆ. ಯಾರೊಬ್ಬರೂ ಆತಂಕ ಪಡುವ ಅಗತ್ಯವಿಲ್ಲ.
ಇನ್ನೂ ಉಗ್ರರ ದಾಳಿಯಿಂದ ಸಾವನಪ್ಪಿದವರ ಕುಟುಂಬಕ್ಕೆ ಜಮ್ಮು ಕಾಶ್ಮೀರ ಸರ್ಕಾರ 10 ಲಕ್ಷ ರೂ. ಪರಿಹಾರ ಘೋಷಿಸಿದೆ.