ದೊಡ್ಡಬಳ್ಳಾಪುರ: ಕಸಾಪದಿಂದ ಮೇರುನಟ ಡಾ.ರಾಜ್‌ಕುಮಾರ್ ಜನ್ಮದಿನಾಚರಣೆ

Celebrated actor Dr. Rajkumar's birthday with Kasapa

ದೊಡ್ಡಬಳ್ಳಾಪುರ: ಡಾ.ರಾಜಕುಮಾರ್  (Dr.Rajkumar) ಅವರ ಕನ್ನಡ ನಾಡು, ನುಡಿಯ ಪ್ರೀತಿ ಅನನ್ಯವಾದದ್ದು. ಐತಿಹಾಸಿಕ ಪಾತ್ರಗಳ ಮೂಲಕ ಕರ್ನಾಟಕ ಇತಿಹಾಸದ ವೈಭವವನ್ನು ಮರುಸೃಷ್ಟಿ ಮಾಡಿದವರು ಎಂದು  ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.

ಅವರು‌ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ನಡೆದ  ಕನ್ನಡ ಅಭಿಮಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಡಾ.ರಾಜ್ ಕುಮಾರ್ ಗೋಕಾಕ್ ಚಳುವಳಿಯಲ್ಲಿ ಭಾಗವಹಿಸಿ ಕನ್ನಡಿಗರಲ್ಲಿ ಕನ್ನಡ ಪ್ರಜ್ಞೆಯನ್ನು ಎಚ್ಚರಿಸಿರುವುದನ್ನು ಕನ್ನಡಿಗರು ಎಂದು ಮರೆಯುವುದಿಲ್ಲ.
ಸರಳ, ಸಜ್ಜನ, ನಿಷ್ಠಾವಂತ, ಪ್ರಾಮಾಣಿಕ, ಅಪ್ರತಿಮ  ಕಲಾವಿದ  ಎಂದು  ಎಲ್ಲಾ  ಜನರ ಪ್ರೀತಿಗೆ ಪಾತ್ರರಾದ ಡಾ.ರಾಜಕುಮಾರ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ ಎಂದರು.

ಡಾ.ರಾಜ್ ಕುಮಾರ್ ಅವರು  ಅಮೇರಿಕ ಸಂಯುಕ್ತ ಸಂಸ್ಥಾನದಲ್ಲಿ ನೀಡಲಾಗುವ ಅತ್ಯುನ್ನತ ಗೌರವವಾದ ಕೆಂಟುಕಿ ಕರ್ನಲ್ ಪ್ರಶಸ್ತಿಯನ್ನು ಪಡೆದ ಏಕೈಕ ಭಾರತೀಯ ನಟರಾಗಿದ್ದಾರೆ. ಡಾ.ರಾಜಕುಮಾರ್ ತನಗೆ ಪ್ರೀತಿ, ಯಶಸ್ಸು ಹಾಗು ಬದುಕು ಕೊಟ್ಟ  ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಸ್ಮರಣೀಯ ಕಾಣಿಕೆ ನೀಡಿದ್ದಾರೆ.

ಡಾ.ರಾಜ್ ಕುಮಾರ್ ಅವರ ವೈಯಕ್ತಿಕ ಮತ್ತು ವೃತ್ತಿಪರ ರಂಗಗಳಲ್ಲಿ ಅವರ ಅತ್ಯಂತ ಶಿಸ್ತುಬದ್ಧ ಮತ್ತು ಸರಳ ಜೀವನಶೈಲಿಯನ್ನು ಎಲ್ಲರೂ ಗೌರವಪೂರ್ವಕವಾಗಿ ಸ್ಮರಿಸುತ್ತಾರೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ಮಾತನಾಡಿ, ಡಾ.ರಾಜ್ ಕುಮಾರ್  ಎಲ್ಲ ವರ್ಗದ ಪ್ರೇಕ್ಷಕರ ಮನಮುಟ್ಟುವ ಪಾತ್ರಗಳನ್ನು ಅಭಿನಯಿಸಿದ್ದಾರೆ. ಮೇರು ನಟರಾದ ಸಂದರ್ಭದಲ್ಲೂ ರೈತ, ಕೂಲಿಕಾರ, ವಾದ್ಯಗಾರ, ಲಾಯರ್, ಅಧ್ಯಾಪಕ ಮುಂತಾದ ನೂರಾರು ಪಾತ್ರಗಳನ್ನು   ಅಭಿನಯಿಸುವಾಗ ಸಾಕಷ್ಟು ಸಿದ್ದತೆ   ಮಾಡಿಕೊಳ್ಳುತ್ತಿದ್ದರು.

ನಟನೆ ಮತ್ತು ಗಾಯನ ಎರಡರಲ್ಲೂ  ಪ್ರಬುದ್ಧ ಕಲಾವಿದರಾದ ಡಾ.ರಾಜ್ ಕುಮಾರ್ ಎಲ್ಲಾ ಕಲಾವಿದರಿಗೂ ಮಾದರಿ ಆಗಿದ್ದಾರೆ. ಕನ್ನಡಿಗರ ಮನಸ್ಸಿನಲ್ಲಿ  ಡಾ.ರಾಜ್ ಕುಮಾರ್ ಶಾಶ್ವತ ಸ್ಥಾನ ಪಡೆದುಕೊಂಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಕನ್ನಡಪರ ಹಿರಿಯ ಹೋರಾಟಗಾರರುಗಳಾದ ಗುರುರಾಜಪ್ಪ,  ಟಿ.ಜಿ.ಮಂಜುನಾಥ್, ಜಿಲ್ಲಾ  ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ನಿಕಟಪೂರ್ವ  ಕೋಶಾಧ್ಯಕ್ಷ ನಂ.ಮಹಾದೇವ್, ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ‌‌ ಆಯುಕ್ತ ವೆಂಕಟರಾಜು, ಸೂರ್ಯ ಪದವಿಪೂರ್ವ ಕಾಲೇಜು ಪ್ರಾಚಾರ್ಯ  ಎಂ.ಸಿ.ಮಂಜುನಾಥ್,  ಡಾ.ಬಿ.ಆರ್.ಅಂಬೇಡ್ಕರ್  ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಅಣ್ಣಯ್ಯ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್,   
ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು.

ಕಸಬಾ ಹೋಬಳಿ ಘಟಕದ ಅಧ್ಯಕ್ಷ ದಾದಾಪೀರ್, ಪ್ರತಿನಿಧಿ ನಾಗರತ್ನಮ್ಮ, ಷಫೀರ್, ಕನ್ನಡ ಜಾಗೃತ ವೇದಿಕೆ ಜಿಲ್ಲಾ ಅಧ್ಯಕ್ಷ ನಾಗರಾಜು, ಕಲಾವಿದರಾದ   ದರ್ಗಾಜೋಗಿಹಳ್ಳಿ ಮಲ್ಲೇಶ್, ರಾಮಕೃಷ್ಣ  ಮುಂತಾದವರು ಭಾಗವಹಿಸಿದ್ದರು.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]