10 lakh compensation each to the families of Kannadigas who died in the terrorist attack; CM Siddaramaiah

ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಬೆಂಗಳೂರಿನ ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್ ಭೂಷಣ್ ಅವರಿಗೆ ಕನ್ನಡ ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಶ್ರದ್ಧಾಂಜಲಿಯನ್ನು ಅರ್ಪಿಸಿದ ಮುಖ್ಯಮಂತ್ರಿಗಳು, ಉತ್ತಮ ಶಿಕ್ಷಣ ಪಡೆದಿದ್ದ ತರುಣರಾಗಿದ್ದ ಭರತ್ ಭೂಷಣ್ ಅವರು ಉಗ್ರರ ದಾಳಿಗೆ ಬಲಿಯಾಗಿರುವುದು ದುರದೃಷ್ಟಕರ. ಉಗ್ರರ ದಾಳಿ ಅಮಾನವೀಯವಾದ ಕೃತ್ಯವಾಗಿ ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು.

ಅಮಾಯಕ ಜನರನ್ನು ಕೊಲ್ಲುವುದು ಹ್ಯೇಯಕೃತ್ಯ

ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ,ಜ ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ.

ಅಮಾಯಕ ಜನರನ್ನು ಹಾಡುಹಗಲೇ, ತಮ್ಮ ಕುಟುಂಬದವರ ಎದುರು ಕೊಲ್ಲುವುದು ಹ್ಯೇಯಕೃತ್ಯ. ಕಾಶ್ಮೀರದಲ್ಲಿ ಈ ಹಿಂದೆಯೂ ಪುಲ್ವಾಮಾ ಬಾಲಾಕೋಟ್ ಘಟನೆ ನಡೆದಿದ್ದು, ಪುನ: ಅಂತಹ ಘಟನೆ ಮರುಕಳಿಸಿದೆ. ಇಂತಹ ಘಟನೆ ನಡೆಯಲು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವೂ ಇರಬಹುದು ಎಂದರು.

ಕನ್ನಡಿಗರಾದ ಭರತ್ ಭೂಷಣ್ , ಮಂಜುನಾಥ್ ರಾವ್ ಹಾಗೂ ಬೆಂಗಳೂರಿನಲ್ಲಿ ನೆಲಿಸಿದ್ದ ಮಧುಸೂದನ್ ಅವರು ಮೃತಪಟ್ಟಿದ್ದಾರೆ. ಬೆಂಗಳೂರಿನ ಭರತ್ ಭೂಷಣ್ ಕುಟುಂಬದೊಂದಿಗೆ ಸಚಿವ ರಾಮಲಿಂಗಾರೆಡ್ಡಿಯವರನ್ನು ಹಾಗೂ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಕುಟುಂಬದವರನ್ನು ಸಚಿವ ಮಧುಬಂಗಾರಪ್ಪ ಅವರು ಭೇಟಿಯಾಗಿದ್ದು, ಕುಟುಂಬಕ್ಕೆ ಸಹಕಾರ ನೀಡುವಂತೆ ಸೂಚನೆ ನೀಡಲಾಗಿದೆ. ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ತಲಾ 10 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದು, ಕುಟುಂಬಕ್ಕೆ ಸರ್ಕಾರದ ಬೆಂಬಲವಿದೆ ಎಂದರು.

ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ಹಾಗೂ ಘಟನೆಯಲ್ಲಿ ಮೃತಪಟ್ಟವರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ಕರೆತರುವ ವ್ಯವಸ್ಥೆಗಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳ ತಂಡವನ್ನು ಕೂಡಲೇ ಕಳುಹಿಸಿಕೊಡಲಾಗಿತ್ತು. 175 ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದರು.

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೆಲವು ಕ್ರಮಗಳನ್ನು ಈಗಾಗಲೇ ಕೈಗೊಂಡಿದೆ. ಉಗ್ರರನ್ನು ಮಟ್ಟ ಹಾಕುವ ಇನ್ನೂ ಹೆಚ್ಚಿನ ಕ್ರಮಗಳಿಗೆ ರಾಜ್ಯಸರ್ಕಾರದ ಸಂಪೂರ್ಣ ಬೆಂಬಲವಿರಲಿದೆ ಎಂದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!