Congress members don't see Hindus; this is the country's misfortune - BY Vijayendra

ಕಾಂಗ್ರೆಸ್ಸಿನವರಿಗೆ ಹಿಂದೂಗಳು ಕಾಣುತ್ತಿಲ್ಲ; ಇದು ದೇಶದ ದುರ್ದೈವ – ಬಿವೈ ವಿಜಯೇಂದ್ರ

ಬೆಂಗಳೂರು: ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು, ಪ್ರಿಯಾಂಕ್ ಖರ್ಗೆ ಅವರು ಹೊಣೆಯರಿತು ಮಾತನಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನೀವು ಕೇಂದ್ರದ ಬೇಹುಗಾರಿಕಾ ವೈಫಲ್ಯಗಳ ಬಗ್ಗೆ ಮಾತನಾಡುತ್ತೀರಿ. ಮಾನ್ಯ ಸಿದ್ದರಾಮಯ್ಯನವರೇ, ನೀವು ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಪ್ರಶ್ನೆ ಮಾಡಬೇಕಿದೆ. ಕಾಂಗ್ರೆಸ್ಸಿನವರು ಸ್ವಾತಂತ್ರ್ಯ ಬಂದ ಬಳಿಕ ಈ ದೇಶವನ್ನು 60 ವರ್ಷಗಳ ಕಾಲ ಆಡಳಿತ ನಡೆಸಿದ್ದಾರೆ. ಭಯೋತ್ಪಾದನೆಯನ್ನು ಈ ದೇಶದಿಂದ ಕಿತ್ತು ಹಾಕಲು ಕಾಂಗ್ರೆಸ್ ಪಕ್ಷಕ್ಕೆ ಯಾಕೆ ಸಾಧ್ಯವಾಗಿಲ್ಲ ಎಂದು ಕೇಳಲು ಸವಾಲೆಸೆದರು.

ಇದರ ಬಗ್ಗೆ ಚರ್ಚಿಸುವುದನ್ನು ಬಿಟ್ಟು, ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬ ಭಾರತೀಯರೂ ಒಟ್ಟಾಗಿ, ಒಂದಾಗಿ ನಿಲ್ಲಬೇಕಾಗಿದೆ. ಈ ಜಗತ್ತಿಗೆ ಒಂದು ಸ್ಪಷ್ಟ ಸಂದೇಶ ನೀಡಬೇಕಾಗಿದೆ ಎಂದು ತಿಳಿಸಿದರು.

ಭಯೋತ್ಪಾದನೆ ಎಂಬುದು ಕೇವಲ ಭಾರತಕ್ಕೆ ಸೀಮಿತವಾಗಿಲ್ಲ

ಇದು ಜಾಗತಿಕ ಸಮಸ್ಯೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿಜೀ ಅವರು ಯಾವುದೇ ದೇಶಕ್ಕೆ ಹೋದಾಗಲೂ ಉಗ್ರವಾದವನ್ನು ಜಗತ್ತು ಖಂಡಿಸಬೇಕು; ಬುಡಸಮೇತ ಕಿತ್ತು ಹಾಕಬೇಕೆಂದು ಬಲವಾಗಿ ಪ್ರತಿಪಾದನೆ ಮಾಡುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಅವರಿಗೆ ಕೇಳಲು ಬಯಸುತ್ತೇನೆ. ನೀವು ಮಲ್ಲಿಕಾರ್ಜುನ ಖರ್ಗೆ ಅವರ ಟ್ವೀಟ್ ನೋಡಿ. ಮಲ್ಲಿಕಾರ್ಜುನ ಖರ್ಗೆ ಅವರು ಟ್ವೀಟ್‍ನಲ್ಲಿ ಭಾರತೀಯ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ಮಾಡಿದ್ದಾಗಿ ಹೇಳಿದ್ದಾರೆ. ಪಾಪ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಿಂದೂ ಎಂದು ಅನಿಸಲೇ ಇಲ್ಲ.

ಉಗ್ರರು ಪ್ರತಿಯೊಬ್ಬರನ್ನು ಶೂಟ್ ಮಾಡಬೇಕಾದರೆ ಹಿಂದೂವೇ, ಮುಸಲ್ಮಾನರೇ ಎಂದು ಪತ್ತೆ ಹಚ್ಚಿ ಗುಂಡಿಟ್ಟು ಸಾಯಿಸಿದ್ದಾರೆ ಎಂದು ಟೀಕಿಸಿದರು. ಆದರೆ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇವಲ ಭಾರತೀಯ ಪ್ರವಾಸಿಗರಷ್ಟೇ ಕಾಣುತ್ತಿದ್ದಾರೆ.

ಕಾಂಗ್ರೆಸ್ಸಿನವರಿಗೆ ಹಿಂದೂಗಳು ಕಾಣುತ್ತಿಲ್ಲ

ಇದು ದೇಶದ ದುರ್ದೈವ ಎಂದು ಬೇಸರ ವ್ಯಕ್ತಪಡಿಸಿದರು. ರಾಜಕಾರಣ ಮಾಡುವುದನ್ನು ಬಿಡಬೇಕಿದೆ. ಪ್ರತಿಯೊಬ್ಬ ಭಾರತೀಯರೂ ಒಟ್ಟಾಗಿ, ಒಂದಾಗಿ ನಿಲ್ಲಬೇಕೆಂದು ಮನವಿ ಮಾಡಿದರು.
ಜಮ್ಮು ಕಾಶ್ಮೀರದ ಭಯೋತ್ಪಾದಕರ ದಾಳಿಯನ್ನು ಮೋದಿಜೀ ಅವರ ಸರಕಾರವು ಗಂಭೀರವಾಗಿ ಪರಿಗಣಿಸಿದೆ.

ಆರ್ಟಿಕಲ್ 370 ರದ್ದತಿ ಹಿಂದೆ ಕಾಶ್ಮೀರವನ್ನು ಸಹಜ ಸ್ಥಿತಿಗೆ ತರುವ ಸದುದ್ದೇಶ ಇತ್ತು. ಪ್ರವಾಸಿಗರನ್ನು ಗುರಿ ಮಾಡಿ, ಜಮ್ಮು ಕಾಶ್ಮೀರಕ್ಕೆ ವಿದೇಶಿ ಪ್ರವಾಸಿಗರು ಬರಬಾರದು; ಅಲ್ಲಿನ ಯುವಕರಿಗೆ ಉದ್ಯೋಗ ಸಿಗಬಾರದು; ಯುವಜನತೆ ಬೀದಿಗೆ ಬಂದು ಅವರನ್ನು ಭಯೋತ್ಪಾದನೆಗೆ ಬಳಸಿಕೊಳ್ಳಬೇಕೆಂಬ ದುರುದ್ದೇಶ ಇದರ ಹಿಂದಿದೆ ಎಂಬ ಚರ್ಚೆಗಳು ನಡೆದಿವೆ ಎಂದು ತಿಳಿಸಿದರು.

ರಾಜಕೀಯ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ ಚಪಲ; ಹೆಚ್.ಡಿ. ಕುಮಾರಸ್ವಾಮಿ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ

ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="118524"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!