Malai Mahadeshwar Hill will now be free from drinking water: CM's announcement

ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿಎಂ ಘೋಷಣೆ

ಮಲೈ ಮಹದೇಶ್ವರ: ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಘೋಷಿಸಿದರು.

ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ಇತರೆ ನಿರ್ಣಯಗಳು.

*ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಒಂದೂವರೆ ವರ್ಷದಿಂದ ಜಾರಿ ಆಗದೇ ಇರುವುದಕ್ಕೆ ಮುಖ್ಯಮಂತ್ರಿಗಳು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರನ್ನು ತೀವ್ರವಾಗಿ ಪ್ರಶ್ನಿಸಿದರು.

*ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ AEE ಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಅವರಿಗೆ ಸೂಚಿಸಿದರು.

*ಹಿಂದಿನ‌ ಸಭೆಯ ನಿರ್ಣಯದಂತೆ ಪ್ರವಾಸಿಗರ ಶೆಲ್ಟರ್ ಮತ್ತು ಶೌಚಾಲಯಗಳ ಕಾಮಗಾರಿ ಪೂರ್ಣಗೊಳ್ಳದ ಬಗ್ಗೆ ಸಿಎಂ ತರಾಟೆಗೆ ತೆಗೆದುಕೊಂಡರು.

*ಪ್ರಾಧಿಕಾರ ಮತ್ತು ಮಹದೇಶ್ವರ ಬೆಟ್ಟಕ್ಕೆ ಸೇರಿದ ಜಾಗದಲ್ಲಿ ನೆಲೆಸಿರುವ 13 ಕುಟುಂಬಗಳಿಗೆ ಪರ್ಯಾಯ ಸ್ಥಳ ಒದಗಿಸಿ ಸ್ಥಳಾಂತರಿಸುವ ಮತ್ತು ಉಳಿದಿರುವವರನ್ನು ಹಾಗೇ ಉಳಿಸಿ, ಹೊಸದಾಗಿ ವಾಣಿಜ್ಯ ಉದ್ದೇಶದ ನಿರ್ಮಾಣಗಳಿಗೆ ಅವಕಾಶ ಆಗದಂತೆ ಖಚಿತವಾಗಿ ತಡೆಯುವ ಬಗ್ಗೆ ಚರ್ಚೆ ನಡೆಸಲಾಯಿತು.

*ಮಲೈ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಆಗುವುದನ್ನು ಸಂಪೂರ್ಣ ತಡೆಯಬೇಕು. ಚಾಳಿ ಬಿದ್ದ ಆರೋಪಿಯೊಬ್ಬ ಗಡಿಪಾರು ಆದರೂ ಅಕ್ರಮ ಮಾರಾಟ ಮಾಡುತ್ತಿರುವುದನ್ನು ಅಧಿಕಾರಿಗಳಿಂದ ತಿಳಿದ ಸಿಎಂ ಅವರನ್ನು ತಕ್ಷಣ ಕಠಿಣ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.

*ಪ್ರಾಧಿಕಾರದಲ್ಲಿ ಕೆಲಸ ಮಾಡುವ 66 ಕಾರ್ಮಿಕ ಕುಟುಂಬಗಳಿಗೆ ತಲಾ 20 ಲಕ್ಷ ವೆಚ್ಚದಲ್ಲಿ, ಒಟ್ಟು 12-13 ಕೋಟಿ ವೆಚ್ಚದಲ್ಲಿ ಆದಷ್ಟು ಬೇಗ ನೂತನ ಮನೆ ಕಟ್ಟಿ ಕೊಡಲು ಸಭೆ ನಿರ್ಣಯ.

*ಮಲೈ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ , ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದು. ಮದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸುವ ಬಗ್ಗೆ ಸಭೆ ನಿರ್ಣಯಿಸಿತು.

(ಸಭೆ ಮುಂದುವರೆದಿದೆ)

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ 800 ಕೋಟಿ ರೂ ಹೂಡಿಕೆ..!

ದೊಡ್ಡಬಳ್ಳಾಪುರದಲ್ಲಿ 800 ಕೋಟಿ ರೂ ಹೂಡಿಕೆ..!

ಕಳೆದ ವರ್ಷದ ಫೆಬ್ರುವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಿದ ನಂತರದ 11 ತಿಂಗಳ ಅವಧಿಯಲ್ಲಿ ರಾಜ್ಯವು 1.53 ಲಕ್ಷ ಕೋಟಿ ರೂ.ಗಳಷ್ಟು ಹೊಸ ಹೂಡಿಕೆಯ ಹಲವು ಕೈಗಾರಿಕಾ ಯೋಜನೆಗಳನ್ನು ಆಕರ್ಷಿಸಿದೆ ಎಂದು ಬೃಹತ್ ಮತ್ತು

[ccc_my_favorite_select_button post_id="118571"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ಪತಿಯ ಮೇಲಿನ ಕೋಪ: ಮಗುವಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

ಪತಿಯ ಮೇಲಿನ ಕೋಪ: ಮಗುವಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

ಜಗಳ ಮಾಡುತ್ತಿದ್ದ ಪತಿಯ ಮೇಲಿನ ಕೋಪಕ್ಕೆ ಬೆಂಕಿ ಹಚ್ಚಿಕೊಂಡು ತಾಯಿ ಮಗಳು ಮೃತಪಟ್ಟಿರುವ ದಾರುಣ ಘಟನೆ (Suicide) ಸಂಜಯನಗರದ ಕೃಷ್ಣಪ್ಪ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="118543"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!