ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

The entire country is following the Karnataka Congress model: DCM D.K. Shivakumar

ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮವನ್ನು ಏಪ್ರಿಲ್ 27 ರಂದು ಬೆಳಿಗ್ಗೆ 11-00 ಗಂಟೆಗೆ ಆಯೋಜಿಸಲಾಗಿದೆ.

ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿ ಉದ್ಘಾಟಿಸಲಿದ್ದಾರೆ.

ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರ ಘನ ಉಪಸ್ಥಿತಿ, ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್, ಕಾನೂನು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ ಪಾಟೀಲ್, ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರು ವಿಶೇಷ ಉಪಸ್ಥಿತಿ ಇರಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ವಹಿಸಲಿದ್ದಾರೆ.

ಸಿದ್ಧತೆ ಕೈಗೊಳ್ಳಿ:ಸಚಿವ ಮುನಿಯಪ್ಪ

ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣೆಗೆ ಮಾನ್ಯ ಮುಖ್ಯಮಂತ್ರಿಗಳಾದ ಕೆ.ಹೆಚ್ ಮುನಿಯಪ್ಪ ಅವರು ಏಪ್ರಿಲ್ 27 ರಂದು ಜಿಲ್ಲೆಗೆ ಆಗಮಿಸುತ್ತಿದ್ದು ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ಈ ಸಂಬಂಧ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಸಚಿವರು ಏಪ್ರಿಲ್ 28 ಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮವು ಒಂದು ದಿನ ಮುಂಚಿತವಾಗಿ ಏಪ್ರಿಲ್ 27 ಕ್ಕೆ ಪೂರ್ವ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ತಪ್ಪದೇ ನಿರ್ವಹಿಸಿ ಎಂದರು.

ಆಯಾ ಇಲಾಖೆಗಳು ಫಲಾನುಭವಿಗಳನ್ನು ಕರೆ ತರಬೇಕು. ಶಿಷ್ಟಾಚಾರದಂತೆ ಸಚಿವರು, ಶಾಸಕರು ಜನಪ್ರತಿನಿಧಿಗಳನ್ನು ಆಹ್ವಾನಿಸಿ. ಫಲಾನುಭವಿಗಳ ಸವಲತ್ತು ವಿತರಣೆಗೆ ಆಯಾ ಇಲಾಖೆಗಳು ಸಿದ್ಧತೆ ಮಾಡಿಕೊಳ್ಳಿ, ಕಾರ್ಯಕ್ರಮದಲ್ಲಿ ಯಾವುದೇ ಸಮಸ್ಯೆ, ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ, ಎಸ್ಪಿ ಸಿ.ಕೆ ಬಾಬಾ, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]